Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಭಾರತಕ್ಕೆ ವಾಪಸಾಗಿ ಪೊಲೀಸರಿಗೆ ಶರಣಾಗು:...

ಭಾರತಕ್ಕೆ ವಾಪಸಾಗಿ ಪೊಲೀಸರಿಗೆ ಶರಣಾಗು: ಲೈಂಗಿಕ ಹಗರಣ ಆರೋಪಿ, ಮೊಮ್ಮಗ ಪ್ರಜ್ವಲ್‌ ರೇವಣ್ಣಗೆ ಎಚ್‌.ಡಿ. ದೇವೇಗೌಡ ತಾಕೀತು

ವಾರ್ತಾಭಾರತಿವಾರ್ತಾಭಾರತಿ23 May 2024 4:48 PM IST
share
ಭಾರತಕ್ಕೆ ವಾಪಸಾಗಿ ಪೊಲೀಸರಿಗೆ ಶರಣಾಗು: ಲೈಂಗಿಕ ಹಗರಣ ಆರೋಪಿ, ಮೊಮ್ಮಗ ಪ್ರಜ್ವಲ್‌ ರೇವಣ್ಣಗೆ ಎಚ್‌.ಡಿ. ದೇವೇಗೌಡ ತಾಕೀತು

ಬೆಂಗಳೂರು: ಲೈಂಗಿಕ ಹಗರಣದಲ್ಲಿ ಆರೋಪಿಯಾಗಿರುವ ಹಾಗೂ ಬಂಧನ ವಾರಂಟ್‌ ಎದುರಿಸುತ್ತಿರುವ ತಮ್ಮ ಮೊಮ್ಮಗನಿಗೆ ಜೆಡಿ(ಎಸ್)‌ ವರಿಷ್ಠ ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ ಕಟು ಎಚ್ಚರಿಕೆ ನೀಡಿದ್ದಾರೆ. “ಭಾರತಕ್ಕೆ ವಾಪಸಾಗು, ಪೊಲೀಸರಿಗೆ ಶರಣಾಗು, ಇಲ್ಲದೇ ಹೋದಲ್ಲಿ ನನ್ನ ಕೋಪಕ್ಕೆ ತುತ್ತಾಗುವೆ,” ಎಂದು ದೇವೇಗೌಡ ಪ್ರಜ್ವಲ್‌ಗೆ ಬರೆದ ಪತ್ರವೊಂದನ್ನು ಎಕ್ಸ್‌ನಲ್ಲಿ ಪೋಸ್ಟ್‌ ಮಡಿದ್ದಾರೆ.

“ನಾನು ಪ್ರಜ್ವಲ್‌ ರೇವಣ್ಣನಿಗೆ ಎಚ್ಚರಿಕೆ ನೀಡಿದ್ದೇನೆ, ಎಲ್ಲಿದ್ದರೂ ತಕ್ಷಣ ವಾಪಸಾಗುವಂತೆ ಮತ್ತು ಕಾನೂನು ಪ್ರಕ್ರಿಯೆಗೆ ಒಳಗಾಗುವಂತೆ ಸೂಚಿಸಿದ್ದೇನೆ. ಅವನು ಇನ್ನು ನನ್ನ ತಾಳ್ಮೆಯನ್ನು ಪರೀಕ್ಷಿಸಕೂಡದು,” ಎಂದು ದೇವೇಗೌಡ ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಮೇ 23, 2024 ದಿನಾಂಕವಿರುವ ಪತ್ರದ ಶೀರ್ಷಿಕೆ “ಪ್ರಜ್ವಲ್‌ ರೇವಣ್ಣನಿಗೆ ನನ್ನ ಎಚ್ಚರಿಕೆ” ಎಂಬುದಾಗಿದೆ.

“ನಾನು ಮೇ18ರಂದು ದೇವಸ್ಥಾನಕ್ಕೆ ಹೋಗುವ ಸಂದರ್ಭ ಪ್ರಜ್ವಲ್‌ ರೇವಣ್ಣ ಬಗ್ಗೆ ಮಾಧ್ಯಮದ ಜೊತೆ ಮಾತನಾಡಿದ್ದೆ. ಆ ಆಘಾತ ಮತ್ತು ಆತ ನನಗೆ, ಇಡೀ ಕುಟುಂಬಕ್ಕೆ, ಸಹೋದ್ಯೋಗಿಗಳಿಗೆ, ಸ್ನೇಹಿತರಿಗೆ ಮತ್ತು ಪಕ್ಷ ಕಾರ್ಯಕರ್ತರಿಗೆ ನೀಡಿದ ನೋವಿನಿಂದ ಹೊರಬರಲು ನನಗೆ ಸ್ವಲ್ಪ ಸಮಯವಾಯಿತು,” ಎಂದು ದೇವೇಗೌಡ ಬರೆದಿದ್ದಾರೆ.

“ಆತ ತಪ್ಪಿತಸ್ಥನೆಂದು ತಿಳಿದಲ್ಲಿ ಆತನಿಗೆ ಕಾನೂನಿನಡಿಯಲ್ಲಿ ಅತ್ಯಂತ ಕಠಿಣ ಶಿಕ್ಷೆ ನೀಡಬೇಕೆಂದು ನಾನು ಹೇಳಿದ್ದೇನೆ. ನನ್ನ ಪುತ್ರ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಕೂಡ ಈ ಹಗರಣ ಆರಂಭಗೊಂಡಂದಿನಿಂದ ಇದೇ ಅಭಿಪ್ರಾಯ ಹೊಂದಿದ್ದಾರೆ.”

“ಕಳೆದ ಕೆಲ ವಾರಗಳಲ್ಲಿ ಜನರು ನನ್ನ ಹಾಗೂ ಕುಟುಂಬದ ವಿರುದ್ಧ ಅತ್ಯಂತ ಕಟು ಮಾತುಗಳನ್ನಾಡಿದ್ದಾರೆ. ಅದರ ಅರಿವು ನನಗಿದೆ. ಅವರನ್ನು ನಿಲ್ಲಿಸಲು ನಾನು ಬಯಸುವುದಿಲ್ಲ, ಟೀಕಿಸಲೂ ಬಯಸುವುದಿಲ್ಲ. ವಾಸ್ತವ ಹೊರಬರುವ ತನಕ ಕಾಯಿರಿ ಎಂದು ಅವರೊಂದಿಗೆ ಹೇಳಲೂ ನಾನು ಪ್ರಯತ್ನಿಸುತ್ತಿಲ್ಲ.”

“ಪ್ರಜ್ವಲ್‌ ಚಟುವಟಿಕೆಗಳ ಬಗ್ಗೆ ನನಗೆ ತಿಳಿದಿರಲಿಲ್ಲ ಎಂದು ಜನರಿಗೆ ಮನವರಿಕೆ ಮಾಡಲು ನನಗೆ ಸಾಧ್ಯವಾಗುತ್ತಿಲ್ಲ, ಅವನನ್ನು ರಕ್ಷಿಸಲು ನನಗೆ ಯಾವುದೇ ಇಚ್ಛೆಯಿಲ್ಲ ಎಂದು ಅವರಿಗೆ ಮನವರಿಕೆ ಮಾಡಿಕೊಡಲು ನನಗೆ ಸಾಧ್ಯವಿಲ್ಲ. ಆತನ ಚಲನವಲನಗಳು, ಆತನ ವಿದೇಶ ಪ್ರವಾಸದ ಬಗ್ಗೆ ನನಗೆ ಅರಿವಿರಲಿಲ್ಲ ಎಂದೂ ಜನರಿಗೆ ಮನವರಿಕೆ ಮಾಡಲು ನನಗೆ ಸಾಧ್ಯವಿಲ್ಲ. ನನ್ನ ಆತ್ಮಸಾಕ್ಷಿಗೆ ಉತ್ತರ ನೀಡುವುದನ್ನು ನಾನು ನಂಬಿದ್ದೇನೆ. ನಾನು ದೇವರನ್ನು ನಂಬುತ್ತೇನೆ ಮತ್ತು ದೇವರಿಗೆ ಸತ್ಯ ತಿಳಿದಿದೆ ಎಂದು ನನಗೆ ಗೊತ್ತು.”

“ಈ ಘಟ್ಟದಲ್ಲಿ ನಾನು ಮಾಡಬಹುದಾದ ಒಂದೇ ಕೆಲಸವೆಂದರೆ ಆತನಿಗೆ ಕಟು ಎಚ್ಚರಿಕೆ ನೀಡುವುದು, ಎಲ್ಲಿದ್ದರೂ ವಾಪಸ್‌ ಬಂದು ಪೊಲೀಸರಿಗೆ ಶರಣಾಗು ಎಂದು ಮಾತ್ರ ಹೇಳಬಲ್ಲೆ. ಇದು ನಾನು ಮಾಡುತ್ತಿರುವ ವಿನಂತಿಯಲ್ಲ, ಇದೊಂದು ಎಚ್ಚರಿಕೆ. ಆತ ಈ ಎಚ್ಚರಿಕೆ ಆಲಿಸದೇ ಇದ್ದರೆ ಆತ ನನ್ನ ಕೋಪ ಮತ್ತು ಕುಟುಂಬದ ಎಲ್ಲಾ ಸದಸ್ಯರ ಕೋಪಕ್ಕೆ ತುತ್ತಾಗಬೇಕು. ಆತನ ವಿರುದ್ಧದ ಆರೋಪಗಳ ಕುರಿತಂತೆ ನ್ಯಾಯ ಪ್ರಕ್ರಿಯೆ ನಡೆಯಬಹುದು, ಆದರೆ ಕುಟುಂಬದ ಮಾತು ಕೇಳದೇ ಇದ್ದರೆ ಆತ ಒಂಟಿಯಾಗಿ ಬಿಡುತ್ತಾನೆ. ಆತನಿಗೆ ನನ್ನ ಮೇಲೆ ಏನಾದರೂ ಗೌರವ ಉಳಿದಿದ್ದರೆ ತಕ್ಷಣ ವಾಪಸಾಗಬೇಕು. ಆತನ ವಿರುದ್ಧದ ತನಿಖೆಯಲ್ಲಿ ನಾನು ಮತ್ತು ನನ್ನ ಕುಟುಂಬ ಯಾವುದೇ ಹಸ್ತಕ್ಷೇಪ ನಡೆಸುವುದಿಲ್ಲ ಎಂದು ಸ್ಪಷ್ಟಪಡಿಸುತ್ತೇನೆ. ಜನರು ನನ್ನ ಮೇಲಿರಿಸಿರುವ ನಂಬಿಕೆಯನ್ನು ಮರಳಿ ಪಡೆಯುವುದು ನನಗೆ ತುಂಬಾ ಮುಖ್ಯ. ನನ್ನ ರಾಜಕೀಯ ಜೀವನದ 60 ವರಷಗಳಿಗೂ ಹೆಚ್ಚು ಸಮಯ ಅವರು ನನ್ನನ್ನು ಬೆಂಬಲಿಸಿದ್ದಾರೆ, ಅವರಿಗೆ ನಾನು ಚಿರಋಣಿ. ನಾನು ಜೀವಂತವಿರುವ ತನಕ ಅವರ ನಿರೀಕ್ಷೆ ಹುಸಿಯಾಗಿಸುವುದಿಲ್ಲ,” ಎಂದು ದೇವೇಗೌಡ ತಮ್ಮ ಪತ್ರದಲ್ಲಿ ಬರೆದಿದ್ದಾರೆ.

ಪ್ರಜ್ವಲ್ ರೇವಣ್ಣಗೆ ದೇವೇಗೌಡ ಅವರು ಬರೆದ ಪತ್ರ:

ನಾನು ಮೇ 18ನೇ ತಾರೀಖಿನಂದು ದೇವಸ್ಥಾನಕ್ಕೆ ಹೊರಟಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣನ ಕುರಿತಾಗಿ ಮಾತನಾಡಿದ್ದೆ. ಆತ ನನಗೆ. ನನ್ನ ಕುಟುಂಬಕ್ಕೆ, ನನ್ನ ಸಹೋದ್ಯೋಗಿಗಳಿಗೆ, ಸ್ನೇಹಿತರಿಗೆ ಮತ್ತು ನನ್ನ ಪಕ್ಷದ ಕಾರ್ಯಕರ್ತರಿಗೆ ತಂದೊಡ್ಡಿರುವ ಆಘಾತ ಮತ್ತು ನೋವಿನಿಂದ ಹೊರಬಂದು ಮಾತನಾಡಲು ಕೊಂಚ ಸಮಯ ಹಿಡಿಯಿತು. ನಾನು ಈಗಾಗಲೇ ಸ್ಪಷ್ಟಪಡಿಸಿರುವ ಹಾಗೆ ಕಾನೂನಿನ ಪ್ರಕಾರ ಅವನು ತಪ್ಪಿತಸ್ಥನೆಂದಾದರೆ, ಅವನಿಗೆ ಅತ್ಯಂತ ಕಠಿಣ ಶಿಕ್ಷೆ ವಿಧಿಸಬೇಕು. ನನ್ನ ಈ ನಿಲುವನ್ನು ನನ್ನ ಮಗ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಹಗರಣ ಹೊರಬಿದ್ದ ಮೊದಲ ದಿನದಿಂದಲೇ ಪ್ರತಿಪಾದಿಸಿದ್ದಾರೆ.

ಈ ಕೆಲವು ವಾರಗಳಿಂದ ಜನರು ನನ್ನ ಮತ್ತು ನನ್ನ ಕುಟುಂಬದವರ ಕುರಿತಾಗಿ ಅತ್ಯಂತ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇದೆಲ್ಲವೂ ನನಗೆ ತಿಳಿದಿದೆ. ನಾನು ಅವರು ಮಾತನಾಡುವುದನ್ನು ನಿಲ್ಲಿಸುವ ಪ್ರಯತ್ನ ಮಾಡುವುದಿಲ್ಲ. ನಾನು ಅವರನ್ನು ಟೀಕೆ ಮಾಡಲೂ ಹೋಗುವುದಿಲ್ಲ. ಈ ಹಗರಣದ ಎಲ್ಲಾ ಸತ್ಯಾಂಶಗಳು ಹೊರಬರುವವರೆಗೂ ಅವರು ತಾಳ್ಮೆಯಿಂದ ಕಾಯಬೇಕಿತ್ತು ಎಂದು ಅವರೊಂದಿಗೆ ವಾದಕ್ಕೆ ಇಳಿಯುವುದಿಲ್ಲ. ಪ್ರಜ್ವಲ್‌ನ ಚಟುವಟಿಕೆಗಳ ಬಗ್ಗೆ ನನಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ನಾನು ಅವರಿಗೆ ಮನವರಿಕೆ ಮಾಡಿಕೊಡಲು ಸಾಧ್ಯವಿಲ್ಲ. ಅವನನ್ನು ರಕ್ಷಿಸುವ ಯಾವುದೇ ಇರಾದೆಯೂ ನನಗಿಲ್ಲ. ಅವನ ಈಗಿನ ಚಲನವಲನ ಮತ್ತು ಅವನ ವಿದೇಶಿ ಯಾತ್ರೆಯ ಬಗ್ಗೆ ನನಗೆ ಏನೂ ತಿಳಿದಿಲ್ಲ, ತಿಳಿದಿರಲಿಲ್ಲ ಎಂದು ನಾನು ಜನರಿಗೆ ಅರ್ಥ ಮಾಡಿಸಲು ಸಾಧ್ಯವಿಲ್ಲ. ನಾನು ನನ್ನ ಆತ್ಮಸಾಕ್ಷಿಗೆ ಮಾತ್ರ ಉತ್ತರಿಸಬಲ್ಲೆ. ನನಗೆ ದೇವರಲ್ಲಿ ನಂಬಿಕೆ ಇದೆ ಮತ್ತು ಆ ದೇವರಿಗೆ ಎಲ್ಲಾ ಸತ್ಯ ತಿಳಿದಿದೆ ಎಂದು ನಾನು ನಂಬಿದ್ದೇನೆ.

ನಾನು ಈಚಿನ ದಿನಗಳಲ್ಲಿ ನಡೆದಿರುವ ರಾಜಕೀಯ ಪಿತೂರಿಗಳು, ಚಿತಾವಣೆಗಳು, ಉತ್ತೇಕ್ಷೆಗಳು ಮತ್ತು ಮಿಥ್ಯಾರೋಪಗಳ ಬಗ್ಗೆ ಈಗ ವಿಶ್ಲೇಷಣೆ ಮಾಡಲು ಹೋಗುವುದಿಲ್ಲ. ಅವುಗಳನ್ನು ಮಾಡಿದವರು ದೇವರಿಗೆ ಉತ್ತರಿಸಬೇಕಾಗುತ್ತದೆ ಮತ್ತು ತಾವು ಎಸಗಿದ ಕೃತ್ಯಗಳಿಗೆ ಸೂಕ್ತ ಬೆಲೆ ತೆರಬೇಕಾಗುತ್ತದೆ ಎಂದು ನಂಬಿದ್ದೇನೆ. ನನ್ನ ಸತ್ಯ ಮತ್ತು ನೋವಿನ ಹೊರೆಯನ್ನು ಭಗವಂತನ ಪದತಳದಲ್ಲಿ ಇರಿಸಿದ್ದೇನೆ.

ಈ ಸಂದರ್ಭದಲ್ಲಿ ನಾನು ಈಗ ಒಂದು ಕೆಲಸವನ್ನಷ್ಟೆ ಮಾಡಬಲ್ಲೆ. ಅದೇನೆಂದರೆ, ಪ್ರಜ್ವಲ್‌ನು ಎಲ್ಲಿದ್ದರೂ ಬಂದು. ಪೊಲೀಸರ ಮುಂದೆ ಶರಣಾಗಿ, ವಿಚಾರಣೆಯನ್ನು ಎದುರಿಸಬೇಕು ಎಂದು ಯಾವುದೇ ಮುಲಾಜು, ಮರ್ಜಿಯಿಲ್ಲದೆ ಹೇಳಬಲ್ಲೆ ಮತ್ತು ಹೇಳುತ್ತಿದ್ದೇನೆ. ಇದು ನಾನು ಅವನಿಗೆ ಕೊಡುತ್ತಿರುವ ಎಚ್ಚರಿಕೆ ಎಂದು ಕೂಡ ತಿಳಿಯಬೇಕು. ಅವನು ಈ ಎಚ್ಚರಿಕೆಗೆ ಮನ್ನಣೆ ಕೊಡದಿದ್ದಲ್ಲಿ ಅವನು ನನ್ನ ಮತ್ತು ಕುಟುಂಬದವರೆಲ್ಲರ ಕೋಪವನ್ನೂ ಎದುರಿಸಬೇಕಾಗುತ್ತದೆ. ಅವನು ಎಸಗಿದ್ದಾನೆ ಎನ್ನಲಾದ ತಪ್ಪುಗಳನ್ನು ತೀರ್ಮಾನಿಸಲು ಕಾನೂನು ಇದೆ. ಆದರೆ ಈ ಎಚ್ಚರಿಕೆಗೆ ಅವನು ತಲೆಬಾಗದಿದ್ದಲ್ಲಿ, ಅವನು ಮನೆಯವರ ಕಣ್ಣಲ್ಲಿ ಏಕಾಂಗಿಯಾಗುವುದರಲ್ಲಿ ಸಂದೇಹವಿಲ್ಲ. ನನ್ನ ಬಗ್ಗೆ ಅವನಿಗೆ ಏನಾದರೂ ಗೌರವವಿದ್ದಲ್ಲಿ ಅವನು ಕೂಡಲೆ ಹಿಂದಿರುಗಿ ಬರಬೇಕು.

ನಾನಾಗಲಿ, ನನ್ನ ಕುಟುಂಬದವರಾಗಲಿ ಈ ವಿಚಾರಣೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಭರವಸೆ ಕೊಡುತ್ತೇನೆ. ಇದರಲ್ಲಿ ಯಾವುದೇ ಭಾವನೆಗೆ ಸಿಲುಕದೆ. ಅವನು ಎಸಗಿದ್ದಾನೆ ಎನ್ನಲಾದ ಕೃತ್ಯಗಳು ಮತ್ತು ತಪ್ಪುಗಳಿಂದ ನೊಂದಿರುವ, ಅನ್ಯಾಯಕ್ಕೆ ಒಳಗಾಗಿರುವ ಎಲ್ಲರಿಗೂ ನ್ಯಾಯ ಸಿಗುವುದಷ್ಟೆ ನನಗೆ ಮುಖ್ಯ. ಜನರ ವಿಶ್ವಾಸವನ್ನು ಮರಳಿ ಪಡೆಯುವುದಷ್ಟೆ ನನ್ನ ಗುರಿ. ಜನರು ಆರು ದಶಕಗಳ ಕಾಲದ ನನ್ನ ರಾಜಕೀಯ ಜೀವನದುದ್ದಕ್ಕೂ ನನ್ನ ಜೊತೆಗೆ ನಿಂತಿದ್ದಾರೆ. ಅವರಿಗೆ ನಾನು ಸದಾ ಋಣಿ ಮತ್ತು ನಾನು ಬದುಕಿರುವವರೆಗೂ ಅವರ ಹಿತದ ವಿರುದ್ಧ ನಡೆದುಕೊಳ್ಳುವುದಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X