Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ವಾಲ್ಮಿಕಿ ನಿಗಮದಲ್ಲಿ ಹಗರಣ | ಎಸ್‌ಐಟಿ...

ವಾಲ್ಮಿಕಿ ನಿಗಮದಲ್ಲಿ ಹಗರಣ | ಎಸ್‌ಐಟಿ ತನಿಖೆಯಲ್ಲಿ ಸರಕಾರಕ್ಕೆ ಸಂಪೂರ್ಣ ಭರವಸೆಯಿದೆ : ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ19 July 2024 7:13 PM IST
share
ವಾಲ್ಮಿಕಿ ನಿಗಮದಲ್ಲಿ ಹಗರಣ | ಎಸ್‌ಐಟಿ ತನಿಖೆಯಲ್ಲಿ ಸರಕಾರಕ್ಕೆ ಸಂಪೂರ್ಣ ಭರವಸೆಯಿದೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ವಾಲ್ಮಿಕಿ ನಿಗಮದಲ್ಲಿ ನಡೆದಿರುವ ಹಣಕಾಸಿನ ಅವ್ಯವಹಾರದ ಬಗ್ಗೆ ಈಗಾಗಲೇ ಎಸ್‌ಐಟಿ ತನಿಖೆ ನಡೆಸುತ್ತಿದ್ದು, ಎಸ್‌ಐಟಿ ತನಿಖೆಯಲ್ಲಿ ಸರಕಾರಕ್ಕೆ ಸಂಪೂರ್ಣ ಭರವಸೆಯಿದೆ. ರಾಜ್ಯ ಸರಕಾರಕ್ಕೆ ಹಾಗೂ ತನಗೆ ಮಸಿ ಬಳಿಯುವ ಪ್ರಯತ್ನವನ್ನು ವಿರೋಧಪಕ್ಷಗಳು ಮಾಡುತ್ತಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ʼವಾಲ್ಮಿಕಿ ಅಭಿವೃದ್ಧಿ ನಿಗಮದ ಅಕೌಂಟ್‌ ಸುಪರಿಡೆಂಟ್‌ ಚಂದ್ರಶೇಖರ್‌ ಆತ್ಮಹತ್ಯೆ ಮಾಡಿಕೊಂಡ ದಿನವೇ ಅವರ ಪತ್ನಿ ನೀಡಿದ ದೂರಿನ ಮೇಲೆ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಲಾಗಿದೆ. ಮೇ.31ರಂದು ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಲಾಗಿದ್ದು, ಇದರಲ್ಲಿ ನಾಲ್ಕು ಮಂದಿ ಹಿರಿಯ ಐಪಿಎಸ್‌ ಅಧಿಕಾರಿಗಳು ಇದ್ದಾರೆʼ ಎಂದರು.

"ಯೂನಿಯನ್‌ ಬ್ಯಾಂಕ್‌ ಅಫ್‌ ಇಂಡಿಯಾದ ಅಧಿಕಾರಿ ಮಹೇಶ್‌ ಎಂಬವರ ದೂರಿನ ಮೇರೆಗೆ ಸಿಬಿಐ ತನಿಖೆಯನ್ನು ಕೈಗೊಂಡಿದ್ದು, ಈಡಿ ಸ್ವಯಂ ಪ್ರೇರಿತವಾಗಿ ತನಿಖೆಯನ್ನು ನಡೆಸುತ್ತಿದೆ. ಎಸ್‌ಐಟಿ ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ 12 ಮಂದಿಯನ್ನು ಬಂಧಿಸಿದ್ದು, 34 ಕೋಟಿ ರೂ. ನಗದು ವಶಪಡಿಸಿಕೊಂಡಿದೆ. ವಿವಿಧ ಬ್ಯಾಂಕ್‌ ಖಾತೆಗಳಿಗೆ ವರ್ಗಾಯಿಸಲಾಗಿದ್ದ ಸುಮಾರು 46 ಕೋಟಿ ರೂ. ಸ್ಥಗಿತಗೊಳಿಸಲಾಗಿದೆ" ಎಂದು ಹೇಳಿದರು.

ʼಪ್ರಕರಣದಲ್ಲಿ ಯಾವುದೇ ಅಕ್ರಮ ಆಗಿಲ್ಲ ಎಂದು ನಾವು ಹೇಳುತ್ತಿಲ್ಲ. ಅಕ್ರಮ ಎಸಗಿದವರ ವಿರುದ್ಧ ಸೂಕ್ತ ಕ್ರಮ ಜರುಗಿಸಲು ಸರಕಾರ ಬದ್ಧವಾಗಿದೆ. ವಿಧಾನಮಂಡಲ ಅಧಿವೇಶನದಲ್ಲಿ ವಿರೊಧ ಪಕ್ಷಗಳ ಸದಸ್ಯರು ನಿಯಮ 69ರ ಅಡಿಯಲ್ಲಿ 7ತಾಸಿಗೂ ಅಧಿಕ ಕಾಲ ಈ ವಿಚಾರದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಮಂಡಿಸಿದ್ದಾರೆ. ಸಂಸದೀಯ ವ್ಯವಸ್ಥೆಯಲ್ಲಿ ವಿರೋಧ ಪಕ್ಷಗಳಿಗೆ ಅಭಿಪ್ರಾಯ ವ್ಯಕ್ತಪಡಿಸಲು ಇರುವ ಅವಕಾಶದಷ್ಟೇ, ಸರಕಾರಕ್ಕೂ ತನ್ನ ನಿಲುವು ವ್ಯಕ್ತಪಡಿಸಲು ಹಕ್ಕಿದೆ" ಎಂದು ಹೇಳಿದರು.

ವಾಲ್ಮಿಕಿ ಅಭಿವೃದ್ಧಿ ನಿಗಮದ 89.63 ಕೋಟಿ ರೂ. ಹಣವನ್ನು ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾದ ಎಂಜಿ ರಸ್ತೆ ಖಾತೆಗೆ ವರ್ಗಾಯಿಸಿ ಅಲ್ಲಿಂದ ವಿವಿಧ ಖಾತೆಗಳಿಗೆ ವರ್ಗಾಯಿಸಲಾಗಿದೆ. ಯೂನಿಯನ್‌ ಬ್ಯಾಂಕ್‌ ಆಫ್‌ ಇಂಡಿಯಾ ರಾಷ್ಟ್ರೀಕೃತ ಬ್ಯಾಂಕ್‌ ಆಗಿದ್ದು, ಕೇಂದ್ರ ಹಣಕಾಸು ಇಲಾಖೆ ಅಧೀನಕ್ಕೆ ಬರುತ್ತದೆ. ಬ್ಯಾಂಕ್‌ ಅಧಿಕಾರಿಗಳು ಇದರಲ್ಲಿ ಶಾಮೀಲಾಗಿರುವ ಕುರಿತು ಆತ್ಮಹತ್ಯೆ ನೋಟ್‌ನಲ್ಲಿ ಪ್ರಸ್ತಾಪಿಸಲಾಗಿದೆ. ಪರಿಶಿಷ್ಟ ಕಲ್ಯಾಣ ಸಚಿವರಾಗಿದ್ದ ನಾಗೇಂದ್ರ ಅವರು ಸ್ವಯಂಪ್ರೇರಿತವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದರು.

ಬಿಜೆಪಿ ಆಡಳಿತ ಅವಧಿಯಲ್ಲಿ ಭೋವಿ ಅಭಿವೃದ್ಧಿ ನಿಗಮದ ಹಗರಣವಾದಾಗ ಅವರ ಪಕ್ಷದವರೇ ಆದ ಗೂಳಿಹಟ್ಟಿ ಶೇಖರ್‌ ಅವರು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ್ದರು. ಆಗ ಯಾರು ರಾಜೀನಾಮೆ ನೀಡಿದ್ದರು?. ಎಪಿಎಂಸಿ ಯಲ್ಲಿ ಆವರ್ತನಿಧಿ ʻಲೂಟಿ ಮಾಡಿದಾಗ, ದೇವರಾಜ ಅರಸ್‌ ಟ್ರಕ್‌ ಟರ್ಮಿನಲ್‌ ಹಗರಣದಲ್ಲಿ 47.10 ಕೋಟಿ ರೂ. ಅವ್ಯವಹಾರವಾದಾಗ, ಅಂದಿನ ಮುಖ್ಯಮಂತ್ರಿಗಳಾಗಿದ್ದ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ರಾಜೀನಾಮೆ ನೀಡಿದರೆ? ಈ ಪ್ರಕರಣಗಳಲ್ಲಿ ಈ.ಡಿ. ಯಾಕೆ ಸ್ವಯಂ ಪ್ರೇರಿತವಾಗಿ ಕೈಗೆತ್ತಿಕೊಂಡಿಲ್ಲ ಎಂದು ಪ್ರಶ್ನಿಸಿದರು.

ಎಲ್ಲಾ ಅಭಿವೃದ್ಧಿ ನಿಗಮಗಳ ಹಣವನ್ನು ಕಡ್ಡಾಯವಾಗಿ ರಾಜ್ಯ ಖಜಾನೆಯಲ್ಲಿ ಜಮಾ ಮಾಡಲು ಈಗಾಗಲೇ ಸೂಚನೆ ನೀಡಲಾಗಿದೆ. ಹಣಕಾಸು ನಿರ್ವಹಣೆಯಲ್ಲಿ ಪಾರದರ್ಶಕತೆಯನ್ನು ತರಲು ಹಲವು ಮಾರ್ಗಸೂಚಿಗಳನ್ನು ಹಣಕಾಸು ಇಲಾಖೆ ಜಾರಿಗೊಳಿಸಿದೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X