ಆರು ದಿನಗಳ ಕಾಲ ಕರಾವಳಿ, ಮಲೆನಾಡಿನ ಜಿಲ್ಲೆಗಳಿಗೆ ರೆಡ್ ಅಲರ್ಟ್

ಸಾಂದರ್ಭಿಕ ಚಿತ್ರ
ಬೆಂಗಳೂರು : ರಾಜ್ಯದಲ್ಲಿ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿದ್ದು, ಇದರ ಪರಿಣಾಮವಾಗಿ ಮುಂದಿನ ಆರು ದಿನಗಳ ಕಾಲ ಉತ್ತಮ ಮಳೆಯಾಗಲಿದೆ. ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಹಾಗೂ ಮಲೆನಾಡು ಜಿಲ್ಲೆಗಳಾದ ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಜೂ.18ರವರೆಗೆ ಭಾರೀ ಮಳೆಯಾಗಲಿದ್ದು, ಆರು ದಿನಗಳ ಕಾಲ ರೆಡ್ ಅಲರ್ಟ್ ನೀಡಲಾಗಿದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಕೊಪ್ಪಳ, ದಾವಣಗೆರೆ, ಮೈಸೂರು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದ್ದು, ಜೂ.18ರವರೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
Next Story





