ಹಳೆಹುಬ್ಬಳ್ಳಿ ಗಲಭೆ ಪ್ರಕರಣ: ಇಬ್ಬರಿಗೆ ಜಾಮೀನು ಮಂಜೂರು

ಹುಬ್ಬಳ್ಳಿ: ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ಎದುರು 2022ರ ಎಪ್ರಿಲ್ 17ರಂದು ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ಇಬ್ಬರು ಆರೋಪಿಗಳಿಗೆ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳಾದ ನಾಲತವಾಡ ಹಾಗೂ ಸಿಕಂದರ ಎಂಬವರಿಗೆ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.
ಪ್ರವಾದಿ ಮುಹಮ್ಮದ್ ಅವರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದನ್ನು ಖಂಡಿಸಿ ಅಂದು ಸೇರಿದ್ದ ಗುಂಪು ಕಲ್ಲು ತೂರಾಟ ನಡೆಸಿತ್ತು. ಪೊಲೀಸ್ ವಾಹನಗಳನ್ನು ಜಖಂ ಗೊಳಿಸಲಾಗಿತ್ತು ಎಂದು ಆರೋಪಿಸಲಾಗಿತ್ತು. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
Next Story





