Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನೋಂದಣಿ ಮತ್ತು ಮುದ್ರಾಂಕ ಶುಲ್ಕ...

ನೋಂದಣಿ ಮತ್ತು ಮುದ್ರಾಂಕ ಶುಲ್ಕ ಪರಿಷ್ಕರಣೆ

ವಾರ್ತಾಭಾರತಿವಾರ್ತಾಭಾರತಿ30 Aug 2025 5:59 PM IST
share
ನೋಂದಣಿ ಮತ್ತು ಮುದ್ರಾಂಕ ಶುಲ್ಕ ಪರಿಷ್ಕರಣೆ

ಬೆಂಗಳೂರು, ಆ. 30 : ರಾಜ್ಯ ಸರಕಾರವು ನಾಳೆ(ಆ.31)ಯಿಂದ ಜಾರಿಗೊಳಿಸುತ್ತಿರುವ ಸ್ಥಿರಾಸ್ತಿ ಮೇಲಿನ ವ್ಯವಹಾರಗಳ ದಸ್ತಾವೇಜುಗಳಿಗೆ ವಿಧಿಸುತ್ತಿರುವ ನೋಂದಣಿ ಮತ್ತು ಮುದ್ರಾಂಕ ಶುಲ್ಕವು ನೆರೆ ರಾಜ್ಯಗಳಲ್ಲಿರುವ ದರಗಳಿಗಿಂತ ಪ್ರಸ್ತುತ ಕಡಿಮೆ ಶುಲ್ಕ ಇದ್ದು, ಅದನ್ನು ಇತರೆ ರಾಜ್ಯಗಳ ಶುಲ್ಕಗಳೊಂದಿಗೆ ಸಮೀಕರಣ ಮಾಡಿ ಪರಿಷ್ಕರಿಸಲಾಗುತ್ತಿದೆ ಎಂದು ನೋಂದಣಿ ಮತ್ತು ಮುದ್ರಾಂಕ ಶುಲ್ಕ ಆಯುಕ್ತ ಮುಲೈ ಮುಗಿಲನ್ ತಿಳಿಸಿದ್ದಾರೆ.

ಶನಿವಾರ ಈ ಕುರಿತು ಪ್ರಕಟಣೆ ನೀಡಿರುವ ಅವರು, ‘ಮುದ್ರಾಂಕ, ನೋಂದಣಿ ಹಾಗೂ ಇತರೆ ಸೆಸ್ ಸೇರಿ ಕರ್ನಾಟಕ ರಾಜ್ಯವು ಶೇ.6.6ರಷ್ಟು ವಿಧಿಸುತ್ತಿತ್ತು. ಇದೇ ಅವಧಿಯಲ್ಲಿ ಈ ಶುಲ್ಕವು ತಮಿಳುನಾಡು ರಾಜ್ಯದಲ್ಲಿ ಶೇ.9, ಕೇರಳ ಶೇ.10, ಆಂಧ್ರಪ್ರದೇಶ ಶೇ.7.5, ತೆಲಂಗಾಣ ರಾಜ್ಯಗಳು ಶೇ.7.5ರಷ್ಟು ಶುಲ್ಕ ವಿಧಿಸುತ್ತಿವೆ ಎಂದು ಮಾಹಿತಿ ನೀಡಿದ್ದಾರೆ.

ದಸ್ತಾವೇಜುಗಳ ಮೇಲಿನ ಮುದ್ರಾಂಕ ಶುಲ್ಕ ಮತ್ತು ನೋಂದಣಿ ಶುಲ್ಕಗಳನ್ನು ಇತರೆ ರಾಜ್ಯಗಳೊಂದಿಗೆ ಸಮೀಕರಿಸಿಗೊಳ್ಳಲು ಆಡಳಿತಾತ್ಮಕ ಪ್ರಕ್ರಿಯೆಗಳನ್ನು ಬಲಪಡಿಸಲು ಮತ್ತು ನಾಗರಿಕರಿಗೆ ಉತ್ತಮ ಹಾಗೂ ಪರಿಣಾಮಕಾರಿ ಸೇವೆಯನ್ನು ನೀಡಲು ರಾಜ್ಯ ಸರಕಾರವು ಆಗಸ್ 31ರಿಂದ ಜಾರಿಗೆ ಬರುವಂತೆ ನೋಂದಣಿ ಶುಲ್ಕವನ್ನು ಶೇ.1ರಿಂದ ಶೇ.2ರಷ್ಟು ಪರಿಷ್ಕರಿಸಿದೆ ಎಂದು ಅವರು ತಿಳಿಸಿದ್ದಾರೆ.

ಪರಿಷ್ಕೃತ ನೋಂದಣಿ ಶುಲ್ಕವನ್ನು ಸುಗಮವಾಗಿ ಇಲಾಖೆಯ ಅಧಿಕೃತ ಪೋರ್ಟಲ್ ಮೂಲಕ ಪಾವತಿಸಲು ಹಿಂದಿನ ನೋಂದಣಿ ಶುಲ್ಕವನ್ನು ಪಾವತಿಸಿ ಈಗಾಗಲೇ ದಸ್ತಾವೇಜುಗಳ ನೋಂದಣಿಗೆ ಅಪಾಯಿಂಟ್‍ಮೆಂಟ್ ಪಡೆದಿರುವವರು ಅಥವಾ ಶುಲ್ಕವನ್ನು ಪಾವತಿಸಿ ಅಪಾಯಿಂಟ್‍ಮೆಂಟ್ ಪಡೆಯದಿರುವವರು, ವ್ಯತ್ಯಾಸದ ಮೊತ್ತವನ್ನು ಇಲಾಖೆಯ ಅಧಿಕೃತ ಪೋರ್ಟಲ್ ಮೂಲಕ ಪಾವತಿಸಬೇಕು.

ಮೊದಲು ಬಳಸಿದ ಲಾಗಿನ್ ಮೂಲಕವೇ ಈ ಪಾವತಿಯನ್ನು ಮಾಡಬೇಕು. ಅರ್ಜಿದಾರರಿಗೆ ನೆರವಾಗುವ ದೃಷ್ಟಿಯಿಂದ ಅಗತ್ಯ ಸೂಚನೆಗಳನ್ನು ಒಳಗೊಂಡ ಎಸ್‍ಎಂಎಸ್ ನೇರವಾಗಿ ಅವರ ನೋಂದಾಯಿತ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುವುದು. ಈಗಾಗಲೇ ದಸ್ತಾವೇಜುಗಳ ನೋಂದಣಿಗೆ ಸಲ್ಲಿಸಲಾಗಿರುವ ಹಾಗೂ ಪರಿಶೀಲನೆಯಲ್ಲಿರುವ ದಸ್ತಾವೇಜುಗಳಿಗೆ ನೋಂದಣಿ ಶುಲ್ಕವನ್ನು ಮರು ಲೆಕ್ಕ ಹಾಕಲಾಗುವುದು ಮತ್ತು ಪರಿಷ್ಕೃತ ಶೇ.2ರಂತೆ ನೋಂದಣಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಈ ವರ್ಗದ ಅರ್ಜಿದಾರರಿಗೆ ಪಾವತಿಯ ಪ್ರಕ್ರಿಯೆ ಪೂರ್ಣಗೊಳ್ಳುವ ಮೊದಲು ಪರಿಷ್ಕೃತ ನೋಂದಣಿ ಶುಲ್ಕದ ವಿವರವನ್ನು ತಿಳಿಸಲಾಗುವುದು.

ಇಲಾಖೆಯು ದಸ್ತಾವೇಜುಗಳ ನೋಂದಣಿ ಪ್ರಕ್ರಿಯೆಯಲ್ಲಿ ವಿಳಂಬವಾಗುವುದನ್ನು ತಪ್ಪಿಸಲು ಎಲ್ಲ ಅರ್ಜಿದಾರರಿಗೆ ಮೇಲ್ಕಾಣಿಸಿದ ನವೀಕರಿಸಿದ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ತಿಳಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಹಂತ-ಹಂತವಾಗಿ ಅನುಸರಿಸಬಹುದಾದ ವಿವರವಾದ ಸೂಚನೆಗಳನ್ನು ಇಲಾಖೆಯ ಅಧಿಕೃತ ಪೋರ್ಟಲ್‍ನಲ್ಲಿ ಲಭ್ಯವಾಗುವಂತೆ ಕಲ್ಪಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X