ನಾಲ್ಕು ದಿನಗಳ ಕಾಲ ದ.ಕ., ಉ.ಕ., ಉಡುಪಿ ಸಹಿತ ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ

ಸಾಂದರ್ಭಿಕ ಚಿತ್ರ
ಬೆಂಗಳೂರು : ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ನಾಳೆಯಿಂದ(ಮೇ 27) ಮೇ 30ರವರೆಗೆ ರಾಜ್ಯದಲ್ಲಿ ಮಳೆಯಾಗಲಿದ್ದು, ಕರಾವಳಿ ಹಾಗೂ ಮಲೆನಾಡಿನ ಆರು ಜಿಲ್ಲೆಗಳಲ್ಲಿ ನಾಲ್ಕು ದಿನಗಳ ಕಾಲ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ರೆಡ್ ಅಲರ್ಟ್ ನೀಡಲಾಗಿದೆ. ಬೆಳಗಾವಿ, ಬೀದರ್, ಕಲಬುರಗಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದ್ದು, ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ. ಯಾದಗಿರಿ, ಬಾಗಲಕೋಟೆ, ಹಾಸನದಲ್ಲಿಯೂ ಮಳೆಯಾಗಲಿದ್ದು, ಯಲ್ಲೋ ಅಲರ್ಟ್ ನೀಡಲಾಗಿದೆ. ಇನ್ನು ಬೆಂಗಳೂರು ಸೇರಿ ದಕ್ಷಿಣ ಒಳನಾಡಿನಲ್ಲಿ ಸಾಧಾರಣದಿಂದ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Next Story





