Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಪ್ರಧಾನಿ ಭ್ರಷ್ಟಾಚಾರ ಆರೋಪ...

ಪ್ರಧಾನಿ ಭ್ರಷ್ಟಾಚಾರ ಆರೋಪ ಸಾಬೀತುಪಡಿಸಿದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ ಸವಾಲು

"ಆರೋಪ ಸಾಬೀತುಪಡಿಸಲು ವಿಫಲರಾದರೆ ಮೋದಿ ಪ್ರಧಾನಿ ಸ್ಥಾನ ತ್ಯಜಿಸುವರೇ?"

ವಾರ್ತಾಭಾರತಿವಾರ್ತಾಭಾರತಿ13 Nov 2024 1:17 PM IST
share
ಪ್ರಧಾನಿ ಭ್ರಷ್ಟಾಚಾರ ಆರೋಪ ಸಾಬೀತುಪಡಿಸಿದರೆ ರಾಜಕೀಯ ನಿವೃತ್ತಿ: ಸಿದ್ದರಾಮಯ್ಯ ಸವಾಲು

ಮೈಸೂರು :"ಬಿಜೆಪಿಯವರ ಮೇಲೆ ಅನೇಕ ಆರೋಪಗಳಿವೆ. ಕರೋನಾ ಸಂದರ್ಭದಲ್ಲಿ ಬಿಜೆಪಿ ಸರ್ಕಾರ ಮಾಡಿರುವ ಅವ್ಯವಹಾರಗಳ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಡಿ.ಕುನ್ಹಾ ಆಯೋಗ ವರದಿ ಸಲ್ಲಿಸಿದ್ದು, 330 ರೂಪಾಯಿಗೆ ಸಿಗುವ ಪಿಪಿಇ ಕಿಟ್ ನ್ನು 2140 ರೂಪಾಯಿಗಳಿಗೆ ಖರೀದಿ ಮಾಡಿದ್ದಾರೆ. ಇದಕ್ಕೆ ನರೇಂದ್ರ ಮೋದಿ ಏನು ಹೇಳುತ್ತಾರೆ? ಭ್ರಷ್ಟಾಚಾರ ಮಾಡಿರುವುದು ಅವರ ಸರ್ಕಾರ, ನಮ್ಮ ಸರ್ಕಾರದಲ್ಲಿ ಯಾವುದೇ ಭ್ರಷ್ಟಾಚಾರವಾಗಿಲ್ಲ. ಭ್ರಷ್ಟಾಚಾರ ಮಾಡುವುದೂ ಇಲ್ಲ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೈಸೂರಿನಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ʼನರೇಂದ್ರ ಮೋದಿ ಅವರು ಅಬಕಾರಿ ಇಲಾಖೆಯಲ್ಲಿ 700 ಕೋಟಿ ವಸೂಲಿ ಮಾಡಿದ್ದಾರೆ ಎಂದು ಸುಳ್ಳು ಹೇಳುತ್ತಿದ್ದಾರೆ. ಒಂದೇ ಒಂದು ರೂಪಾಯಿ ವಸೂಲಿ ಮಾಡಿರುವುದನ್ನು ನಿರೂಪಿಸಿದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸವಾಲು ಹಾಕಿದರು. ಅವರು ಪ್ರಧಾನ ಮಂತ್ರಿ ಸ್ಥಾನ ನೀಡಲು ಸಿದ್ಧರಿದ್ದಾರೆಯೇ ? ಸುಳ್ಳು ಹೇಳಲು ಇತಿಮಿತಿ ಇರಬೇಕುʼ ಎಂದರು.

ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪಕ್ಷ ನೂರಕ್ಕೆ ನೂರು ಗೆಲ್ಲಲಿದೆ :

ಇಂದು ಮತದಾನ ನಡೆಯುತ್ತಿರುವ ಮೂರೂ ಕ್ಷೇತ್ರಗಳಲ್ಲಿ ಜನಸ್ಪಂದನೆ ನೋಡಿದರೆ ಕಾಂಗ್ರೆಸ್ ಪಕ್ಷ ನೂರಕ್ಕೆ ನೂರು ಗೆಲ್ಲಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.

ಬಂಡೀಪುರದಲ್ಲಿ ರಾತ್ರಿ ಸಂಚಾರ ಪ್ರಾರಂಭಿಸುವ ಬಗ್ಗೆ ಚರ್ಚೆ, ಪ್ರಸ್ತಾವನೆ ಇಲ್ಲ :

ಬಂಡೀಪುರದಲ್ಲಿ ರಾತ್ರಿ ಸಂಚಾರ ಪುನಃ ಪ್ರಾರಂಭಿಸುವ ಬಗ್ಗೆ ಚರ್ಚೆಯಾಗಿಲ್ಲ. ಸರ್ಕಾರದ ಮುಂದೆ ಈ ಕುರಿತ ಪ್ರಸ್ತಾವನೆ ಇಲ್ಲ ಎಂದು ಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದರು.

ಸಚಿವ ಸಂಪುಟಕ್ಕೆ ನಾಗೇಂದ್ರ? :

ಮಾಜಿ ಸಚಿವ ನಾಗೇಂದ್ರ ಅವರನ್ನು ಸಚಿವ ಸಂಪುಟಕ್ಕೆ ಪುನಃ ಸೇರ್ಪಡೆಗೊಳ್ಳಿಸಲಾಗುವುದೇ ಎಂಬ ಸುದ್ದಿಗಾರರ ಪ್ರಶ್ನೆಗೆ, ಮಾಜಿ ಸಚಿವ ಬಿ ನಾಗೇಂದ್ರ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕೆಂದು ಅನೇಕರು ಕೇಳಿದ್ದಾರೆ. ಉಪಚುನಾವಣೆ ಬಳಿಕ ನೋಡೋಣ ಎಂದಿದ್ದೇನೆ. ಅದನ್ನೇ ಸಂಪುಟ ಪುನಾರಚನೆ ಎಂದು ಬಿಂಬಿಸಬೇಡಿ ಎಂದರು.

ಸುಳ್ಳು ಆರೋಪಗಳ ಮೇಲೆ ಈಡಿ ತನಿಖೆ :

ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಈಡಿ ತನಿಖೆ ನಡೆಯುತ್ತಿರುವ ಬಗ್ಗೆ ಪ್ರತಿಕ್ರಿಯಿಸಿ, ʼಈಡಿಯವರು ಕಾನೂನು ಪ್ರಕಾರ ಮಾಡುವ ತನಿಖೆ ನಡೆಸಲಿ, ಅದಕ್ಕೆ ಯಾವುದೇ ರೀತಿಯ ಪ್ರತಿರೋಧವನ್ನು ನಾವು ಒಡ್ಡುವುದಿಲ್ಲ. ಈಡಿ ತನಿಖೆ ನಿಷ್ಪಪಕ್ಷಪಾತವಾಗಿ ನಡೆಯುತ್ತಿದೆಯೇ ಇಲ್ಲವೇ ಎಂಬುದರ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ಆದರೆ ಸುಳ್ಳು ಆರೋಪಗಳ ಮೇಲೆ ತನಿಖೆ ನಡೆಯುತ್ತಿದೆ ಎಂಬುದಷ್ಟೇ ಹೇಳಬಲ್ಲೇʼ ಎಂದರು.

ಬಿಜೆಪಿಗೆ ಕೋಮುಗಳ ನಡುವೆ ಬೆಂಕಿ ಹಚ್ಚುವುದೇ ಕೆಲಸ :

ಸರ್ಕಾರಿ ಕಾಮಗಾರಿಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡುವ ಬಗ್ಗೆ ಹಾಗೂ ಈ ಬಗ್ಗೆ ಬಿಜೆಪಿ ಟೀಕಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಹಿಂದುಳಿದ ವರ್ಗ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಗುತ್ತಿಗೆಗಳಲ್ಲಿ ಮೀಸಲಾತಿ ನೀಡಿರುವಂತೆ ಮುಸ್ಲಿಮರಿಗೂ ಮೀಸಲಾತಿ ನೀಡಿ ಎಂದು ಬೇಡಿಕೆಯಿಟ್ಟಿದ್ದಾರೆ. ಆದರೆ ಈ ಬಗ್ಗೆ ಯಾವುದೇ ತೀರ್ಮಾನ ಸರ್ಕಾರ ತೆಗೆದುಕೊಂಡಿಲ್ಲ. ಬಿಜೆಪಿಯವರಿಗೆ ಕೋಮುವಾದವನ್ನು ಸೃಷ್ಟಿಸುವುದೇ ಕಾಯಕವಾಗಿದೆ. ಕೋಮುಗಳ ನಡುವೆ ಬೆಂಕಿ ಹಚ್ಚುವ ಕೆಲಸದಲ್ಲಿ ಅವರು ನಿರತರಾಗಿದ್ದಾರೆ. ಬಿಜೆಪಿಯವರೆಂದೂ ಸಮಾಜದಲ್ಲಿ ಶಾಂತಿ, ಸೋದರತ್ವ ನೆಲೆಸಬೇಕೆಂದು ಬಯಸಿದವರೇ ಅಲ್ಲ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X