ರೇಣುಕಾಸ್ವಾಮಿ ಕೊಲೆ ಪ್ರಕರಣ; ಪವಿತ್ರಾ ಗೌಡ ಜಾಮೀನು ಅರ್ಜಿ ವಜಾ

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದ ಮೊದಲನೇ ಆರೋಪಿ ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನ್ಯಾಯಾಲಯ ಇಂದು (ಸೆ.26) ವಜಾ ಮಾಡಿದೆ.
59 ಸಿಸಿಎಚ್ ನ್ಯಾಯಾಧೀಶರಾದ ಸುಜಾತ ಎಂ ಸಂಬ್ರಾಣಿ ಅವರು ಜಾಮೀನು ಅರ್ಜಿಯನ್ನು ವಜಾ ಮಾಡಿ ಅದೇಶ ಮಾಡಿದ್ದಾರೆ.
ಪವಿತ್ರಾ ಗೌಡ, ಪ್ರಮುಖ ಸಾಕ್ಷಿಗಳ ವಿಚಾರಣೆ ಮುಗಿದಿದೆ, ಮಗಳ ವಿದ್ಯಾಭ್ಯಾಸ ಕಾರಣಗಳನ್ನು ನೀಡಿ ಜಾಮೀನು ಅರ್ಜಿ ಸಲ್ಲಿಸಿದ್ದರು. ಪವಿತ್ರಾ ಗೌಡ ಪರ ಹಿರಿಯ ವಕೀಲ ಬಾಲನ್ ಹಾಗೂ ವಕೀಲ ನಾರಾಯಣಸ್ವಾಮಿ ವಾದ ಮಾಡಿದ್ದರು.
Next Story




