Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಮಿಷನ್ ಆರೋಪ ಸಾಬೀತುಪಡಿಸಿದರೆ ರಾಜಕೀಯ...

ಕಮಿಷನ್ ಆರೋಪ ಸಾಬೀತುಪಡಿಸಿದರೆ ರಾಜಕೀಯ ನಿವೃತ್ತಿ: ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ11 Aug 2023 6:08 PM IST
share
ಕಮಿಷನ್ ಆರೋಪ ಸಾಬೀತುಪಡಿಸಿದರೆ ರಾಜಕೀಯ ನಿವೃತ್ತಿ: ಡಿ.ಕೆ.ಶಿವಕುಮಾರ್

ಬೆಂಗಳೂರು, ಆ.11: ‘ನಾನು ಯಾರ ಬಳಿಯಾದರೂ ಕಮಿಷನ್ ಕೇಳಿರುವುದನ್ನು ಸಾಬೀತುಪಡಿಸಿದರೆ ಇಂದೇ ರಾಜಕೀಯದಿಂದ ನಿವೃತ್ತಿಯಾಗುತ್ತೇನೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸವಾಲು ಹಾಕಿದ್ದಾರೆ.

ಶುಕ್ರವಾರ ಸದಾಶಿವನಗರದಲ್ಲಿರುವ ತಮ್ಮ ನಿವಾಸ3ದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಕಮಿಷನ್ ಕೇಳಿಲ್ಲವಾದರೆ ಬಸವರಾಜ ಬೊಮ್ಮಾಯಿ, ಅಶೋಕ್ ರಾಜಕೀಯ ನಿವೃತ್ತಿ ಘೋಷಣೆ ಮಾಡುತ್ತಾರಾ? ನಾನು ಅವರ ಸ್ಥಾನ ಹಾಗೂ ಹಿರಿತನಕ್ಕೆ ಗೌರವ ನೀಡಬೇಕು ನೀಡುತ್ತೇನೆ. ಅಶೋಕ್ ಏನೆಲ್ಲಾ ಮಾತನಾಡಿದ್ದಾರೆ ಎಂಬುದು ಗೊತ್ತಿದೆ. ನನಗೆ ನನ್ನದೇ ಆದ ವ್ಯಕ್ತಿತ್ವ ಇದೆ ಎಂದರು.

ತನಿಖೆ ಒಂದೆರಡು ಕಡೆ ಮಾತ್ರ ಮಾಡುವುದಿಲ್ಲ. ಎಲ್ಲ ಕಡೆ ಮಾಡಲಾಗುತ್ತದೆ. ಕೆಲಸ ಮಾಡಿದ್ದರೆ ಬಿಲ್ ಪಾವತಿ ಆಗಲಿದೆ. ಈಗ ಒಂದೆರಡು ತಿಂಗಳು ಕಾಯಲು ಆಗುವುದಿಲ್ಲವೇ? ಗುತ್ತಿಗೆದಾರರು ನೇಣು ಹಾಕಿಕೊಳ್ಳುವುದು ಬೇಡ, ದಯಾ ಮರಣ ಕೇಳುವುದೂ ಬೇಡ. ಅವರ ಹಿಂದೆ ಯಾರಿದ್ದಾರೆ ಎಂದು ಗೊತ್ತಿದೆ. ಗುತ್ತಿಗೆದಾರರು ರಾಜ್ಯಪಾಲರು, ಅಶೋಕ್, ಕುಮಾರಸ್ವಾಮಿ ಎಲ್ಲರನ್ನೂ ಕೇಳುತ್ತಿದ್ದಾರೆ. ನಾನು ಅಧಿಕಾರಿಗಳ ಬಳಿ ಮಾಹಿತಿ ಕೇಳಿದ್ದೇನೆ ಎಂದು ಶಿವಕುಮಾರ್ ಹೇಳಿದರು.

ಗುತ್ತಿಗೆದಾರರ ಬಿಲ್ ವಿಚಾರವಾಗಿ ಬೊಮ್ಮಾಯಿ, ಅಶೋಕ್ ಸೇರಿದಂತೆ ವಿರೋಧ ಪಕ್ಷದ ನಾಯಕರು ಮಾತನಾಡುತ್ತಿದ್ದಾರೆ. ನಿಮ್ಮ ಸರಕಾರ ಇದ್ದಾಗ ಗುತ್ತಿಗೆದಾರರ ಬಿಲ್ ಯಾಕೆ ಪಾವತಿ ಮಾಡಲಿಲ್ಲ? ನಿಮಗೆ ಯಾರು ಅಡ್ಡಿ ಮಾಡಿದ್ದರು? ಅವರ ಬಳಿ ಹಣ ಇರಲಿಲ್ಲವೇ? ಕೆಲಸ ಸರಿ ಇರಲಿಲ್ಲವೇ? ಈ ಪ್ರಶ್ನೆಗೆ ಬಿಜೆಪಿ ನಾಯಕರು ಮೊದಲು ಉತ್ತರ ನೀಡಲಿ. ಉಳಿದಂತೆ ಗುತ್ತಿಗೆದಾರರಿಗೆ ನಾನು ಉತ್ತರ ನೀಡುತ್ತೇನೆ ಎಂದು ಅವರು ತಿಳಿಸಿದರು.

ನಮ್ಮ ಸರಕಾರ ಬಂದ ನಂತರ ಮುಖ್ಯಮಂತ್ರಿಗಳು, ಕೆಂಪಣ್ಣ ಅವರ ದೂರಿನ ಆಧಾರದ ಮೇಲೆ ಕೆಲಸ ಆಗಿದೆಯೆ ಇಲ್ಲವೆ ಎಂದು ನೈಜತೆ ಪರಿಶೀಲನೆ ಮಾಡಿ ಎಂದು ತಿಳಿಸಿದರು. ಇನ್ನು ಬಿಜೆಪಿ ನಾಯಕರು ಸದನದಲ್ಲಿ ಗುತ್ತಿಗೆ ಕಾಮಗಾರಿಗಳಲ್ಲಿ ಆಗಿರುವ ಅಕ್ರಮಗಳ ಬಗ್ಗೆ ತನಿಖೆ ಮಾಡಿ ಎಂದು ನಮ್ರತೆಯಿಂದ ಮನವಿ ಮಾಡಿದ್ದರು. ಹೀಗಾಗಿ ನಾವು ತನಿಖಾ ಸಮಿತಿ ರಚನೆ ಮಾಡಿದ್ದೇವೆ. ಕಾಮಗಾರಿಗಳ ಕೆಲಸ ಆಗಿದೆಯೆ ಇಲ್ಲವೆ ಎಂದು ಪರಿಶೀಲನೆ ಮಾಡಲು ಸಮಿತಿಗೆ ಸೂಚಿಸಿದ್ದೇವೆ ಎಂದು ಶಿವಕುಮಾರ್ ಹೇಳಿದರು.

ಮೂರು-ನಾಲ್ಕು ವರ್ಷಗಳಿಂದ ಬಿಲ್ ಪಾವತಿ ಆಗದಿದ್ದಾಗ ಸುಮ್ಮನಿದ್ದವರು, ಈಗ ತನಿಖೆ ಮುಗಿಯುವವರೆಗೂ ಕಾಯಲು ಯಾಕೆ ಸಿದ್ಧರಿಲ್ಲ? ಯಾಕೆ ಈ ಪರಿಯ ಆತುರ? ಏನಿದರ ಹಿಂದಿನ ಮರ್ಮ? ಇನ್ನು 10-15 ಪರ್ಸೆಂಟ್ ಕಮಿಷನ್ ಕೇಳುತ್ತಿದ್ದಾರೆ ಎಂಬ ಆರೋಪ ಮಾಡಲಾಗಿದೆ ಎಂದು ಅವರು ಕಿಡಿಗಾರಿದರು.

ಈ ಕಮಿಷನ್ ಯಾರು ಕೇಳಿದ್ದಾರೆ? ಡಿ.ಕೆ.ಶಿವಕುಮಾರ್ ಕೇಳಿದ್ದಾನಾ? ಸಿದ್ದರಾಮಯ್ಯ ಕೇಳಿದ್ದಾರಾ? ಮಂತ್ರಿಗಳು, ಶಾಸಕರು ಕೇಳಿದ್ದಾರಾ? ಅಧಿಕಾರಿಗಳು ಕೇಳಿದ್ದಾರಾ? ಎಂದು ಹೇಳಲಿ. ಕೆಂಪಣ್ಣ ಗೌರವಯುತ ವ್ಯಕ್ತಿ. ಅವರ ಹೇಳಿಕೆ ಬಗ್ಗೆ ಗೊತ್ತಿಲ್ಲ. ಅವರಿಗೆ ಯಾವ ಅಧಿಕಾರಿ ಕೇಳಿದ್ದಾರೊ ಆ ಬಗ್ಗೆ ಒಂದು ಅಫಿಡವಿಟ್ ಹಾಗೂ ದೂರು ಸಲ್ಲಿಸಲು ಹೇಳಿ ಎಂದು ಶಿವಕುಮಾರ್ ತಿಳಿಸಿದರು.

ದಾರೀಲಿ ಹೋಗೋರಿಗೆಲ್ಲ ಉತ್ತರ ಕೊಡೋಕೆ ಆಗಲ್ಲ: ಗುತ್ತಿಗೆದಾರರ ಸಂಘದ ಪದಾಧಿಕಾರಿಗಳು ನೀವು ಅಜ್ಜಯ್ಯನ ಮೇಲೆ ಆಣೆ ಪ್ರಮಾಣ ಮಾಡುವಂತೆ ಕೇಳಿರುವ ಬಗ್ಗೆ ಪ್ರಶ್ನಿಸಿದಾಗ, "ರಸ್ತೆಯಲ್ಲಿ ಹೋಗುವ ಯಾರದೋ ಮಾತಿಗೆಲ್ಲ ನಾನು ಉತ್ತರ ನೀಡುವುದಿಲ್ಲ. ಜವಾಬ್ದಾರಿಯುತ ಸ್ಥಾನದಲ್ಲಿ ಇರುವವರು ಮಾತನಾಡಲಿ, ಉತ್ತರ ನೀಡುತ್ತೇನೆ. ಯಾರಿಗೆ ಏನು ಉತ್ತರ ನೀಡಬೇಕೊ ನೀಡುತ್ತೇನೆ" ಎಂದು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X