Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ದೇವೇಗೌಡರ ಭೇಟಿ ಹಿಂದೆ ರಾಜಕೀಯ...

ದೇವೇಗೌಡರ ಭೇಟಿ ಹಿಂದೆ ರಾಜಕೀಯ ಪ್ರಸ್ತಾಪವಿಲ್ಲ : ಸತೀಶ್ ಜಾರಕಿಹೊಳಿ

ವಾರ್ತಾಭಾರತಿವಾರ್ತಾಭಾರತಿ28 March 2025 6:55 PM IST
share
ದೇವೇಗೌಡರ ಭೇಟಿ ಹಿಂದೆ ರಾಜಕೀಯ ಪ್ರಸ್ತಾಪವಿಲ್ಲ : ಸತೀಶ್ ಜಾರಕಿಹೊಳಿ

ಬೆಂಗಳೂರು : ‘ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಭೇಟಿಯ ಹಿಂದೆ ಯಾವುದೇ ರಾಜಕೀಯ ಪ್ರಸ್ತಾಪವಿಲ್ಲ. ಕೇವಲ ಅಭಿವೃದ್ಧಿ ವಿಚಾರಗಳಷ್ಟೇ ಚರ್ಚೆಯಾಗಿವೆ’ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಇಂದಿಲ್ಲಿ ಸ್ಪಷ್ಟಪಡಿಸಿದ್ದಾರೆ.

ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಚ್.ಡಿ.ಕುಮಾರಸ್ವಾಮಿ, ವಿ.ಸೋಮಣ್ಣ ಸೇರಿದಂತೆ ಕೇಂದ್ರ ಸಚಿವರ ಭೇಟಿ ಪೂರ್ವ ನಿಗದಿಯಾಗಿತ್ತು. ಮಾಜಿ ಪ್ರಧಾನಿ ದೇವೇಗೌಡರ ಭೇಟಿ ಆಕಸ್ಮಿಕ. ಸಂಸತ್‍ಗೆ ತೆರಳುವ ಮಾರ್ಗದಲ್ಲಿ ಅವರ ಕಚೇರಿಯಿದ್ದು, ಅಲ್ಲಿ ಅವರನ್ನು ಭೇಟಿ ಮಾಡಿದೆ ಎಂದು ವಿವರಣೆ ನೀಡಿದರು.

ಹಾಸನದ ಹೆದ್ದಾರಿ ವಿಚಾರವಾಗಿ ಎಚ್.ಡಿ.ರೇವಣ್ಣ ಅವರ ಜೊತೆಯೂ ಚರ್ಚೆ ನಡೆಸಬೇಕಿತ್ತು. ಆದರೆ, ಆ ವೇಳೆಗೆ ಅವರು ಕೇಂದ್ರ ಹೆದ್ದಾರಿ ಮತ್ತು ಭೂ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರ ಜೊತೆ ಚರ್ಚಿಸಲು ತೆರಳಿದ್ದರು. ಹೀಗಾಗಿ ಅವರ ಭೇಟಿ ಸಾಧ್ಯವಾಗಲಿಲ್ಲ ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು.

ಹೊಸದಿಲ್ಲಿ ಭೇಟಿಯ ವೇಳೆ ಹನಿಟ್ರ್ಯಾಪ್‍ಗೆ ಸಂಬಂಧಪಟ್ಟಂತೆ ಯಾವುದೇ ಚರ್ಚೆಗಳಾಗಿಲ್ಲ. ಹೊಸದಿಲ್ಲಿಗೆ ಹೋಗಿ ರಾಜಕೀಯದ ದೂರುಗಳನ್ನು ನೀಡುವ ಅಗತ್ಯ ನಮಗಿಲ್ಲ ಎಂದು ಸತೀಶ್ ಜಾರಕಿಹೊಳಿ ಹೇಳಿದರು.

ಕಾಂಗ್ರೆಸ್ ಪಕ್ಷಕ್ಕೆ ಈಗಾಗಲೇ 138 ಮಂದಿ ಶಾಸಕರಿದ್ದಾರೆ. ಜೆಡಿಎಸ್‍ನ ಎಚ್.ಡಿ.ಕುಮಾರಸ್ವಾಮಿಯವರ ಸಹಕಾರದ ಪ್ರಶ್ನೆ ಉದ್ಭವಿಸುವುದಿಲ್ಲ. ಎಚ್.ಡಿ.ಕುಮಾರಸ್ವಾಮಿ, ಸೋಮಣ್ಣ ಅವರಂತೆ ಪ್ರಹ್ಲಾದ್ ಜೋಷಿ ಅವರನ್ನೂ ಭೇಟಿ ಮಾಡಿದ್ದಾನೆ. ಬೆಳಗಾವಿ ವಿಮಾನ ನಿಲ್ದಾಣದ ಕಾಮಗಾರಿ ಸ್ಥಗಿತಗೊಂಡಿದೆ. ಅವುಗಳನ್ನು ಚುರುಕುಗೊಳಿಸುವ ಸಲುವಾಗಿ ಚರ್ಚೆ ಮಾಡಲಾಗಿದೆ ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು.

ಕೇಂದ್ರ ಸಚಿವರನ್ನು ಭೇಟಿ ಮಾಡಿದಂತೆ ನಮ್ಮ ಪಕ್ಷದ ಕೆ.ಸಿ.ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ ಸೇರಿದಂತೆ ಹಲವು ನಾಯಕರನ್ನು ಭೇಟಿ ಮಾಡಿದ್ದೇನೆ. ಹೊಸದಿಲ್ಲಿಗೆ ಹೋದ ಮೇಲೆ ವರಿಷ್ಠರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸುವುದು ಸಾಮಾನ್ಯ. ಅದರಲ್ಲಿ ಯಾವುದೇ ವಿಶೇಷತೆ ಇಲ್ಲ ಎಂದು ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದರು.

‘ಟ್ರಾಫಿಕ್ ಜಾಮ್‍ನಲ್ಲಿ ಅವಕಾಶ ಸಿಗಬಹುದು: ನಾನು ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಯಲ್ಲ. ಈಗಾಗಲೇ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾರೆ. 2028ಕ್ಕೆ ನಮ್ಮ ಸರದಿ ಬರಲಿದೆ. ಮೆಜೆಸ್ಟಿಕ್‍ನ ಟ್ರಾಫಿಕ್ ಜಾಮ್‍ನಲ್ಲಿ ನಮಗೆ ಅವಕಾಶ ಸಿಕ್ಕರೂ ಸಿಗಬಹುದು ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಮಾರ್ಮಿಕವಾಗಿ ಸಚಿವ ಸತೀಶ್ ಜಾರಕಿಹೊಳಿ ಉತ್ತರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X