Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯ ಶಿಕ್ಷಣ ನೀತಿ ಆಯೋಗದ ಶಿಫಾರಸು ;...

ರಾಜ್ಯ ಶಿಕ್ಷಣ ನೀತಿ ಆಯೋಗದ ಶಿಫಾರಸು ; ಪದವಿಯನ್ನು ಮೂರು ವರ್ಷಕ್ಕೆ ಇಳಿಸಿ ಸರಕಾರ ಆದೇಶ

ವಾರ್ತಾಭಾರತಿವಾರ್ತಾಭಾರತಿ8 May 2024 6:16 PM IST
share
ರಾಜ್ಯ ಶಿಕ್ಷಣ ನೀತಿ ಆಯೋಗದ ಶಿಫಾರಸು ; ಪದವಿಯನ್ನು ಮೂರು ವರ್ಷಕ್ಕೆ ಇಳಿಸಿ ಸರಕಾರ ಆದೇಶ

ಬೆಂಗಳೂರು : ಶಿಕ್ಷಣ ತಜ್ಞ ಪ್ರೊ. ಸುಖದೇವ್ ಥೋರಟ್ ಅಧ್ಯಕ್ಷತೆಯಲ್ಲಿ ರಚಿಸಿದ್ದ ರಾಜ್ಯ ಶಿಕ್ಷಣ ನೀತಿ ಆಯೋಗವು ವರದಿಯನ್ನು ಸಲ್ಲಿಸಿದ್ದು, ಆಯೋಗದ ಶಿಫಾರಸುಗಳಂತೆ ಪದವಿಯನ್ನು ಮೂರು ವರ್ಷಕ್ಕೆ ಇಳಿಸಿ ರಾಜ್ಯ ಸರಕಾರವು ಬುಧವಾರದಂದು ಆದೇಶ ಹೊರಡಿಸಿದೆ.

ಸ್ನಾತಕ ಪದವಿ ಕಾರ್ಯಕ್ರಮದ ಕಾಲಾವಧಿ ಕೇವಲ ಮೂರು ವರ್ಷಗಳು ಮಾತ್ರ ಆಗಿದ್ದು, ನಾಲ್ಕು ವರ್ಷದ ಪದವಿ ಕಾರ್ಯಕ್ರಮವನ್ನು ಪ್ರಾರಂಭಿಸುವ ಆಯ್ಕೆ ಇರುವುದಿಲ್ಲ. ಈ ಮೊದಲು ನಾಲ್ಕು ವರ್ಷದ ಪದವಿಯು ಆಯ್ಕೆಯಾಗಿತ್ತು ಎಂದು ಆದೇಶದಲ್ಲಿ ತಿಳಿಸಿದೆ.

ಮೂರು ಬೇರೆ ಬೇರೆ ಪದವಿ ಪಠ್ಯಕ್ರಮದ ಚೌಕಟ್ಟುಗಳನ್ನು ಪ್ರಸ್ತಾಪಿಸಿ ಅಂಗೀಕರಿಸಲಾಗಿದೆ. ಎಲ್ಲ 6 ಸೆಮಿಸ್ಟರ್ ಗಳಲ್ಲಿ 3 ಮೇಜರ್ ಗಳೊಡನೆ ಸಾಮಾನ್ಯ ಪದವಿ ಇರಲಿದೆ. 4ನೆ ಸೆಮಿಸ್ಟರ್ ವರೆಗೆ 3 ಮೇಜರ್ ಗಳು ಮತ್ತು 5 ಹಾಗೂ 6ನೆ ಸೆಮಿಸ್ಟರ್ ಗಳಲ್ಲಿ 1 ವಿಷಯದಲ್ಲಿ ವಿಶೇಷಜ್ಞತೆ(ಸ್ಪೆಷಲೈಜೇಷನ್) ಇರಲಿದೆ. ಮೊದಲನೇ ಸೆಮಿಸ್ಟರ್ ನಿಂದ ಮೈನರ್ ಸಬ್ಜೆಕ್ಟ್‌ ಗಳ ಜೊತೆಗೆ 1 ವಿಷಯದಲ್ಲಿ ವಿಶೇಷಜ್ಞತೆ ಇರಲಿದೆ ಎಂದು ಆದೇಶದಲ್ಲಿ ತಿಳಿಸಿದೆ.

ಮೊದಲನೇ ವರ್ಷದ ನಂತರ ಸರ್ಟಿಫಿಕೇಟ್ ನೀಡುವ ಹಾಗೂ ಎರಡನೆ ವರ್ಷದ ನಂತರ ಡಿಪ್ಲೊಮಾ ನೀಡುವ(ಬಹು ಆಗಮನ/ನಿರ್ಗಮನ) ಕುರಿತು, ಅಂತಿಮ ವರದಿ ಸಲ್ಲಿಕೆಯಾದ ನಂತರ ಶಿಫಾರಸುಗಳನ್ನು ಅನುಷ್ಠಾನಗೊಳಿಸುವ ಕುರಿತು ಸರ್ಕಾರ ತೀರ್ಮಾನ ಕೈಗೊಳ್ಳುತ್ತದೆ. ಆದರೆ ಈ ಹಂತದಲ್ಲಿಲ್ಲ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಪಠ್ಯಕ್ರಮ ರಚನೆಯಲ್ಲಿನ ಬದಲಾವಣೆಯ ಮೂಲಕ ಆಳವಾದ ಜ್ಞಾನ, ಔದ್ಯಮಿಕ ಆಧಾರಿತ ಕೊರ್ಸ್‍ಗಳನ್ನು ಮತ್ತು ಪ್ರಾದೇಶಿಕ ನಿರ್ದಿಷ್ಟ ವಿಷಯಗಳನ್ನು ವಿಶ್ವವಿದ್ಯಾಲಯಗಳ ಅಧ್ಯಯನ ಮಂಡಳಿಗೆ ಸ್ವಾಯತ್ತತೆಯನ್ನು ನೀಡುವುದನ್ನು ಕೇಂದ್ರೀಕರಿಸಲಾಗಿದೆ. ಅಪ್ರೆಂಟೀಸ್‍ಶಿಪ್-ಎಂಬೆಡೆಡ್ ಡಿಗ್ರಿ ಕೋರ್ಸ್‍ಗಳನ್ನು ಪಠ್ಯಕ್ರಮದ ಭಾಗವಾಗಿ ಪರಿಗಣಿಸಲಾಗಿದೆ.

ಈ ಬದಲಾವಣೆಗಳು 2021-22, 2022-23, 2023-24ನೆ ವರ್ಷಗಳಲ್ಲಿ ಪ್ರವೇಶಾತಿ ಪಡೆದ ಪ್ರಸ್ತುತ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ, 2021ರ ಆ.7ರ ಆದೇಶದಂತೆ ಅವರು ವಿದ್ಯಾಭ್ಯಾಸ ಮಾಡುತ್ತಾರೆ. ಘೋಷಣೆ ಮಾಡಲ್ಪಟ್ಟಿರುವ ಬದಲಾವಣೆಗಳು ಶೈಕ್ಷಣಿಕ ವರ್ಷ 2024-25ರಿಂದ ಪ್ರವೇಶಾತಿ ಪಡೆಯುವ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯಿಸುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ.

ಸಂಯೋಜನೆ ಮತ್ತು ಪ್ರವೇಶಾತಿ ಪ್ರಕ್ರಿಯೆಗಳು: ವಿಶ್ವವಿದ್ಯಾಲಯಗಳಿಗೆ ಸಂಯೋಜನಾ ಪ್ರಕ್ರಿಯೆ ಮತ್ತು ಪ್ರವೇಶಾತಿಗಳು ಈ ಕೂಡಲೇ ಪ್ರಾರಂಭಗೊಳ್ಳುತ್ತವೆ. ಸರಕಾರದ ಆದೇಶದಂತೆ ಪ್ರವೇಶಾತಿ ಪ್ರಕ್ರಿಯೆಯನ್ನು ನಡೆಸಲಾಗುತ್ತದೆ. ಈ ಕುರಿತು ಈಗಾಗಲೇ ಎಲ್ಲ ವಿಶ್ವವಿದ್ಯಾಲಯಗಳಿಗೆ ಮಾಹಿತಿ ನೀಡಲಾಗಿದ್ದು, ಕಾಲೇಜುಗಳಿಗೆ ಸ್ಪಷ್ಟೀಕರಣ ಬೇಕಾದಲ್ಲಿ ತಮ್ಮ ಸಂಯೋಜಕ ವಿಶ್ವವಿದ್ಯಾಲಯಗಳನ್ನು ಕೇಳಬಹುದಾಗಿದೆ ಎಂದು ತಿಳಿಸಿದೆ.

2024-25ನೇ ಶೈಕ್ಷಣಿಕ ಸಾಲಿನ ಸಂಯೋಜನಾ ಪ್ರಕ್ರಿಯೆಯು ಸಂಬಂಧಪಟ್ಟ ವಿಶ್ವವಿದ್ಯಾಲಯಗಳ ಸಂಯೋಜಿತ ಕಾಲೇಜುಗಳಿಗೆ ಇಂದು(ಮೇ 9) ಯುಯುಸಿಎಂಎಸ್ ತಂತ್ರಾಂಶದ ಮೂಲಕ ಪ್ರಾರಂಭವಾಗುತ್ತದೆ ಎಂದು ಪ್ರಕಟನೆ ತಿಳಿಸಿದೆ.

2024-25ನೇ ಶೈಕ್ಷಣಿಕ ಸಾಲಿನಿಂದ ಪದವಿ ಕಾರ್ಯಕ್ರಮಗಳಿಗೆ ಸಂಬಂಧಪಟ್ಟಂತೆ ರಾಜ್ಯ ಶಿಕ್ಷಣ ನೀತಿ ಆಯೋಗವು ನೀಡಿರುವ ಮಧ್ಯಂತರ ವರದಿಗಳ ಶಿಫಾರಸುಗಳಂತೆ ಪದವಿ ಅವಧಿ ಹಾಗೂ ಪಠ್ಯಕ್ರಮ ರಚನೆಗೆ ಸಂಬಂಧಪಟ್ಟಂತೆ ಸರಕಾರವು ಇದೀಗ ಆದೇಶ ಹೊರಡಿಸಿದೆ. ಆಯೋಗವು 2024ರ ಆಗಸ್ಟ್‌ ನಲ್ಲಿ ಅಂತಿಮ ವರದಿಯನ್ನು ಸಲ್ಲಿಸಲಿದೆ.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X