Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‍ನ ಸಲೀಂ...

ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‍ನ ಸಲೀಂ ಅಹ್ಮದ್, ಬಿಜೆಪಿಯ ಪಿ.ಎಚ್.ಪೂಜಾರ್ ನಾಮಪತ್ರ: ನಾಳೆ ಚುನಾವಣೆ

ವಾರ್ತಾಭಾರತಿವಾರ್ತಾಭಾರತಿ13 Aug 2026 8:07 PM IST
share
ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್‍ನ ಸಲೀಂ ಅಹ್ಮದ್, ಬಿಜೆಪಿಯ ಪಿ.ಎಚ್.ಪೂಜಾರ್ ನಾಮಪತ್ರ: ನಾಳೆ ಚುನಾವಣೆ

ಬೆಂಗಳೂರು : ಹೊರಟ್ಟಿ ರಾಜೀನಾಮೆಯಿಂದಾಗಿ ತೆರವಾಗಿರುವ ಪರಿಷತ್ತಿನ ಸಭಾಪತಿ ಸ್ಥಾನಕ್ಕೆ ಅಭ್ಯರ್ಥಿಯಾಗಿ ಕಾಂಗ್ರೆಸ್‍ನ ಹಿರಿಯ ಸದಸ್ಯ ಸಲೀಂ ಅಹ್ಮದ್ ಹಾಗೂ ಬಿಜೆಪಿ ಸದಸ್ಯ ಪಿ.ಎಚ್. ಪೂಜಾರ್ ಗುರುವಾರ ವಿಧಾನ ಪರಿಷತ್‍ನ ಕಾರ್ಯದರ್ಶಿ ಜ್ಯೋತಿ ಅವರಿಗೆ ತಮ್ಮ ಉಮೇದುವಾರಿಕೆಯನ್ನು ಸಲ್ಲಿಸಿದರು.

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಪರಿಷತ್ ಸಭಾನಾಯಕ ಡಾ.ಯತೀಂದ್ರ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಸಮ್ಮುಖದಲ್ಲಿ ಕಾಂಗ್ರೆಸ್‍ನ ಅಭ್ಯರ್ಥಿ ಸಲೀಂ ಅಹ್ಮದ್ ನಾಮಪತ್ರ ಸಲ್ಲಿಸಿದರೆ, ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಬಿಜೆಪಿಯ ಸಿ.ಟಿ.ರವಿ, ಎನ್.ರವಿಕುಮಾರ್, ಜೆಡಿಎಸ್‍ನ ಭೋಜೇಗೌಡ, ಶರವಣ ಸಹಿತ ಮೈತ್ರಿಕೂಟದ ನಿಯೋಗದೊಂದಿಗೆ ಪಿ.ಎಚ್.ಪೂಜಾರ್, ಪರಿಷತ್ ಕಾರ್ಯದರ್ಶಿ ಕಚೇರಿಯಲ್ಲಿ ತಮ್ಮ ನಾಮಪತ್ರವನ್ನು ಸಲ್ಲಿಸಿದರು.

ನಾಳೆ(ಆ.14) ಬೆಳಗ್ಗೆ ಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, ಆಡಳಿತಾರೂಢ ಕಾಂಗ್ರೆಸ್‍ಗೆ ಬಹುಮತ ಇರುವುದರಿಂದ ಸಲೀಂ ಅಹ್ಮದ್ ಅವರು ಸಭಾಪತಿಯಾಗಿ ಅವಿರೋಧ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಉಪಸಭಾಪತಿ ಎಂ.ಕೆ.ಪ್ರಾಣೇಶ್ ರಾಜೀನಾಮೆಯಿಂದ ಸಭಾಪತಿ ಮತ್ತು ಉಪಸಭಾಪತಿಗಳು ಎರಡೂ ಸ್ಥಾನಗಳು ತೆರವಾಗಿವೆ.

‘ಸಭಾಪತಿ ಸ್ಥಾನಕ್ಕೆ ಬಿಜೆಪಿಯವರು ನಾಮಪತ್ರ ಸಲ್ಲಿಸಿರುವುದು ಅವರಿಗೆ ಬಿಟ್ಟ ವಿಚಾರ. ಆದರೆ, ಸರ್ವಾನುಮತದಿಂದ ಆಯ್ಕೆಯಾದರೆ ಒಳ್ಳೆಯದಿತ್ತು. ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸವಿದೆ’

-ಸಲೀಂ ಅಹ್ಮದ್, ಪರಿಷತ್ ಸಭಾಪತಿ ಸ್ಥಾನದ ಅಭ್ಯರ್ಥಿ.

‘ಆಡಳಿತ ಪಕ್ಷದ ಸಂವಿಧಾನದ ಬಾಹಿರ ನಡೆಯಿಂದ ಪರಿಷತ್ ಸಭಾಪತಿ ಹುದ್ದೆಗೆ ಚುನಾವಣೆ ನಡೆಯುವಂತಾಗಿದೆ. ಸಂಖ್ಯಾಬಲ ಇರಲಿ, ಇಲ್ಲದಿರಲಿ ಚುನಾವಣೆಯಲ್ಲಿ ಸ್ಪರ್ಧಿಸುವುದು ನಮ್ಮ ಪಕ್ಷದ ನಿಲುವು. ಎಲ್ಲರ ಸಹಮತದಿಂದ ನನ್ನನ್ನು ಈ ಸ್ಥಾನಕ್ಕೆ ಅಭ್ಯರ್ಥಿಯಾಗಲು ಸೂಚಿಸಿದ್ದಾರೆ. ಸೋಲು-ಗೆಲುವು ಸಹಜ, ಸ್ಪರ್ಧೆ ಅಷ್ಟೇ ಮುಖ್ಯ’

-ಪಿ.ಎಚ್.ಪೂಜಾರ್, ಪರಿಷತ್ ಸಭಾಪತಿ ಸ್ಥಾನದ ಅಭ್ಯರ್ಥಿ.

Tags

Salim AhmedPH Pujar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X