Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಸರಕಾರಕ್ಕೆ 22 ಕೋಟಿ ರೂ.ನಿಶ್ಚಿತ ಠೇವಣಿ...

ಸರಕಾರಕ್ಕೆ 22 ಕೋಟಿ ರೂ.ನಿಶ್ಚಿತ ಠೇವಣಿ ಮರುಪಾವತಿಸಿದ ಎಸ್‍ಬಿಐ-ಪಿಎನ್‍ಬಿ

ವಾರ್ತಾಭಾರತಿವಾರ್ತಾಭಾರತಿ3 Sept 2024 9:04 PM IST
share
ಸರಕಾರಕ್ಕೆ 22 ಕೋಟಿ ರೂ.ನಿಶ್ಚಿತ ಠೇವಣಿ ಮರುಪಾವತಿಸಿದ ಎಸ್‍ಬಿಐ-ಪಿಎನ್‍ಬಿ

ಬೆಂಗಳೂರು : ಭಾರತೀಯ ಸ್ಟೇಟ್ ಬ್ಯಾಂಕ್(ಎಸ್‍ಬಿಐ) ಹಾಗೂ ಪಂಜಾಬ್ ನ್ಯಾಷನಲ್ ಬ್ಯಾಂಕ್(ಪಿಎನ್‍ಬಿ)ನಲ್ಲಿ ರಾಜ್ಯ ಸರಕಾರದ ಎರಡು ನಿಶ್ಚಿತ ಠೇವಣಿಗಳನ್ನು ಮರು ಪಾವತಿಸುವ ಮೂಲಕ ಸರಕಾರದ ಬೊಕ್ಕಸಕ್ಕೆ 22 ಕೋಟಿ ರೂ.ಜಮೆಯಾದಂತಾಗಿದೆ.

ಈ ಹಿಂದೆ ಎಸ್‍ಬಿಐ ಹಾಗೂ ಪಿಎನ್‍ಬಿ ಸರಕಾರದ ಎರಡು ನಿಶ್ಚಿತ ಠೇವಣಿಗಳನ್ನು ಹಿಂದಿರುಗಿಸಲು ನಿರಾಕರಿಸಿದ್ದವು. ಇದರಿಂದಾಗಿ, ರಾಜ್ಯ ಸರಕಾರದ ಆರ್ಥಿಕ ಇಲಾಖೆಯು ಎಲ್ಲ ಇಲಾಖೆಗಳಿಗೆ ಸುತ್ತೋಲೆ ಹೊರಡಿಸಿ ಈ ಎರಡು ಬ್ಯಾಂಕ್‍ಗಳಲ್ಲಿ ಇರಿಸಿರುವ ಎಲ್ಲ ನಿಶ್ಚಿತ ಠೇವಣಿಗಳನ್ನು ಹಿಂಪಡೆಯುವಂತೆ ಸೂಚನೆ ನೀಡಿತ್ತು.

ಹಲವು ವರ್ಷಗಳಿಂದ ಈ ಎರಡು ಬ್ಯಾಂಕ್‍ಗಳು ಸರಕಾರಕ್ಕೆ ಬರಬೇಕಿದ್ದ ಹಣವನ್ನು ಮರು ಪಾವತಿ ಮಾಡದೆ ಉಳಿಸಿಕೊಂಡಿದ್ದವು. ಈ ಸಂಬಂಧ ಸರಕಾರದ ವತಿಯಿಂದ ಹಲವಾರು ಬಾರಿ ಪತ್ರ ವ್ಯವಹಾರಗಳು ನಡೆದಿದ್ದರೂ ಯಾವುದೆ ಪ್ರಯೋಜನವಾಗಿರಲಿಲ್ಲ. ಈ ವಿಷಯ ಮುಖ್ಯಮಂತ್ರಿ ಸಿದ್ದರಾಮಯ್ಯ ಗಮನಕ್ಕೆ ಬರುತ್ತಿದ್ದಂತೆ ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯಾಗಿರುವ ಎಲ್.ಕೆ.ಅತೀಕ್ ಅವರ ಮೂಲಕ ಸುತ್ತೋಲೆ ಹೊರಡಿಸಿದ್ದರು.

ರಾಜ್ಯ ಸರಕಾರದ ಯಾವುದೇ ಇಲಾಖೆ, ನಿಗಮ, ಮಂಡಳಿಗಳು, ವಿಶ್ವವಿದ್ಯಾಲಯಗಳು, ಸಂಸ್ಥೆಗಳು ಎಸ್‍ಬಿಐ ಹಾಗೂ ಪಿಎನ್‍ಬಿ ಬ್ಯಾಂಕ್ ನೊಂದಿಗೆ ಯಾವುದೆ ಹಣಕಾಸಿನ ವ್ಯವಹಾರಗಳನ್ನು ನಡೆಸದಂತೆ ಸುತ್ತೋಲೆಯಲ್ಲಿ ಸೂಚಿಸಲಾಗಿತ್ತು. ಇದರಿಂದ ಕಂಗೆಟ್ಟ ಬ್ಯಾಂಕಿನ ಅಧಿಕಾರಿಗಳು ಸರಕಾರದ ಆಗ್ರಹಕ್ಕೆ ಮಣಿಯುವಂತಾಯಿತು.

ಅದರ ಬೆನಲ್ಲೇ, ಬ್ಯಾಂಕಿನ ಅಧಿಕಾರಿಗಳು, ಸರಕಾರದ ಹಿರಿಯ ಅಧಿಕಾರಿಗಳು ಹಾಗೂ ಮುಖ್ಯಮಂತ್ರಿ ಜೊತೆ ಸಭೆಗಳನ್ನು ನಡೆಸಿ ಸರಕಾರದ ನಿಶ್ಚಿತ ಠೇವಣಿ ಹಿಂದಿರುಗಿಸಲು ಕಾಲಾವಕಾಶ ಕೋರಿದ್ದರು. ಅದರಂತೆ, ಮುಖ್ಯಮಂತ್ರಿ ಸುತ್ತೋಲೆಯನ್ವಯ ತಾತ್ಕಾಲಿಕವಾಗಿ ಯಾವುದೆ ಕ್ರಮ ಕೈಗೊಳ್ಳದಂತೆ ಸೂಚಿಸಿದ್ದರು.

ಇದೀಗ ಎಸ್‍ಬಿಐನಿಂದ 9.67 ಕೋಟಿ ರೂ.ಗಳು ಹಾಗೂ ಪಿಎನ್‍ಬಿಯಿಂದ 13.9 ಕೋಟಿ ರೂ.ಗಳು ಸರಕಾರದ ಖಜಾನೆಗೆ ಜಮೆಯಾದಂತಾಗಿದೆ.

Tags

SBI
share
ವಾರ್ತಾಭಾರತಿ
ವಾರ್ತಾಭಾರತಿ
Next Story
X