Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಯತ್ನಾಳ್ ವಿರುದ್ಧ ರಾಷ್ಟ್ರೀಯ ನಾಯಕರಿಗೆ...

ಯತ್ನಾಳ್ ವಿರುದ್ಧ ರಾಷ್ಟ್ರೀಯ ನಾಯಕರಿಗೆ ವರದಿ : ಪಿ.ರಾಜೀವ್

ವಾರ್ತಾಭಾರತಿವಾರ್ತಾಭಾರತಿ25 Nov 2024 6:24 PM IST
share
ಯತ್ನಾಳ್ ವಿರುದ್ಧ ರಾಷ್ಟ್ರೀಯ ನಾಯಕರಿಗೆ ವರದಿ : ಪಿ.ರಾಜೀವ್

ಬೆಂಗಳೂರು : ಬಿಜೆಪಿ ಶಿಸ್ತಿನ ಪಕ್ಷ. ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಪಕ್ಷದ ಕೋರ್ ಕಮಿಟಿ ಜೊತೆ ಚರ್ಚಿಸಿ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಾರೆ. ವೈಯಕ್ತಿಕ ಹಿತಾಸಕ್ತಿ ಇಟ್ಟುಕೊಂಡು, ಪಕ್ಷದ ನಿಯಮ-ಶಿಸ್ತನ್ನು ಉಲ್ಲಂಘಿಸಿ ಯತ್ನಾಳ್ ಸೇರಿ ಯಾರೇ ಹೇಳಿಕೆ ಕೊಟ್ಟರೆ, ಹೋರಾಟ ಮಾಡಿದರೆ ಅದಕ್ಕೂ ಪಕ್ಷಕ್ಕೂ ಸಂಬಂಧ ಇಲ್ಲ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಸ್ಪಷ್ಟಪಡಿಸಿದ್ದಾರೆ.

ಸೋಮವಾರ ಮಲ್ಲೇಶ್ವರದ ಬಿಜೆಪಿ ಕಾರ್ಯಾಲಯದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಯತ್ನಾಳ್ ಮಾಡುವ ಹೋರಾಟಕ್ಕೆ ರಾಷ್ಟ್ರೀಯ ನಾಯಕರ ಅನುಮತಿ ಪಡೆದಿಲ್ಲ, ರಾಜ್ಯ ನಾಯಕರು ಅಥವಾ ಜಿಲ್ಲಾ ನಾಯಕರಿಂದಲೂ ಅನುಮತಿ ಪಡೆದಿಲ್ಲ, ಹಾಗಾಗಿ ಅದು ಪಕ್ಷದ ಹೋರಾಟ ಆಗುವುದಿಲ್ಲ. ಅದು ಪಕ್ಷದ ಅಶಿಸ್ತು ಆಗುತ್ತದೆ. ಯತ್ನಾಳರ ಕ್ರಮದ ಕುರಿತು ರಾಷ್ಟ್ರನಾಯಕರ ಗಮನಕ್ಕೆ ತರುತ್ತೇವೆ. ಅವರ ವಿರುದ್ಧ ರಾಷ್ಟ್ರೀಯ ನಾಯಕರಿಗೆ ವರದಿ ಕೊಡುತ್ತೇವೆ ಎಂದು ಸ್ಪಷ್ಟಪಡಿಸಿದರು.

ಸಂವಿಧಾನ, ಪ್ರಜಾಪ್ರಭುತ್ವಕ್ಕೆ ಅವಮಾನಿಸದಿರಿ:

‘ಕಾಂಗ್ರೆಸ್ಸಿನ ಅಕ್ರಮಗಳ ದೃಢೀಕರಣಕ್ಕೆ ಮತದಾರರನ್ನು ಮುಖ್ಯಮಂತ್ರಿ ಮತ್ತು ಮಂತ್ರಿಗಳು ಬಳಸಿಕೊಳ್ಳುವುದು ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ಮಾಡುವ ಅಪಮಾನ. ಉಪಚುನಾವಣೆಯಲ್ಲಿ 3 ಕ್ಷೇತ್ರಗಳನ್ನು ಗೆದ್ದ ಮಾತ್ರಕ್ಕೆ ಸರಕಾರ ಹಗರಣಮುಕ್ತ ಎಂಬ ಹಣೆಪಟ್ಟಿ ಕಟ್ಟಿಕೊಳ್ಳಲು ಸಾಧ್ಯವಿಲ್ಲ. ಸಿದ್ದರಾಮಯ್ಯ ತಮ್ಮ ಮೇಲಿನ ಆರೋಪಗಳು ಸುಳ್ಳು ಎಂಬಂತೆ ಬಿಂಬಿಸಿಕೊಳ್ಳುತ್ತಿದ್ದಾರೆ. ಆದರೆ, ನೀವು ಮಾಡಿರುವ ಹಗರಣಗಳು ಅಕ್ಷಮ್ಯ ಅಪರಾಧಗಳು. ಇದರ ಬಗ್ಗೆ ಬಿಜೆಪಿ ಇನ್ನಷ್ಟು ಉಗ್ರ ಹೋರಾಟ ಮಾಡಲಿದೆ ಎಂದು ಎಚ್ಚರಿಸಿದರು.

ಆಡಳಿತ ಪಕ್ಷದಿಂದ ಆಡಳಿತ ಯಂತ್ರದ ಬಳಕೆ, ಜನರ ಮನಸ್ಥಿತಿ, ಜನರ ಓಲೈಕೆಗೆ ಜಾಸ್ತಿ ಅವಕಾಶವಿದ್ದು, ಅಭಿವೃದ್ಧಿ ಆಗಲೆಂದು ಜನರು ಮತ ಕೊಡಬಹುದೇ ಹೊರತು, ನಿಮ್ಮ ಅಕ್ರಮಗಳ ದೃಢೀಕರಣಕ್ಕೆ ಮತದಾರರನ್ನು ಮುಖ್ಯಮಂತ್ರಿ ಮತ್ತು ಸಚಿವರು ಬಳಸಿಕೊಳ್ಳುವುದು ಸರಿಯಲ್ಲ. 3 ಕ್ಷೇತ್ರಗಳ ಗೆಲುವಿನ ಹಿನ್ನೆಲೆಯಲ್ಲಿ ಕೋರ್ಟ್‍ನಲ್ಲಿರುವ ಎಲ್ಲ ಪ್ರಕರಣಗಳ ರದ್ದತಿಗೆ ಸ್ವತಃ ವಕೀಲರಾದ ಸಿದ್ದರಾಮಯ್ಯ ಅಫಿಡವಿಟ್ ಹಾಕಲಿ ಎಂದು ಪಿ.ರಾಜೀವ್ ಸವಾಲೆಸೆದರು.

ಡಿ.9ರಂದು ಅಧಿವೇಶನ ಪ್ರಾರಂಭವಾಗಲಿದ್ದು, ಸದನದೊಳಗೆ ರೈತರ ಪರವಾಗಿ ಬಿಜೆಪಿ ತನ್ನ ಹೋರಾಟವನ್ನು ಮುಂದುವರೆಸಲಿದೆ. ಸದನಕ್ಕೆ ಪ್ರವೇಶ ಆಗುವುದಕ್ಕೆ ಮೊದಲು ರಾಜ್ಯಾದ್ಯಂತ 3 ತಂಡಗಳನ್ನು ರಚಿಸಿ ಸಂಬಂಧಿತ ಜಿಲ್ಲೆಗಳಲ್ಲಿ ಡಿ.4ರಿಂದ 6ರವ ರೆಗೆ ಪ್ರವಾಸ ಮಾಡಿ ಸದನಕ್ಕೆ ಬರಲಿವೆ ಎಂದರು.

‘ನಮ್ಮದು ಶಿಸ್ತಿನ ಪಕ್ಷ. ಪಕ್ಷದಲ್ಲಿ ಕೆಲವರು ಶಿಸ್ತು ಮೀರಿ ಹೋದಾಗ ಅದನ್ನು ಸರಿದಾರಿಗೆ ತರುವುದು ಮುಖಂಡರ ಕರ್ತವ್ಯ. ಅಶಿಸ್ತಿನ ಕುರಿತು ಹೈಕಮಾಂಡ್ ಗಮನ ಸೆಳೆಯುವ ಕೆಲಸವನ್ನು ರಾಜ್ಯಾಧ್ಯಕ್ಷರು ಮಾಡಿದ್ದಾರೆ’

-ಛಲವಾದಿ ನಾರಾಯಣಸ್ವಾಮಿ, ಪರಿಷತ್ ಪ್ರತಿಪಕ್ಷ ನಾಯಕ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X