ಮುಂದೆಯೂ ಡಿ.ಕೆ.ಶಿವಕುಮಾರ್ ಮುಂದುವರೆದರೆ ತೊಂದರೆಯಿಲ್ಲ : ಸತೀಶ್ ಜಾರಕಿಹೊಳಿ

ಸತೀಶ್ ಜಾರಕಿಹೊಳಿ(PC : x/ANI)
ಬೆಂಗಳೂರು : ‘ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಮುಂದಿನ ವಿಧಾನಸಭೆ ಚುನಾವಣೆ ನಡೆದು ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದರಲ್ಲಿ ತಪ್ಪಿಲ್ಲ’ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲಸ ಮಾಡಿದವರಿಗೆ ಕೂಲಿ ಸಿಗಬೇಕು ಎಂಬುದಕ್ಕೆ ನನ್ನ ಸಹಮತ ಇದೆ. 2028ರ ವಿಧಾನಸಭೆ ಚುನಾವಣೆಗೆ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ತಯಾರಿ ನಡೆಸುವುದಾಗಿ ನಾವೆಲ್ಲರೂ ಈಗಾಗಲೇ ಹೇಳಿದ್ದೇವೆ ಎಂದು ಹೇಳಿದರು.
ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಿಗದೇ ಇರುವುದಕ್ಕೆ ತಮಗೆ ಯಾವುದೇ ಬೇಸರವಿಲ್ಲ. ಹರಿಪ್ರಸಾದ್ ಅವರಿಗೆ ಈಗಾಗಲೇ ಹೈಕಮಾಂಡ್ ಜವಾಬ್ದಾರಿ ನೀಡಿದೆ. ಅವರಿಗೆ ಸುದೀರ್ಘ ಪಕ್ಷ ಸಂಘಟನೆಯ ಅನುಭವ ಇದೆ ಎಂದು ನುಡಿದರು.
Next Story




