Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಒಂದು ಟ್ರಿಲಿಯನ್ ಡಾಲರ್ ಜಿಎಸ್‍ಡಿಪಿ...

ಒಂದು ಟ್ರಿಲಿಯನ್ ಡಾಲರ್ ಜಿಎಸ್‍ಡಿಪಿ ಸಾಧಿಸಲು ಸಂಪನ್ಮೂಲಗಳು ಸಾಕಾಗುತ್ತಿಲ್ಲ: ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ20 Jan 2024 7:57 PM IST
share
ಒಂದು ಟ್ರಿಲಿಯನ್ ಡಾಲರ್ ಜಿಎಸ್‍ಡಿಪಿ ಸಾಧಿಸಲು ಸಂಪನ್ಮೂಲಗಳು ಸಾಕಾಗುತ್ತಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕರ್ನಾಟಕ ರಾಜ್ಯವು ತನ್ನ ಸ್ವಂತ ತೆರಿಗೆ ಸಂಗ್ರಹದಲ್ಲಿ ಉತ್ತಮ ಪ್ರದರ್ಶನವನ್ನು ಸಾಧಿಸಿದ್ದರೂ, ರಾಜ್ಯದ ಹೆಚ್ಚುತ್ತಿರುವ ಸವಾಲುಗಳನ್ನು ಎದುರಿಸಲು ಹಾಗೂ 2032ರ ವೇಳೆಗೆ ಕರ್ನಾಟಕ ಒಂದು ಟ್ರಿಲಿಯನ್ ಡಾಲರ್ ನ ಜಿಎಸ್‍ಡಿಪಿ ಸಾಧಿಸಲು ನಮ್ಮಲ್ಲಿರುವ ಸಂಪನ್ಮೂಲಗಳು ಸಾಕಾಗುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ಶನಿವಾರ ಎಂ.ಎಸ್.ರಾಮಯ್ಯ ಅನ್ವಯಿಕ ವಿಜ್ಞಾನ ವಿಶ್ವವಿದ್ಯಾಲಯವು ನಗರದ ಖಾಸಗಿ ಹೊಟೇಲ್ ನಲ್ಲಿ ಆಯೋಜಿಸಿದ್ದ ‘ಆರ್ಥಿಕ ಸಂಯುಕ್ತ ತತ್ವ:16ನೇ ಹಣಕಾಸು ಆಯೋಗದ ಮುಂದಿರುವ ಸವಾಲುಗಳು’ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದ ಆರ್ಥಿಕ ಹಾಗೂ ಮಾನವ ಸಂಪನ್ಮೂಲದ ಅಭಿವೃದ್ಧಿಗೆ ಮಾನವ ಮತ್ತು ಭೌತಿಕ ಮೂಲ ಸೌಲಭ್ಯಗಳ ಮೇಲೆ ಗಮನಾರ್ಹ ಹೂಡಿಕೆಯ ಅಗತ್ಯವಿದೆ. ಸಂಯುಕ್ತ ಆರ್ಥಿಕ ವರ್ಗಾವಣೆಯಲ್ಲಿನ ವೈಪರೀತ್ಯಗಳನ್ನು ಪರಿಶೀಲಿಸಲು ಕರ್ನಾಟಕ ಗಟ್ಟಿಯಾಗಿ ಪ್ರಾತಿನಿಧ್ಯವನ್ನು ವಹಿಸಬೇಕಿದೆ. ದಕ್ಷತೆಯ ಜೊತೆಗೆ ನೀತಿಗೆ ಸಂಬಂಧಿಸಿದಂತೆ ವರ್ಗಾವಣೆಯ ಅರ್ಹತೆಗಳ ಬಗ್ಗೆ ಸಾಕಷ್ಟು ಒತ್ತು ನೀಡಲು ಇದು ಸುಸಂದರ್ಭ ಎಂದು ಅವರು ಹೇಳಿದರು.

ಹಿಂದಿನ ಹಣಕಾಸು ಆಯೋಗದ ಶಿಫಾರಸುಗಳಿಂದಾಗಿ ಕರ್ನಾಟಕ ಭಾರಿ ನಷ್ಟವನ್ನು ಅನುಭವಿಸಿದೆ. ಇದನ್ನು 16ನೇ ಹಣಕಾಸು ಆಯೋಗದ ಮುಂದೆ ಪ್ರಶ್ನಿಸಬೇಕಿದೆ. 14ನೇ ಹಣಕಾಸು ಆಯೋಗವು ಕರ್ನಾಟಕದ ಪಾಲಿನ ತೆರಿಗೆ ಹಂಚಿಕೆ ಪ್ರಮಾಣವನ್ನು ಶೇ. 4.713 ನಿಗದಿ ಮಾಡಿತ್ತು. 15ನೇ ಹಣಕಾಸು ಆಯೋಗವು ಈ ಪ್ರಮಾಣವನ್ನು ಶೇ.3.647ಕ್ಕೆ ಇಳಿಸಿದೆ ಎಂದು ಅವರು ಹೇಳಿದರು.

ಬೆಂಗಳೂರು ನಗರ ಜಿಲ್ಲೆಯಲ್ಲಿ 6,21,131 ರೂ. ತಲಾ ಆದಾಯ ಮಟ್ಟವನ್ನು ಕಾಣಬಹುದು. ಆದರೆ, ಈ ಅಂಶವನ್ನು ಮುಂದಿಟ್ಟುಕೊಂಡು ಇತರ ಕೆಲವು ಜಿಲ್ಲೆಗಳಲ್ಲಿ ಕಡಿಮೆಯಿರುವ ತಲಾ ಆದಾಯದ ಸಮಸ್ಯೆಯನ್ನು ಬಗೆಹರಿಸಲು ಸಾಕಷ್ಟು ಸಂಪನ್ಮೂಲ ವರ್ಗಾವಣೆ ಮಾಡಲು ಸಾಧ್ಯವಾಗಿಲ್ಲ ಎಂದು ಮುಖ್ಯಮಂತ್ರಿ ತಿಳಿಸಿದರು.

ಅಂತರ ರಾಜ್ಯ ತಲಾ ಆದಾಯ ವ್ಯತ್ಯಾಸಗಳಿಗೆ ಹಣಕಾಸು ಆಯೋಗಗಳು ಅಗತ್ಯವಿರುವ ಹೊಂದಾಣಿಕೆಯನ್ನು ಮಾಡಿಕೊಂಡು ಶಿಫಾರಸುಗಳನ್ನು ಮಾಡುವಾಗ ಆದಾಯ ದೂರವ್ಯಾಪ್ತಿಯನ್ನು ಪರಿಗಣಿಸಬೇಕು ಎಂದು ಅವರು ತಿಳಿಸಿದರು.

ದೇಶದಲ್ಲಿಯೇ ಅತಿ ಹೆಚ್ಚು ತೆರಿಗೆ ನೀಡುವ ರಾಜ್ಯಕ್ಕೆ ತನ್ನ ಕೊಡುಗೆಗೆ ತಕ್ಕ ಪ್ರತಿಫಲ ದೊರಕದಿರುವುದು ವಿಪರ್ಯಾಸ. 16ನೇ ಹಣಕಾಸು ಆಯೋಗವು ದಕ್ಷತೆಗೆ ಪ್ರೋತ್ಸಾಹಕಗಳನ್ನು ಹಾಗೂ ವಿತ್ತೀಯ ಕಾರ್ಯಕ್ಷಮತೆಗೆ ನೀಡುವ ಬೆಲೆಯನ್ನು ಹೆಚ್ಚಿಸುವಂತೆ ನಾವು ಒತ್ತಾಯಿಸುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದರು.

ರಾಜ್ಯ ಸರಕಾರಗಳಿಗೆ ಪ್ರಮುಖ ವೆಚ್ಚ ಹೊಣೆಗಾರಿಕೆಗಳಿದ್ದು, ಬಹುತೇಕ ಸಂದರ್ಭದಲ್ಲಿ ಅಗತ್ಯ ರಾಜಸ್ವ ಸಂಪನ್ಮೂಲಗಳ ಲಭ್ಯತೆ ಇರುವುದಿಲ್ಲ. ವಿತ್ತೀಯ ಸ್ವಾಯತ್ತತೆಯನ್ನು ಉಳಿಸಿಕೊಳ್ಳುತ್ತಲೇ ರಾಜ್ಯ ಮಟ್ಟದಲ್ಲಿ ವೆಚ್ಚ ಹೊಣೆಗಾರಿಕೆಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಹಣಕಾಸು ಆಯೋಗಗಳ ಸಂಪನ್ಮೂಲ ವರ್ಗಾವಣೆಗೆ ಹೆಚ್ಚಿನ ಪ್ರಾಮುಖ್ಯತೆ ಇದೆ ಎಂದು ಅವರು ತಿಳಿಸಿದರು.

ಆರ್ಥಿಕ ಬೆಳವಣಿಗೆಯನ್ನು ಸಮತೋಲಿತ ಹಾಗೂ ಒಳಗೊಳ್ಳುವಿಕೆಯನ್ನು ಖಾತ್ರಿ ಪಡಿಸಿಕೊಳ್ಳುತ್ತಲೇ ಅದನ್ನು ಸುಸ್ಥಿರಗೊಳಿಸಲು ರಾಜ್ಯಕ್ಕೆ ಅನೇಕ ಸವಾಲುಗಳಿವೆ. ಇದರೊಂದಿಗೆ, ಕೇಂದ್ರ ಪ್ರಾಯೋಜಿತ ಯೋಜನೆಗಳ ಆಯವ್ಯಯ ಪರಿಣಾಮಗಳನ್ನೂ ರಾಜ್ಯ ಸರಿದೂಗಿಸಬೇಕಾಗಿದೆ. ನಗರೀಕರಣ, ನಗರ ಕೇಂದ್ರಗಳಲ್ಲಿ ಮೂಲಸೌಕರ್ಯಗಳು ಹಾಗೂ ಮೂಲ ಸೇವೆಗಳ ಪೂರೈಕೆಗೆ ಬೇಡಿಕೆಯಿದೆ. ಆದರೆ ಹೆಚ್ಚುತ್ತಿರುವ ವಲಸೆಯ ಸಮಸ್ಯೆ ನಗರ ಕೇಂದ್ರಗಳಲ್ಲಿ ಒತ್ತಡವನ್ನು ಹೆಚ್ಚಿಸುತ್ತಿದೆ ಎಂದು ಮುಖ್ಯಮಂತ್ರಿ ಹೇಳಿದರು.

ರಾಜ್ಯದ ಆದಾಯದಲ್ಲಿ ಗಣನೀಯ ಕೊಡುಗೆ ನೀಡುತ್ತಿರುವ ಬೆಂಗಳೂರು ನಗರದ ಸುಸ್ಥಿರ ಬೆಳವಣಿಗೆಗೆ ಸೂಕ್ತ ಸಹಕಾರವನ್ನು ನೀಡುವುದು ರಾಜ್ಯದ ಆದ್ಯತೆಯಾಗಿದೆ. 2022-23ರ ಆರ್ಥಿಕ ಸಮೀಕ್ಷೆಯ ಪ್ರಕಾರ, 6,21,131 ರೂ.ಗಳ ತಲಾ ಆದಾಯವನ್ನು ಹೊಂದಿರುವ ಬೆಂಗಳೂರು ನಗರ ಪ್ರಥಮ ಸ್ಥಾನದಲ್ಲಿದ್ದು, 1,24,998 ರೂ.ಗಳ ತಲಾ ಆದಾಯ ಹೊಂದಿರುವ ಕಲಬುರಗಿ ಕೊನೆಯ ಸ್ಥಾನದಲ್ಲಿದೆ ಎಂದು ಅವರು ಹೇಳಿದರು.

ಬೆಂಗಳೂರು ನಗರದ ಮಾನವ ಅಭಿವೃದ್ಧಿ ಸೂಚ್ಯಂಕ 0.738 ಪಡೆದು ಮೊದಲ ಸ್ಥಾನದಲ್ಲಿದ್ದರೆ, ಯಾದಗಿರಿ, ಕಲಬುರಗಿ ಮತ್ತು ರಾಯಚೂರು 0.538, 0.539 ಹಾಗೂ 0.562 ಅನುಕ್ರಮವಾಗಿ ಮಾನವ ಅಭಿವೃದ್ಧಿ ಸೂಚ್ಯಂಕ ಪಡೆದು ಕೊನೆಯ ಮೂರು ಸ್ಥಾನಗಳಲ್ಲಿದೆ. ಮಾನವ ಅಭಿವೃದ್ಧಿಯ ಅಸಮತೋಲನವನ್ನು ಇಲ್ಲಿ ಗಮನಿಸಬಹುದು ಎಂದು ಮುಖ್ಯಮಂತ್ರಿ ತಿಳಿಸಿದರು.

ಸಮತೋಲಿತ ಪ್ರಾದೇಶಿಕ ಅಭಿವೃದ್ಧಿಯನ್ನು ಸಾಧಿಸಲು ರಾಜ್ಯದ ಶ್ರಮಕ್ಕೆ ಪೂರಕವಾಗಿ ಹೆಚ್ಚುವರಿ ಸಂಪನ್ಮೂಲಗಳ ಅಗತ್ಯವೂ ಇದೆ. ಹಣಕಾಸು ಆಯೋಗಗಳಿಂದ ಸಾಕ್ಷ್ಯಾಧಾರಿತ ಸಮತೋಲಿತ ವ್ಯವಸ್ಥೆ ಅನುಸರಿಸಿ ನೀತಿ ಮತ್ತು ಪ್ರೋತ್ಸಾಹಕ ದಕ್ಷತೆಯನ್ನು ಗಳಿಸಲು ವಿಚಾರ ಸಂಕಿರಣದಲ್ಲಿ ಭಾಗವಹಿಸುತ್ತಿರುವವರು ಚರ್ಚಿಸಬೇಕೆಂದು ನಾನು ಒತ್ತಾಯಿಸುತ್ತೇನೆ ಎಂದು ಸಿದ್ದರಾಮಯ್ಯ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X