Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ರಾಜ್ಯದಲ್ಲಿ ಹೂಡಿಕೆ’: ಕೈಗಾರಿಕಾ ಸಚಿವ...

‘ರಾಜ್ಯದಲ್ಲಿ ಹೂಡಿಕೆ’: ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಜತೆ ರೋಲ್ಸ್ ರಾಯ್ಸ್ ಕಂಪನಿ ಮಾತುಕತೆ

ವಾರ್ತಾಭಾರತಿವಾರ್ತಾಭಾರತಿ16 July 2025 8:20 PM IST
share
‘ರಾಜ್ಯದಲ್ಲಿ ಹೂಡಿಕೆ’: ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಜತೆ ರೋಲ್ಸ್ ರಾಯ್ಸ್ ಕಂಪನಿ ಮಾತುಕತೆ

ಬೆಂಗಳೂರು,: ಜಾಗತಿಕ ಮಟ್ಟದ ಅಗ್ರಗಣ್ಯ ಕಂಪನಿಗಳಲ್ಲಿ ಒಂದಾಗಿರುವ ಮತ್ತು ರಕ್ಷಣೆ ಹಾಗೂ ವೈಮಾಂತರಿಕ್ಷ ವಲಯದಲ್ಲಿ ಹೆಸರು ಮಾಡಿರುವ ರೋಲ್ಸ್ ರಾಯ್ಸ್ ಕಂಪನಿಯು ರಾಜ್ಯದಲ್ಲಿ ಮಾಡಲು ಉದ್ದೇಶಿಸಿರುವ ಬಂಡವಾಳ ಹೂಡಿಕೆ-ವಿಸ್ತರಣೆ, ಅದರ ಭವಿಷ್ಯದ ಯೋಜನೆಗಳು ಮತ್ತು ತಂತ್ರಜ್ಞಾನ ಸೌಲಭ್ಯ ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಆ ಕಂಪನಿಯ ಉನ್ನತ ಮಟ್ಟದ ನಿಯೋಗದ ಜತೆ ಬುಧವಾರ ನಗರದಲ್ಲಿ ಮಹತ್ವದ ಮಾತುಕತೆ ನಡೆಸಿದ್ದಾರೆ.

ರೋಲ್ಸ್ ರಾಯ್ಸ್ ನಿಯೋಗದಲ್ಲಿ ಅದರ ಜಾಗತಿಕ ಮಟ್ಟದ ನಿರ್ದೇಶಕ ಫಿಲ್ ಪ್ರೀಸ್ಟ್, ಭಾರತದಲ್ಲಿನ ಬಿಝಿನೆಸ್ ಸರ್ವೀಸ್ ವಿಭಾಗದ ಮುಖ್ಯಸ್ಥ ಟಾಮ್ ಕ್ಯಾಂಡ್ರಿಕಾಲ್, ಡಿಫೆನ್ಸ್ ವಿಭಾಗದ ಭಾರತದ ಮುಖ್ಯಸ್ಥೆ ಗಾಯತ್ರಿ ಶರ್ಮ ಸಚಿವರನ್ನು ಭೇಟಿಯಾಗಿದ್ದರು.

ಉದ್ದೇಶಿತ ಹೈಟೆಕ್ ರಕ್ಷಣಾ ಮತ್ತು ವೈಮಾಂತರಿಕ್ಷ ಪಾರ್ಕ್ ಸ್ಥಾಪನೆಗೆ ದೇವನಹಳ್ಳಿ ತಾಲೂಕಿನಲ್ಲಿ ಪ್ರಸ್ತಾವಿತ ಭೂಸ್ವಾಧೀನವನ್ನು ಸರಕಾರವು ಕೈಬಿಟ್ಟ ಮರುದಿನವೇ ಈ ಮಾತುಕತೆ ನಡೆದಿರುವುದು ಗಮನಾರ್ಹವಾಗಿದೆ.

ರೋಲ್ಸ್ ರಾಯ್ಸ್ ಕಂಪನಿ ಜತೆಗಿನ ಮಾತುಕತೆ ಬಳಿಕ ಮಾತನಾಡಿದ ಎಂ.ಬಿ.ಪಾಟೀಲ್, ರಾಜ್ಯದಲ್ಲಿರುವ ಕೈಗಾರಿಕಾ ಬೆಳವಣಿಗೆಯ ಅವಕಾಶಗಳು ಮತ್ತು ಇಲ್ಲಿನ ರಕ್ಷಣಾ ಕಾರ್ಯಪರಿಸರದ ಬಗ್ಗೆ ನಿಯೋಗಕ್ಕೆ ಮನದಟ್ಟು ಮಾಡಿಕೊಡಲಾಗಿದೆ ಎಂದು ಹೇಳಿದರು.

ನಮ್ಮಲ್ಲಿರುವ ಆಧುನಿಕ ತಾಂತ್ರಿಕ ಪರಿಸರ, ದೀರ್ಘಕಾಲೀನ ದೂರದೃಷ್ಟಿ ಮತ್ತು ಪ್ರಗತಿಪರವಾಗಿರುವ ಕೈಗಾರಿಕಾ ನೀತಿಗಳನ್ನು ಅವರೂ ಮೆಚ್ಚಿಕೊಂಡಿದ್ದಾರೆ. ಜತೆಗೆ ಸಹಭಾಗಿತ್ವ ಹೆಚ್ಚಿಸಿಕೊಳ್ಳಲು ಕಂಪನಿಯ ಅಧಿಕಾರಿಗಳು ಒಲವು ವ್ಯಕ್ತಪಡಿಸಿದ್ದಾರೆ. ಈ ನಿಟ್ಟಿನಲ್ಲಿ ಕಂಪನಿಯ ಬೆಂಗಳೂರು ಘಟಕದ ವಿಸ್ತರಣೆ ಕೂಡ ನಡೆಯುತ್ತಿದ್ದು ಆ ಬಗ್ಗೆ ಚರ್ಚಿಸಲಾಯಿತು. ಸಂಸ್ಥೆಗೆ ಭೇಟಿ ನೀಡುವಂತೆ ಅವರು ಆಹ್ವಾನ ನೀಡಿದ್ದಾರೆ ಎಂದು ಎಂ.ಬಿ.ಪಾಟೀಲ್ ತಿಳಿಸಿದರು.

ದೇವನಹಳ್ಳಿಯಲ್ಲಿ ರೈತರ ಕೃಷಿ ಚಟುವಟಿಕೆಗಳನ್ನು ಪರಿಗಣಿಸಿ ಭೂಸ್ವಾಧೀನ ಕೈಬಿಡಲಾಗಿದೆ. ಆದರೆ, ರಾಜ್ಯದ ಎಲ್ಲ ಕಡೆಗಳಲ್ಲೂ ಕೈಗಾರಿಕೆಗಳಿಗೆ ಭೂಮಿ ಇದೆ. ಈ ಬಗ್ಗೆ ಹೂಡಿಕೆದಾರರು ಆತಂಕಕ್ಕೆ ಒಳಗಾಗಬೇಕಿಲ್ಲ. ಅವರು ಕೇಳಿದ ಕಡೆಗಳಲ್ಲಿ ಅವರಿಗೆ ಅಗತ್ಯವಿರುವಷ್ಟು ಭೂಮಿ ಕೊಡಲಾಗುವುದು. ರಾಜ್ಯದ ಕೈಗಾರಿಕಾ ಬೆಳವಣಿಗೆಯು ಅಬಾಧಿತವಾಗಿ ಮುಂದುವರಿಯಲಿದೆ. ನಾವೀಗ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ರಾಜ್ಯವಾಗಿದ್ದು, ಅದಕ್ಕೆ ತಕ್ಕಂತೆ ನಮ್ಮ ಉಪಕ್ರಮಗಳು ಇರಲಿವೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.

Tags

MB PatilRolls-Royce
share
ವಾರ್ತಾಭಾರತಿ
ವಾರ್ತಾಭಾರತಿ
Next Story
X