ರಾಜ್ಯದಲ್ಲಿ ‘ಎಸ್ಐಆರ್’ ಅವಧಿ ಪರಿಷ್ಕರಣೆ : ಚುನಾವಣಾ ಆಯೋಗ

ಸಾಂದರ್ಭಿಕ ಚಿತ್ರ | PC : PTI
"ಬಿಎಲ್ಒಗಳು ಮನೆ-ಮನೆಗೆ ಭೇಟಿ ನೀಡುವ ಅವಧಿ ಆ.8ರ ವರೆಗೆ, ಆ.17ಕ್ಕೆ ಕರಡು ಮತದಾರರ ಪಟ್ಟಿ ಪ್ರಕಟ"
ಬೆಂಗಳೂರು : ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ(ಎಸ್ಐಆರ್) ಪ್ರಕ್ರಿಯೆ ಅವಧಿಯನ್ನು ಭಾರತೀಯ ಚುನಾವಣಾ ಆಯೋಗವು ಪರಿಷ್ಕರಿಸಿ ಆದೇಶಿಸಿದೆ.
ಈ ಸಂಬಂಧ ಬುಧವಾರ ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ.ಅನ್ಬುಕುಮಾರ್ ಅವರಿಗೆ ಪತ್ರ ಬರೆದಿರುವ ಭಾರತೀಯ ಚುನಾವಣಾ ಆಯೋಗದ ಅಧೀನ ಕಾರ್ಯದರ್ಶಿ ಸಂದೀಪ್ ಕುಮಾರ್, ಎಸ್ಐಆರ್ ಚಟುವಟಿಕೆಗಳ ಪರಿಷ್ಕೃತ ವೇಳಾಪಟ್ಟಿಯನ್ನು ಕಳುಹಿಸಿಕೊಟ್ಟಿದ್ದಾರೆ.
ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ ನೀಡುವ ಅವಧಿಯನ್ನು ಆ.8, ಮತಗಟ್ಟೆಗಳ ತಾರ್ಕಿಕ ಮರು ಹೊಂದಾಣಿಕೆ/ಮರು ಜೋಡಣೆ ಆ.8, ಕರಡು ಮತದಾರರ ಪಟ್ಟಿಯ ಪ್ರಕಟಣೆ ಆ.17, ಹಕ್ಕು ಮತ್ತು ಆಕ್ಷೇಪಣೆಗಳನ್ನು ಆ.17 ರಿಂದ ಸೆ.16ರವರೆಗೆ ಸಲ್ಲಿಸಲು ಕಾಲಾವಕಾಶ ನೀಡಲಾಗಿದೆ.
ಆ.17 ರಿಂದ ಅ.15ರವರೆಗೆ ನೋಟಿಸ್ ಹಂತ, ಹಕ್ಕು ಮತ್ತು ಆಕ್ಷೇಪಣೆಗಳ ವಿಲೇವಾರಿ ನಡೆಯಲಿದ್ದು, ಅ.19ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಸಂದೀಪ್ ಕುಮಾರ್ ತಿಳಿಸಿದ್ದಾರೆ.
Next Story




