ಆರೆಸ್ಸೆಸ್ ನಿಷೇಧ ಮಾಡಲು ಸಾಧ್ಯವೇ ಇಲ್ಲ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ
ಬೆಂಗಳೂರು: ಆರೆಸ್ಸೆಸ್ ನಿಷೇಧ ಮಾಡಲು ಸಾಧ್ಯವೇ ಇಲ್ಲ. ಆದರೆ, ಕಾಂಗ್ರೆಸ್ ಸರಕಾರ ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಆರೆಸ್ಸೆಸ್ ವಿಷಯ ಮುನ್ನೆಲೆಗೆ ತಂದಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಶನಿವಾರ ಜೆಪಿ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಆರೆಸ್ಸೆಸ್ ಪಥ ಸಂಚಲನ ಇವತ್ತು ನಿನ್ನೆಯಿಂದ ಮಾಡುತ್ತಿಲ್ಲ. ದಶಕಗಳಿಂದ ಮಾಡಿಕೊಂಡು ಬರುತ್ತಿದೆ. ಆದರೆ, ಕಾಂಗ್ರೆಸ್ ಸರಕಾರ ತನ್ನ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಆರೆಸ್ಸೆಸ್ ವಿಷಯ ಮುನ್ನೆಲೆಗೆ ತಂದಿದೆ ಎಂದು ಟೀಕಿಸಿದರು.
ಸ್ವಲ್ಪ ದಿನ ಧರ್ಮಸ್ಥಳದ ಮೇಲೆ ಬಿದ್ದಿರಿ. ಎಸ್ಐಟಿ ಹೆಸರಿನಲ್ಲಿ ಕಾಲಹರಣ ಮಾಡಿದ್ದೀರಿ. ಸುಮ್ಮನೆ ಕಾಲಹರಣ ಮಾಡಿಕೊಂಡು ಜನರ ದಿಕ್ಕು ತಪ್ಪಿಸುತ್ತಿದ್ದಾರೆ ಎಂದ ಅವರು, ಮೊದಲು ಆರೆಸ್ಸೆಸ್ ಬಗ್ಗೆ ಮಾತಾಡೋದು ಬಿಟ್ಟು ಅಭಿವೃದ್ಧಿ ಕಡೆ ಗಮನ ಕೊಡಿ. ರಾಜ್ಯದಲ್ಲಿ ಇರುವ ಸಮಸ್ಯೆಗೆ ಪರಿಹಾರ ನೀಡಿ ಎಂದು ಹೇಳಿದರು.
ಸಚಿವ ಸತೀಶ್ ಜಾರಕಿಹೊಳಿ ಬಗ್ಗೆ ಯತೀಂದ್ರ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿ, ಡಾ.ಬಿ.ಆರ್.ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನದಲ್ಲಿ ಯಾರು ಬೇಕಾದರೂ ಈ ದೇಶದಲ್ಲಿ ರಾಜಕೀಯವಾಗಿ ಸಿಎಂ ಆಗಬಹುದು. ಅದು ಅವರ ಪಕ್ಷದ ವಿಚಾರ. ಅದನ್ನು ಕಟ್ಟಿಕೊಂಡು ನನಗೇನು ಆಗಬೇಕಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.







