Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರೇಣುಕಾಸ್ವಾಮಿ‌ ಕೊಲೆ | ಎಸ್‌ಪಿಪಿ...

ರೇಣುಕಾಸ್ವಾಮಿ‌ ಕೊಲೆ | ಎಸ್‌ಪಿಪಿ ಬದಲಾವಣೆಯ ಪ್ರಸ್ತಾವನೆ ಸರಕಾರದ ಮುಂದೆ ಇಲ್ಲ: ಜಿ.ಪರಮೇಶ್ವರ್

"ಕೊಲೆ ಪ್ರಕರಣವನ್ನು ಸಡಿಲ ಮಾಡುವಂತಹ ಯಾವುದೇ ಉದ್ದೇಶ ಸರಕಾರಕ್ಕಿಲ್ಲ"

ವಾರ್ತಾಭಾರತಿವಾರ್ತಾಭಾರತಿ19 Jun 2024 1:22 PM IST
share
ರೇಣುಕಾಸ್ವಾಮಿ‌ ಕೊಲೆ | ಎಸ್‌ಪಿಪಿ ಬದಲಾವಣೆಯ ಪ್ರಸ್ತಾವನೆ ಸರಕಾರದ ಮುಂದೆ ಇಲ್ಲ: ಜಿ.ಪರಮೇಶ್ವರ್

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಸರಕಾರಿ ಅಭಿಯೋಜಕರ(ಎಸ್‌ಪಿಪಿ) ಬದಲಾವಣೆಯ ಪ್ರಸ್ತಾವನೆ ಸರಕಾರದ ಮುಂದೆ ಇಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಹೇಳಿದರು‌.

ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನು ಸಲಹೆಗಾರರು ಏನೆಲ್ಲ ಸಲಹೆಗಳನ್ನು ನೀಡುತ್ತಾರೋ ಅದರ ಆಧಾರದ ಮೇಲೆ ಮುಂದಿನ ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ಕಾನೂನು ಬಿಟ್ಟು ಯಾರು ಕೆಲಸ ಮಾಡಲಾಗುವುದಿಲ್ಲ. ಕಾನೂನು ಪ್ರಕಾರವೇ ಸರಕಾರಿ ಅಭಿಯೋಜಕರು ಕೆಲಸ ಮಾಡಬೇಕು. ಯಾರನ್ನೇ ನೇಮಿಸಿದರೂ ಸಹ ಕಾನೂನು ಪುಸ್ತಕ ಒಂದೇ ಅಲ್ಲವೇ? ಅದರ ಪ್ರಕಾರವೇ ಕೆಲಸ ಮಾಡಬೇಕಾಗುತ್ತದೆ ಎಂದರು.

ಎಸ್‌ಪಿಪಿ ಬದಲಾವಣೆಯ ಪ್ರಸ್ತಾವನೆ ಸರಕಾರದ ಮುಂದೆ ಇರುವುದು ನನ್ನ ಗಮನಕ್ಕೆ ಬಂದಿಲ್ಲ. ಬದಲಾವಣೆ ಮಾಡಿದರೂ ಸಹ ಅದರಲ್ಲೇನು ತಪ್ಪಿಲ್ಲ. ಕಾರಣ ಇಟ್ಟುಕೊಂಡೇ ತೀರ್ಮಾನ ತೆಗೆದುಕೊಳ್ಳಲಾಗಿರುತ್ತದೆ ಎಂದು ಸ್ಪಷ್ಟಪಡಿಸಿದರು.

ರೇಣುಕಾಸ್ವಾಮಿ‌ ಕೊಲೆ ಪ್ರಕರಣವನ್ನು ಸಡಿಲ ಮಾಡುವಂತಹ ಯಾವುದೇ ಉದ್ದೇಶ ಸರಕಾಕ್ಕಿಲ್ಲ. ಮುಲಾಜಿಲ್ಲದೇ, ಯಾವುದೇ ರೀತಿಯ ಒತ್ತಡಕ್ಕೆ ಒಳಗಾಗದೇ ಪ್ರಕರಣದ ತನಿಖೆ ನಡೆಯುತ್ತಿದೆ. ಸರಕಾರಿ ಅಭಿಯೋಜಕರನ್ನು ಬದಲಾಯಿಸುವ ಸಂದರ್ಭ ಬಂದರೆ ಕಾರಣ ಇರುತ್ತದೆ. ಇಲ್ಲದೇ ಮಾಡುವುದಿಲ್ಲ‌ ಎಂದು ಹೇಳಿದರು‌.

ನಟ ದರ್ಶನ್ ಅವರ ಮಾಜಿ ಮ್ಯಾನೇಜರ್ ಮಲ್ಲಿಕಾರ್ಜುನ್ ನಾಪತ್ತೆ ಪ್ರಕರಣವನ್ನು ಪೊಲೀಸರು ಪರಿಶೀಲನೆ ಮಾಡುತ್ತಾರೆ. ಈ ಪ್ರಕರಣವನ್ನು ತನಿಖೆ ಮಾಡಬೇಕಾಗುತ್ತದೆ ಅನ್ನಿಸಿದರೆ ತೀರ್ಮಾನ ಮಾಡುತ್ತಾರೆ‌. ಸರಕಾರದ ಅನುಮತಿ ಬೇಕಾದರೆ ನೀಡಲಾಗುವುದು ಎಂದು ತಿಳಿಸಿದರು.

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿಯವರು ರಸ್ತೆ ತಡೆ, ಸಿಎಂ ಅವರಿಗೆ ಘೇರಾವ್ ಹಾಕಲು ನಿರ್ಧರಿಸಿರುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿ, "ಇದಕ್ಕೆ ಏನೇನು ಕ್ರಮ ಕೈಗೊಳ್ಳಬೇಕು ತೆಗೆದುಕೊಳ್ಳುತ್ತೇವೆ. ರಸ್ತೆ ತಡೆ ನಡೆಸಲು ಕೆಲವು ಸಲ ಪೊಲೀಸರು ಅರ್ಧ ಗಂಟೆ ಅನುಮತಿ ಕೊಡುತ್ತಾರೆ. ಆ ರೀತಿ ಅನುಮತಿ ಕೊಟ್ಟಿದ್ದರೆ ಸಮಂಜಸವಾಗಿರುತ್ತದೆ. ರಸ್ತೆ ತಡೆ ನಡೆಸುವಂತಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ. ಅದರ ಹಿನ್ನೆಲೆಯಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ" ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X