Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮಹಿಷ ದಸರಾಕ್ಕೆ ಎಸ್ಸಿ ಮೋರ್ಚಾ ಬೆಂಬಲ;...

ಮಹಿಷ ದಸರಾಕ್ಕೆ ಎಸ್ಸಿ ಮೋರ್ಚಾ ಬೆಂಬಲ; ಇಕ್ಕಟ್ಟಿಗೆ ಸಿಲುಕಿದ BJP ಮುಖಂಡರು

ಸಂಸದ ಪ್ರತಾಪ್‌ ಸಿಂಹ ವಿರುದ್ಧ ದಲಿತ ಮೋರ್ಚಾ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ11 Oct 2023 11:58 PM IST
share
ಮಹಿಷ ದಸರಾಕ್ಕೆ ಎಸ್ಸಿ ಮೋರ್ಚಾ ಬೆಂಬಲ; ಇಕ್ಕಟ್ಟಿಗೆ ಸಿಲುಕಿದ BJP  ಮುಖಂಡರು

ಮೈಸೂರು, ಅ.11: ಮೈಸೂರಿನಲ್ಲಿ ಮಹಿಷ ದಸರಾ ಆಚರಣೆಗೆ ಮೈಸೂರು ನಗರ ಪೊಲೀಸ್ ಆಯುಕ್ತರು ಅನುಮತಿ ನಿರಾಕರಿಸಿದ ಬೆನ್ನಿಗೇ ಮಹಿಷ ದಸರಾ ಪರವಾಗಿ ನಾಡಿನಾದ್ಯಂತ ಬೆಂಬಲ ವ್ಯಕ್ತವಾಗಿದೆ. ಅನಿರೀಕ್ಷಿತ ಬೆಳವಣಿಗೆಯಲ್ಲಿ ಮಹಿಷ ದಸರಾಕ್ಕೆ ಬಿಜೆಪಿಯ ಎಸ್ಸಿ ಮೋರ್ಚಾ ಬುಧವಾರ ಬಹಿರಂಗ ಬೆಂಬಲ ಘೋಷಿಸಿದ್ದು ಬಿಜೆಪಿ ವರಿಷ್ಠರನ್ನು ತೀವ್ರ ಇಕ್ಕಟ್ಟಿಗೆ ಸಿಲುಕಿಸಿದೆ.

ಇದರ ಬೆನ್ನಿಗೇ ‘‘ಬಿಜೆಪಿ ಹೆಸರನ್ನು ಬಳಸಿಕೊಂಡು ಸಂಸದ ಪ್ರತಾಪ ಸಿಂಹ ಮಹಿಷ ದಸರಾಗೆ ಅಡ್ಡಿ ಪಡಿಸುತ್ತಿದ್ದಾರೆ. ಈ ವಿಚಾರ ಪಕ್ಷದ ಕೋರ್ ಕಮಿಟಿಯಲ್ಲಿ ಚರ್ಚೆಯೇ ಆಗಿಲ್ಲ. ಹಾಗಾಗಿ ಜಿಲ್ಲಾಡಳಿತ ಮತ್ತು ರಾಜ್ಯ ಸರಕಾರ ಮಹಿಷ ದಸರಾಗೆ ಅವಕಾಶ ನೀಡಬೇಕು’’ ಎಂದು ಬಿಜೆಪಿ ಮುಖಂಡ ಗಿರಿಧರ್ ಒತ್ತಾಯಿಸಿದ್ದಾರೆ.

‘‘ಮಹಿಷ ದಸರಾ ಆಚರಿಸುವವರನ್ನು ತುಳಿದು ಹಾಕುತ್ತೇವೆ’’ ಎಂಬ ಪ್ರತಾಪ ಸಿಂಹ ಇತ್ತೀಚೆಗೆ ನೀಡಿದ ಹೇಳಿಕೆ ತೀವ್ರ ಟೀಕೆ, ವಿವಾದಕ್ಕೆ ಕಾರಣವಾಗಿತ್ತು.

ದಲಿತರು ಮಹಿಷ ದಸರಾ ಆಚರಣೆ ಮಾಡುತ್ತಿರುವುದನ್ನು ಸಂಸದ ಪ್ರತಾಪ ಸಿಂಹ ಅವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಹಾಗಾಗಿಯೇ ಅವರು ಮಹಿಷ ದಸರಾ ವಿರೋಧಿಸುತ್ತಿರುವುದು. ಈತ ನೂರಕ್ಕೆ ನೂರರಷ್ಟು ದಲಿತ ವಿರೋಧಿ ಎಂದು ಬಿಜೆಪಿ ಎಸ್ಸಿ ಮೋರ್ಚಾ ಪದಾಧಿಕಾರಿಗಳು ಆರೋಪಿಸಿದ್ದಾರೆ.

ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಬುಧವಾರ ತುರ್ತು ಪತ್ರಿಕಾಗೋಷ್ಠಿ ನಡೆಸಿದ ಮೈಸೂರು ನಗರ ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷ ಸಿ.ಈಶ್ವರ್ ಮಾತನಾಡಿ, ಸಂಸದ ಪ್ರತಾಪ ಸಿಂಹ ಒಬ್ಬ ದಲಿತ ವಿರೋಧಿ. ಆ ಕಾರಣಕ್ಕಾಗಿಯೇ ಮಹಿಷ ದಸರಾ ಆಚರಣೆ ಮಾಡುವವರನ್ನು ತುಳಿದು ಹಾಕುತ್ತೇನೆ, ಹೊಸಕಿ ಹಾಕುತ್ತೇನೆ ಎಂದು ಹೇಳುತ್ತಿದ್ದಾರೆ. ಮೈಸೂರು ಪ್ರಾಂತದ ದಲಿತರ ರಕ್ಷಣಾ ಕೇಂದ್ರವಾದ ನಮ್ಮ ಅಶೋಕಪುರಂ ಬಗ್ಗೆ ಮತ್ತು ದಲಿತ ಮುಖಂಡರ ವಿರುದ್ಧ ಹಗುರವಾಗಿ ಮಾತನಾಡಿದ್ದಾರೆ. ಇವರಿಗೆ ಮೈಸೂರಿನ ಮತ್ತು ಅಶೋಕಪುರಂನ ಇತಿಹಾಸ ಏನು ಗೊತ್ತು ಎಂದು ಪ್ರಶ್ನಿಸಿದರು.

ನಾವು ಕಳೆದ 30 ವರ್ಷಗಳಿಂದ ಮೈಸೂರು ನಗರದಲ್ಲಿ ಬಿಜೆಪಿ ಕಟ್ಟಲು ದುಡಿದಿದ್ದೇವೆ. ಈತ ಚುನಾವಣೆಗಾಗಿ ಕಳೆದ 9 ವರ್ಷಗಳಲ್ಲಿ ಮೈಸೂರಿಗೆ ಬಂದಿರುವುದು. ಈತನಿಗೆ ಮೈಸೂರಿನ ಬಗ್ಗೆ, ಮಹಿಷನ ಇತಿಹಾಸದ ಬಗ್ಗೆ ಏನು ಗೊತ್ತು ಎಂದು ಪ್ರಶ್ನಿಸಿದರು.

ಸಂಸದ ಪ್ರತಾಪ ಸಿಂಹನ ಹೇಳಿಕೆಯಿಂದ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಹಿನ್ನಡೆಯಾಗಿದೆ. ಈಗ ಮತ್ತಷ್ಟು ಹಿನ್ನಡೆಯಾಗಲಿದೆ. ಹಾಗಾಗಿ ಈತನ ಹೇಳಿಕೆ, ನಡವಳಿಕೆಗಳ ವಿರುದ್ಧ ಬಿಜೆಪಿ ವರಿಷ್ಠರಿಗೆ ದೂರು ನೀಡಲಿದ್ದೇವೆ ಎಂದು ಹೇಳಿದರು.

ಮಹಿಷ ದಸರಾ ಆಚರಣೆಗೆ ಅಡ್ಡಿಪಡಿಸುವ ಮುನ್ನ ಬಿಜೆಪಿ ಕಾರ್ಯಕರ್ತರ ಸ‘ೆಯನ್ನೇ ಮಾಡಿಲ್ಲ, ನಾವೆಲ್ಲ ತಳಮಟ್ಟದಲ್ಲಿ ಪಕ್ಷ ಕಟ್ಟಿದ್ದೇವೆ. ನಮ್ಮ ಜೊತೆ ಯಾವುದೇ ಸಭೆ ಮಾಡದೆ ಏಕಾಏಕಿ ನಿರ್ಧಾರ ಮಾಡಿ ಮಹಿಷ ದಸರಾಗೆ ಅಡ್ಡಿ ಪಡಿಸಿದ್ದಾರೆ. ಇವರ ನಡೆಯ ವಿರುದ್ಧ ಮತ್ತು ಇವರ ಮೇಲೆ ಶಿಸ್ತು ಕ್ರಮ ಜರುಗಿಸುವಂತೆ ವರಿಷ್ಠರನ್ನು ಭೆಟಿಯಾಗಿ ಮನವಿ ಮಾಡುತ್ತೇವೆ ಎಂದು ಹೇಳಿದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X