ಅಧಿವೇಶನದ ಬಳಿಕ ಅನರ್ಹ ಬಿಪಿಎಲ್ ಕಾರ್ಡ್ ಪರಿಷ್ಕರಣೆ: ಸಚಿವ ಕೆ.ಎಚ್. ಮುನಿಯಪ್ಪ

ಬೆಂಗಳೂರು: ವಿಧಾನ ಮಂಡಲದ ಅಧಿವೇಶನ ಮುಗಿದ ಬಳಿಕ ಅನರ್ಹ ಬಿಪಿಎಲ್ ಕಾರ್ಡ್ ಪರಿಷ್ಕರಣೆ ಪ್ರಕ್ರಿಯೆ ಪ್ರಾರಂಭ ಮಾಡಲಾಗುವುದು ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.
ಸೋಮವಾರ ಪರಿಷತ್ತಿನ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಪ್ರತಾಪ್ ಸಿಂಹ ನಾಯಕ್ ಹಾಗೂ ಕಾಂಗ್ರೆಸ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕರ್ನಾಟಕದಲ್ಲಿ ಶೇ.74ರಷ್ಟು ಬಿಪಿಎಲ್ ಕಾರ್ಡ್‍ಗಳಿವೆ. ಬೇರೆ ಯಾವುದೇ ದಕ್ಷಿಣ ರಾಜ್ಯಗಳಲ್ಲಿ ಇಷ್ಟೊಂದು ಬಿಪಿಎಲ್ ಕಾರ್ಡ್‍ಗಳಿಲ್ಲ. ಈಗ 1.28 ಕೋಟಿ ಕಾರ್ಡ್‍ಗೆ ಅಕ್ಕಿ ಕೊಡಲಾಗುತ್ತಿದೆ. ಇನ್ನೂ 3.27 ಲಕ್ಷ ಬಿಪಿಎಲ್ ಕಾರ್ಡ್ ಕೊಡಲು ಬಾಕಿ ಇದೆ ಎಂದರು.
ಎಪಿಎಲ್‍ಗೆ ಅರ್ಹತೆ ಇರುವವರು ಬಿಪಿಎಲ್ ಕಾರ್ಡ್ ಪಡೆದಿದ್ದಾರೆ. ಅಧಿವೇಶನ ಮುಗಿದ ಬಳಿಕ ಅದರ ಪರಿಷ್ಕರಣೆ ಶುರು ಮಾಡುತ್ತೇವೆ. ಅನರ್ಹರ ಬಿಪಿಎಲ್ ಕಾರ್ಡ್ ರದ್ದು ಮಾಡಿ ಅರ್ಜಿ ಹಾಕಿರುವ ಅರ್ಹರಿಗೆ ಬಿಪಿಎಲ್ ಕಾರ್ಡ್ ಕೊಡುತ್ತೇವೆ ಎಂದು ಕೆ.ಎಚ್.ಮುನಿಯಪ್ಪ ಹೇಳಿದರು.
Next Story





