ರೇಣುಕಾಸ್ವಾಮಿ ಹತ್ಯೆ ಪ್ರಕರಣ | ನಟ ದರ್ಶನ್ ನ್ಯಾಯಾಂಗ ಬಂಧನ ವಿಸ್ತರಣೆ

ನಟ ದರ್ಶನ್
ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ನಟ ದರ್ಶನ್ ಮತ್ತು ಸಹಚರರ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆಯಾಗಿದೆ.
ಪ್ರಕರಣದ ವಿಚಾರಣೆ ನಡೆಸಿದ 24ನೆ ಎಸಿಎಂಎಂ ನ್ಯಾಯಾಲಯ, ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು ಆ.28ರವರೆಗೂ ವಿಸ್ತರಿಸಿ ಆದೇಶ ಹೊರಡಿಸಿದೆ.
ಬುಧವಾರ ನ್ಯಾಯಾಂಗ ಬಂಧನ ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ಬೆಂಗಳೂರು ಹಾಗೂ ತುಮಕೂರು ಜೈಲಿನಲ್ಲಿರುವ ಆರೋಪಿಗಳನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದೆದುರು ಹಾಜರುಪಡಿಸಲಾಗಿತ್ತು ಎಂದು ವಕೀಲರೊಬ್ಬರು ಮಾಹಿತಿ ನೀಡಿದ್ದಾರೆ.
Next Story





