Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯಗಳಿಗೆ ಅನುದಾನ ಹಂಚಿಕೆ ಹೆಚ್ಚಿಸಲು...

ರಾಜ್ಯಗಳಿಗೆ ಅನುದಾನ ಹಂಚಿಕೆ ಹೆಚ್ಚಿಸಲು ಯುಪಿಎ ಅವಧಿಯಲ್ಲಿ ನಿರಾಕರಿಸಲಾಗಿತ್ತು: ಬೊಮ್ಮಾಯಿ‌ ಆರೋಪ

ವಾರ್ತಾಭಾರತಿವಾರ್ತಾಭಾರತಿ23 Feb 2024 3:06 PM IST
share
ರಾಜ್ಯಗಳಿಗೆ ಅನುದಾನ ಹಂಚಿಕೆ ಹೆಚ್ಚಿಸಲು ಯುಪಿಎ ಅವಧಿಯಲ್ಲಿ ನಿರಾಕರಿಸಲಾಗಿತ್ತು: ಬೊಮ್ಮಾಯಿ‌ ಆರೋಪ

ಬೆಂಗಳೂರು: ಸ್ವಾತಂತ್ರ್ಯ ಬಂದಾಗಿನಿಂದ 55 ವರ್ಷ ದೇಶ ಆಳಿರುವ ಕಾಂಗ್ರೆಸ್ ಅವಧಿಯಲ್ಲಿ ರಾಜ್ಯಗಳಿಗೆ ಕೇವಲ ಶೇ 20 ರಷ್ಟು ಮಾತ್ರ ಅನುದಾನ ಬರುತ್ತಿತ್ತು. ಆದರೆ ನರೇಂದ್ರ ಮೋದಿಯವರು ಅಧಿಕಾರಕ್ಕೆ ಬಂದ ಮೇಲೆ ರಾಜ್ಯಗಳಿಗೆ ಶೇ 42% ರಷ್ಟು ಅನುದಾನ ಬರುತ್ತಿದೆ. ಕಾಂಗ್ರೆಸ್ ನವರು ಕೇಂದ್ರದ ವಿರುದ್ದ ಅನಗತ್ಯ ಆರೋಪ ಮಾಡಿ ರಾಜ್ಯದ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ರಾಜ್ಯ ವಿಧಾನಸಭೆಯಲ್ಲಿ ಕೇಂದ್ರ ಸರಕಾರದ ವಿರುದ್ದ ಕಾಂಗ್ರೆಸ್ ಮಂಡಿಸಿರುವ ನಿರ್ಣಯದ ವಿರುದ್ಧ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರು ಕೇಂದ್ರ ಸರಕಾರದ ವಿರುದ್ದ ನಿರ್ಣಯ ಮಂಡಿಸಿ ವಿಧಾನಸಭೆಯ ಪಾವಿತ್ರ್ಯತೆಯನ್ನು ಹಾಳು ಮಾಡಿ ಸುಳ್ಳು ಹೇಳುವ ದಾಷ್ಟ್ಯ ತೋರಿಸಿದ್ದಾರೆ. ಕೇಂದ್ರದಿಂದ ಅನ್ಯಾಯವಾಗಿದೆ ಅಂತ ರಾಜ್ಯದ ಜನರ ದಾರಿ ತಪ್ಪಿಸುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ರಾಜ್ಯದ ತೆರಿಗೆ ಕಾಂಗ್ರೆಸ್ ಆಡಳಿತದಲ್ಲಿ 20% ರಷ್ಟು ಮಾತ್ರ ಇತ್ತು. ಆಗ ರಾಮಕೃಷ್ಣ ಹೆಗಡೆ ನೇತೃತ್ವದಲ್ಲಿ ದಕ್ಷಿಣ ಭಾರತದ ಅನೇಕ ನಾಯಕರು ಸೇರಿ ರಾಜ್ಯಗಳ ತೆರಿಗೆ ಹೆಚ್ಚಳ ಮಾಡುವಂತೆ ಹೋರಾಟ ಮಾಡಲಾಯಿತು. ಆದರೆ, ಯುಪಿಎ ಅವಧಿಯಲ್ಲಿ ರಾಜ್ಯಗಳ ತೆರಿಗೆ ಅನುದಾನ ಹೆಚ್ಚಳ ಮಾಡಲು ನಿರಾಕರಿಸಿದ್ದರು‌. ನರೇಂದ್ರ ಮೋದಿಯವರು ಬಂದು ಕೆಲವೇ ವರ್ಷದಲ್ಲಿ ರಾಜ್ಯಗಳ ತೆರಿಗೆ ಪಾಲನ್ನು ಶೇ 32% ರಿಂದ‌ ಶೇ 42% ಕ್ಕೆ ಹೆಚ್ಚಳ‌ ಮಾಡಿದ್ದಾರೆ ಎಂದು ವಿವರಿಸಿದರು.

ಕೇಂದ್ರದಿಂದ ರಾಜ್ಯಕ್ಕೆ ಕೇವಲ ಜಿಎಸ್ ಟಿ ಪರಿಹಾರ, ಅನುದಾನ ಅಷ್ಟೇ ಅಲ್ಲದೇ ಕೇಂದ್ರ ಪ್ರಾಯೋಜಿತ ಯೋಜನೆಗಳಿಗೆ ಅನುದಾನ ಬರುತ್ತದೆ. ಅಲ್ಲದೇ, ಕೇಂದ್ರ ಸರಕಾರ ಫಲಾನುಭವಿಗಳ ಅಕೌಂಟ್ ಗೆ ನೇರವಾಗಿ ಹಣ ಹಾಕುತ್ತದೆ. ರಾಜ್ಯ ಸರಕಾರ ಅದೆಲ್ಲವನ್ನು ಮುಚ್ಚಿಟ್ಟು ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಸುಳ್ಳು ಹೇಳುತ್ತಿದೆ. ಬೆಂಗಳೂರಿನ ಫೆರಿಪೆರಲ್ ರಿಂಗ್ ರೊಡ್ ಗೆ ಕೇಂದ್ರದಿಂದ ಈಗಲೂ ಹಣ ಬರುತ್ತದೆ. ಆದರೆ, ರಾಜ್ಯ ಸರಕಾರ ಯೋಜನೆ‌ ಆರಂಭಿಸಬೇಕು. ರಾಷ್ಟ್ರೀಯ ಹೆದ್ದಾರಿಗೆ ಸುಮಾರು 13 ಸಾವಿರ ಕೋಟಿ ರೂ. ಕೇಂದ್ರ ಸರಕಾರ ನೀಡಿದೆ. ರೈಲ್ವೆ ಯೋಜನೆಗಳಿಗೆ ಕೇಂದ್ರದ ಅನುದಾನ ಬಂದಿದೆ. ಪ್ರಧಾನಮಂತ್ರಿ ಅವಾಸ್ ಯೋಜನೆ, ಸ್ವಚ್ಚ ಭಾರತ್, ಆಯುಷ್ಮಾನ್ ಭಾರತ, ಅಮೃತ ನಗರ ಯೊಜನೆ ಅಡಿಯಲ್ಲಿ ರಾಜ್ಯಕ್ಕೆ ಹಣ ಬಂದಿದೆ ಎಂದು ಹೇಳಿದರು.

ಕಳೆದ ಐದು ವರ್ಷದಲ್ಲಿ ಕೇಂದ್ರದಿಂದ ಜಿಎಸ್‌ಟಿ ಪರಿಹಾರ 1.06 ಲಕ್ಷ ಕೋಟಿ ರೂ. ಬಂದಿದೆ. 15 ನೇ ಹಣಕಾಸು ಆಯೋಗದ ಅವಧಿ ಇನ್ನೂ 2026 ರ ವರೆಗೆ ಇದೆ. ಇನ್ನೂ 1 ಲಕ್ಷ ಕೋಟಿಗೂ ಹೆಚ್ಚು ಹಣ ಬರುತ್ತದೆ. ಕೇಂದ್ರ ಸರಕಾರ ಜಿಎಸ್‌ಟಿ ಪರಿಹಾರನ್ನು ಶೇ 14% ರಷ್ಟು 2022 ರವರೆಗೆ ನೀಡಿದೆ. ಜಿಎಸ್ ಟಿ ಪರಿಹಾರ ಅವಧಿ ಮುಗಿದರೂ, ರಾಜ್ಯ ಸರಕಾರ ಅದನ್ನು 2023-24 ರ ವರೆಗೆ ಸೇರಿಸಿ ಜನರ ದಾರಿ ತಪ್ಪಿಸುತ್ತಿದ್ದಾರೆ. ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಕೇಂದ್ರ ರಾಜ್ಯದ ನಡುವೆ ಸಂಘರ್ಷ ಉಂಟು ಮಾಡುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X