Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. 108 ಅಂಬುಲೆನ್ಸ್ ಸಿಬ್ಬಂದಿಗಳಿಗೆ...

108 ಅಂಬುಲೆನ್ಸ್ ಸಿಬ್ಬಂದಿಗಳಿಗೆ ಸರ್ಕಾರದಿಂದ ವೇತನ ಬಾಕಿ ಉಳಿಸಿಕೊಂಡಿಲ್ಲ : ದಿನೇಶ್ ಗುಂಡೂರಾವ್

"ಅನಗತ್ಯವಾಗಿ ಸಿಬ್ಬಂದಿಗಳು ಮುಷ್ಕರಕ್ಕೆ ಮುಂದಾದರೆ ಪರ್ಯಾಯ ವ್ಯವಸ್ಥೆಗೂ ಸರ್ಕಾರ ಸಿದ್ಧವಿದೆ"

ವಾರ್ತಾಭಾರತಿವಾರ್ತಾಭಾರತಿ6 May 2024 9:25 PM IST
share
108 ಅಂಬುಲೆನ್ಸ್ ಸಿಬ್ಬಂದಿಗಳಿಗೆ ಸರ್ಕಾರದಿಂದ ವೇತನ ಬಾಕಿ ಉಳಿಸಿಕೊಂಡಿಲ್ಲ : ದಿನೇಶ್ ಗುಂಡೂರಾವ್

ಬೆಂಗಳೂರು : 108 ಆರೋಗ್ಯ ಕವಚದ ಅಂಬುಲೆನ್ಸ್ ಚಾಲಕರಿಗೆ ಸರ್ಕಾರದ ಕಡೆಯಿಂದ ಯಾವುದೇ ವೇತನ ಬಾಕಿ ಉಳಿಸಿಕೊಂಡಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಚಿವರು, ಅಂಬುಲೆನ್ಸ್ ಚಾಲಕರಿಗೆ ನ್ಯಾಯಯುತವಾಗಿ ಸಿಗಬೇಕಾದ ವೇತನವನ್ನ ಸರ್ಕಾರ ನೀಡುತ್ತಿದೆ. ಸರ್ಕಾರದಲ್ಲಿ ಯಾವುದೇ ಹಣಕಾಸಿನ ತೊಂದರೆ ಇಲ್ಲ. 108 ಅಂಬುಲೆನ್ಸ್ ಯೋಜನೆ ಸುಗಮವಾಗಿ ನಡೆಸಲು ಆರ್ಥಿಕ ವರ್ಷ 2023-24 ನೇ ಸಾಲಿನಲ್ಲಿ ಆರ್ಥಿಕ ಇಲಾಖೆಯಿಂದ ಆರೋಗ್ಯ ಇಲಾಖೆಗೆ ರೂ. 210.33 ಕೋಟಿಗಳ ಅನುದಾನವನ್ನು ಆಯವ್ಯಯದಲ್ಲಿ ಅನುಮೋದನೆಯಾಗಿದ್ದು, ಸದರಿ ಅನುದಾನದಲ್ಲಿ ಸೇವಾದಾರರೊಂದಿಗೆ ಮಾಡಿಕೊಂಡಿರುವ ಒಡಂಬಡಿಕೆಯನ್ವಯ ನಿಗದಿಯಾದ ರೂ. 162.40 ಕೋಟಿಗಳ ಪೂರ್ಣ ಅನುದಾನವನ್ನು ಸೇವಾದಾರರಿಗೆ ಬಿಡುಗಡೆಗೊಳಿಸಲಾಗಿದೆ ಎಂದರು.

2024-25ನೇ ಸಾಲಿನಲ್ಲಿ 108-ಆರೋಗ್ಯ ಕವಚ ಯೋಜನೆಗೆ ಆರ್ಥಿಕ ಇಲಾಖೆಯಿಂದ ಆರೋಗ್ಯ ಇಲಾಖೆಗೆ ರೂ. 260.33 ಕೋಟಿಗಳ ಅನುದಾನವನ್ನು ಆಯವ್ಯಯದಲ್ಲಿ ಅನುಮೋದನೆಯಾಗಿದ್ದು, ಸೇವಾದಾರರೊಂದಿಗೆ ಮಾಡಿಕೊಂಡಿರುವ ಒಡಂಬಡಿಕೆಯನ್ವಯ ವಾರ್ಷಿಕ ರೂ. 162.40 ಕೋಟಿಗಳ ಅನುದಾನವನ್ನು ಬಿಡುಗಡೆಗೊಳಿಸಬೇಕಾಗಿರುತ್ತದೆ. ಆರೋಗ್ಯ ಇಲಾಖೆ ಹಾಗೂ ಇ.ಎಂ.ಆರ್‌.ಐ ಗ್ರೀನ್‌ ಹೆಲ್ತ್‌ ಸಂಸ್ಥೆಯವರೊಂದಿಗೆ ಮಾಡಿಕೊಂಡಿರುವ ಒಡಂಬಡಿಕೆಯನ್ವಯ 711 ಆಂಬ್ಯುಲೆನ್ಸ್‌ಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಿ ಸೇವೆ ಒದಗಿಸಿದ್ದಲ್ಲಿ ಪ್ರತಿ ತ್ರೈಮಾಸಿಕಕ್ಕೆ ರೂ. 40.60 ಕೋಟಿಗಳಂತೆ ವಾರ್ಷಿಕ ರೂ. 162.40 ಕೋಟಿಗಳ ಅನುದಾನವು ಬಿಡುಗಡೆಗೊಳಿಸಲಾಗುವುದು ಎಂದು ತಿಳಿಸಿದರು.

ವಿಪಕ್ಷಗಳ ನಾಯಕರು ಅನಗತ್ಯವಾಗಿ ಗ್ಯಾರಂಟಿ ಯೋಜನೆಯಿಂದ ಹಣಕಾಸಿನ ತೊಂದರೆಯಾಗಿದೆ ಎಂದು 108 ಆರೋಗ್ಯ ಕವಚ ಯೋಜನೆಗೆ ತಳುಕು ಹಾಕುವುದರಲ್ಲಿ ಯಾವುದೇ ಹುರುಳಿಲ್ಲ ಎಂದು‌ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ 108 ವ್ಯವಸ್ಥೆಯಲ್ಲಿ ಒಂದಿಷ್ಟು ಲೋಪದೋಷಗಳು ಆಗಿರುವುದು ನಿಜ. 108 ಸಿಬ್ಬಂದಿಗಳಿಗೆ ಕನಿಷ್ಠಿ ವೇತನದ ಜಾರಿಗೊಳಿಸಿದ್ದಲ್ಲದೇ ಸರ್ಕಾರದ ಅನುಮತಿ ಇಲ್ಲದೇ ನಿಯಮಬಾಹಿರವಾಗಿ ಶೇ 45 ರಷ್ಟು ವೇತನ ಹೆಚ್ಚಳ ಮಾಡಲಾಗಿತ್ತು. ಇದೀಗ 108 ಸಿಬ್ಬಂದಿಗಳು ಶೇ 45 ರಷ್ಟು ವೇತನ ಹೆಚ್ಚಳ ಮಾಡಿರುವುದನ್ನು ಕಡಿತಗೊಳಿಸದಂತೆ ಬೇಡಿಕೆ ಇಡುತ್ತಿದ್ದಾರೆ ಎಂದು ಹೇಳಿದರು.

ನಮ್ಮ ಸರ್ಕಾರ ನಿಯಮಾನುಸಾರ ಕನಿಷ್ಠ ವೇತನ ನೀಡಲು ಬದ್ಧವಾಗಿದ್ದು, ಅದರಂತೆ ಅನುದಾನವನ್ನು ನೀಡುತ್ತಾ ಬಂದಿದೆ. ಪ್ರತಿಯೊಬ್ಬ ಅಂಬುಲೆನ್ಸ್ ಚಾಲಕರಿಗೆ 35 ಸಾವಿರಕ್ಕೂ ಹೆಚ್ವು ವೇತನ ದೊರೆಯುತ್ತಿದೆ. ಇದರ ಮೇಲೂ ಮೂಲ ವೇತನದಲ್ಲಿ ಶೇ 45 ರಷ್ಟು ಹೆಚ್ಚಳ ಮಾಡುವ ಬಗ್ಗೆ ಸಿಬ್ಬಂದಿಗಳು ಬೇಡಿಕೆ ಇಟ್ಟಿದ್ದು, ನಿಯಮಬಾಹಿರವಾಗಿ ಈ ಕ್ರಮ ಕೈಗೊಳ್ಳಲು ಸದ್ಯದ ಪರಿಸ್ಥಿತಿಯಲ್ಲಿ ಸಾಧ್ಯವಿಲ್ಲ. ಈ ಬಗ್ಗೆ 108 ಸಿಬ್ಬಂದಿಗಳನ್ನ ಕರೆದು ಚರ್ಚಿಸಿ ಮನವರಿಕೆ ಮಾಡಿಕೊಡಲಾಗಿದೆ. ಅಲ್ಲದೇ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಬದಲಾವಣೆ ಮಾಡಲು ಅವಕಾಶವಿಲ್ಲ ಎಂದು ಸಿಬ್ಬಂದಿಗಳಿಗೆ ತಿಳಿಸಲಾಗಿದೆ. ನ್ಯಾಯಯುತವಾಗ ಕನಿಷ್ಢ ವೇತನ ಸರ್ಕಾರ ನೀಡುತ್ತಿದ್ದು, ಸರ್ಕಾರದಲ್ಲಿ ಯಾವುದೇ ಹಣಕಾಸಿನ ಕೊರತೆಯಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು.

ಅಲ್ಲದೇ ಜಿವಿಕೆ ಇಎಂಆರ್ ಸಂಸ್ಥೆ ಹಾಗೂ ಚಾಲಕರ ನಡುವಿನ ವೇತನ ಪಾವತಿ ಸಮಸ್ಯೆಗಳ ಬಗ್ಗೆಯೂ ಸಂಸ್ಥೆಯವರೊಂದಿಗೆ ಇಲಾಖೆ ಆಯುಕ್ತರು ಚರ್ಚಿಸಿ, ವೇತನ ಬಾಕಿ ಉಳಿಸಿಕೊಳ್ಳದಂತೆ ಆದೇಶಿಸಿದ್ದಾರೆ. ಇದಕ್ಕೂ ಮೀರಿ 108 ಅಂಬುಲೆನ್ಸ್ ಸಿಬ್ಬಂದಿಗಳು ಮುಷ್ಕರಕ್ಕೆ ಮುಂದಾದರೆ ಪರ್ಯಾಯ ವ್ಯವಸ್ಥೆಗೆ ಸರ್ಕಾರ ಸಿದ್ಧವಿದೆ. 108 ಅಂಬ್ಯುಲೆನ್ಸ್ ಸೇವೆಯನ್ನ ನಿಲ್ಲಿಸಲು ಸಾಧ್ಯವಿಲ್ಲ. ಅನಿವಾರ್ಯವಾಗಿ ಸರ್ಕಾರ ಪರ್ಯಾಯ ವ್ಯವಸ್ಥೆಗೆ ಮುಂದಾಗಬೇಕಾಗಲಿದೆ. ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ ಎಂದರು.

ಹಿಂದಿನ ಸರ್ಕಾರವಿದ್ದ ವೇಳೆ ವ್ಯವಸ್ಥೆಯಲ್ಲಾದ ಲೋಪವನ್ನ ನಮ್ಮ ಸರ್ಕಾರ ಸರಿಪಡಿಸುತ್ತಿದೆ. ಟೆಂಡರ್ ಗಳನ್ನ ಕರೆಯದೇ ಜಿವಿಕೆ ಇಎಂಆರ್ ಸಂಸ್ಥೆಯೊಂದಿಗೆ ಒಡಂಬಡಿಕೆಯ ಮೂಲಕವೇ 108 ವ್ಯವಸ್ಥೆಯನ್ನು ಮುಂದುವರಿಸಿಕೊಂಡು ಬರಲಾಗಿದೆ. ನಮ್ಮ ಸರ್ಕಾರ ಬಂದ ಬಳಿಕ ನಿಯಮನುಸಾರ ಟೆಂಡರ್ ಕರೆಯಲು ಕ್ರಮ ಕೈಗೊಳ್ಳುತ್ತಿದೆ. ವ್ಯವಸ್ಥೆಯಲ್ಲಾದ‌ ಲೋಪಗಳನ್ನ ಸರಿಪಡಿಸುತ್ತಿರುವಾಗ ಸಿಬ್ಬಂದಿಗಳು ಸಹಕರಿಸಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ ಇದೇ ವೇಳೆ ಮನವಿ ಮಾಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X