Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಜು.1ರಿಂದ ಗ್ರಾ.ಪಂ.ಗಳಲ್ಲಿ ಜನನ, ಮರಣ...

ಜು.1ರಿಂದ ಗ್ರಾ.ಪಂ.ಗಳಲ್ಲಿ ಜನನ, ಮರಣ ನೋಂದಣಿ ಪ್ರಾರಂಭ : ಸಚಿವ ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ29 Jun 2024 7:51 PM IST
share
ಜು.1ರಿಂದ ಗ್ರಾ.ಪಂ.ಗಳಲ್ಲಿ ಜನನ, ಮರಣ ನೋಂದಣಿ ಪ್ರಾರಂಭ : ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು : ಗ್ರಾಮೀಣ ಪ್ರದೇಶದಲ್ಲಿ ಜನನ ಹಾಗೂ ಮರಣ ನೋಂದಣಿ ಪದ್ಧತಿಯನ್ನು ಬಲಪಡಿಸಲು ಗ್ರಾಮ ಪಂಚಾಯತ್ ಕಾರ್ಯದರ್ಶಿಗಳನ್ನು ಜನನ, ಮರಣ ಉಪ ನೋಂದಣಾಧಿಕಾರಿಗಳನ್ನಾಗಿ ನೇಮಕ ಮಾಡಲಾಗಿದ್ದು, ಜು.1ರಿಂದ ಜಾರಿಗೆ ಬರುವಂತೆ ನೋಂದಣಿ ಪ್ರಕ್ರಿಯೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಪೂರ್ವಭಾವಿಯಾಗಿ ಎಲ್ಲ ಜಿಲ್ಲಾ ಪಂಚಾಯತಿಗಳಲ್ಲಿ ಗ್ರಾ.ಪಂ.ಕಾರ್ಯದರ್ಶಿಗಳು ಹಾಗೂ ಜನನ, ಮರಣ ಉಪ ನೋಂದಣಾಧಿಕಾರಿಗಳು ಮತ್ತು ಗ್ರಾ.ಪಂ.ಡೇಟಾ ಎಂಟ್ರಿ ಆಪರೇಟರ್ ಗಳಿಗೆ ಜನನ, ಮರಣ ನೋಂದಣಿಗೆ ಸಂಬಂಧಿಸಿದ ಅಧಿನಿಯಮ ಹಾಗೂ ನಿಯಮಗಳು ಮತ್ತು ನೋಂದಣಿಗೆ ಬಳಸಲಾಗುತ್ತಿರುವ ಇ-ಜನ್ಮ ತಂತ್ರಾಂಶದ ಬಗ್ಗೆ ತರಬೇತಿಯನ್ನು ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

ಗ್ರಾ.ಪಂ. ವ್ಯಾಪ್ತಿಯಲ್ಲಿ ಘಟಿಸುವ ಜನನ, ಮರಣ ಘಟನೆಗಳು ಸಂಭವಿಸಿದ 21 ದಿನಗಳೊಳಗೆ ಜನನ, ಮರಣ ಘಟನೆಗಳನ್ನು ನೋಂದಣಿ ಮಾಡಿದ ಪ್ರಸಂಗಗಳಲ್ಲಿ ಉಚಿತವಾಗಿ ಪ್ರಮಾಣ ಪತ್ರವನ್ನು ವಿತರಿಸಲಾಗುವುದು, 21 ದಿನಗಳ ತರುವಾಯ ಮತ್ತು 30 ದಿನಗಳ ಒಳಗಿನ ಘಟನೆಗಳನ್ನು ನಿಯಮಗಳಂತೆ 2ರೂ. ತಡೆ ಶುಲ್ಕ ಪಡೆದು ನೋಂದಾಯಿಸಲಾಗುವುದು ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

30 ದಿನಗಳ ತರುವಾಯ ಒಂದು ವರ್ಷದೊಳಗೆ ವರದಿಯಾಗುವ ಜನನ, ಮರಣಗಳನ್ನು ತಹಶೀಲ್ದಾರರ ಲಿಖಿತ ಅನುಮತಿಯೊಂದಿಗೆ 5 ರೂ. ತಡೆ ಶುಲ್ಕ ಪಡೆದು ನೋಂದಾಯಿಸಲಾಗುವುದು. ಒಂದು ವರ್ಷ ನಂತರ ವರದಿಯಾಗುವ ಜನನ, ಮರಣ ಘಟನೆಗಳಿಗೆ ವಿಳಂಬ ನೋಂದಣಿ ಮಾಡಲು ಮೊದಲನೇ ವರ್ಗದ ದಂಡಾಧಿಕಾರಿ ಅಥವಾ ಮಹಾ ಪ್ರಾಂತ ದಂಡಾಧಿಕಾರಿ ಅವರ ಆದೇಶದೊಂದಿಗೆ 10 ರೂ. ತಡೆ ಶುಲ್ಕ ಪಡೆದು ನೋಂದಾವಣೆ ಮಾಡಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.

ಗ್ರಾ.ಪಂ.ಗಳ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಈಗ 72 ಸೇವೆಗಳು ಲಭ್ಯವಿದ್ದು, ಜನನ, ಮರಣ ನೋಂದಣಿ 73ನೆ ಸೇವೆಯಾಗಿ ಸೇರ್ಪಡೆಗೊಳ್ಳುತ್ತಿದೆ. ಇದೂ ಸೇರಿ ಒಟ್ಟು 9 ಸೇವೆಗಳನ್ನು ಜನನ, ಮರಣ ನೋಂದಣಿಗೆ ಸೇರಿದಂತೆ ಒದಗಿಸಲಾಗುತ್ತಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಜನನ ನೋಂದಣಿ, ಜನನ ಪ್ರಮಾಣ ಪತ್ರ ತಿದ್ದುಪಡಿ, ಜನನ ಪ್ರಮಾಣ ಪತ್ರ ವಿತರಣೆ, ಮಗುವಿನ ಹೆಸರು ಸೇರ್ಪಡೆ, ನಿರ್ಜೀವ ಜನನ ನೋಂದಣಿ, ನಿರ್ಜೀವ ಜನನ ಪ್ರಮಾಣ ಪತ್ರ ವಿತರಣೆ, ಮರಣ ನೋಂದಣಿ, ಮರಣ ಪ್ರಮಾಣ ಪತ್ರ ತಿದ್ದುಪಡಿ ಹಾಗೂ ಮರಣ ಪ್ರಮಾಣ ಪತ್ರ ವಿತರಣೆ ಸೇವೆಗಳನ್ನು ಬಾಪೂಜಿ ಸೇವಾ ಕೇಂದ್ರದಲ್ಲಿ ಒದಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಜನನ, ಮರಣ ನೋಂದಣಿ ಸಂಬಂಧದಲ್ಲಿ ಸಂದೇಹ/ಸ್ಪಷ್ಟೀಕರಣ ಅವಶ್ಯಕತೆಯಿದ್ದಲ್ಲಿ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಚೇರಿ ಹಾಗೂ ಜನನ, ಮರಣಗಳ ಮುಖ್ಯ ನೋಂದಣಾಧಿಕಾರಿಗಳ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಹಾಗೂ ಇ-ಮೇಲ್ crbdkar@gmail.com , ejanmahelpdesk@gmail.com ಮತ್ತು ಇ-ಜನ್ಮ ಸಹಾಯವಾಣಿ 1800-425-6578 ಸಂಖ್ಯೆಗೆ ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ಪ್ರಿಯಾಂಕ್ ಖರ್ಗೆ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X