Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಎಸ್‍ಸಿಪಿ-ಟಿಎಸ್‍ಪಿ ಅನುದಾನ ಅನ್ಯ...

ಎಸ್‍ಸಿಪಿ-ಟಿಎಸ್‍ಪಿ ಅನುದಾನ ಅನ್ಯ ಉದ್ದೇಶಕ್ಕೆ ಬಳಕೆ ತಡೆಗಟ್ಟಿ : ವಿಧಾನಮಂಡಲ ಎಸ್‍ಸಿ, ಎಸ್‍ಟಿ ಕಲ್ಯಾಣ ಸಮಿತಿ ಶಿಫಾರಸ್ಸು

ವಾರ್ತಾಭಾರತಿವಾರ್ತಾಭಾರತಿ25 July 2024 7:14 PM IST
share
ಎಸ್‍ಸಿಪಿ-ಟಿಎಸ್‍ಪಿ ಅನುದಾನ ಅನ್ಯ ಉದ್ದೇಶಕ್ಕೆ ಬಳಕೆ ತಡೆಗಟ್ಟಿ : ವಿಧಾನಮಂಡಲ ಎಸ್‍ಸಿ, ಎಸ್‍ಟಿ ಕಲ್ಯಾಣ ಸಮಿತಿ ಶಿಫಾರಸ್ಸು

ಬೆಂಗಳೂರು : ಪರಿಶಿಷ್ಟರ ಕಲ್ಯಾಣಕ್ಕಾಗಿ ಎಸ್‍ಸಿಪಿ/ಟಿಎಸ್‍ಪಿ ಕಾಯ್ದೆಯಡಿ ಮೀಸಲಿಟ್ಟ ಅನುದಾನವನ್ನು ಅನ್ಯ ಉದ್ದೇಶಕ್ಕಾಗಿ ಬಳಕೆ ಮಾಡುವುದು ಕಾಯ್ದೆಗೆ ವಿರುದ್ಧ, ಶಿಕ್ಷಾರ್ಹ. ಆದುದರಿಂದ ಈ ಹಣವನ್ನು ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್‍ಗಳ ಮೂಲಸೌಕರ್ಯ ಮತ್ತು ವಿದ್ಯಾರ್ಥಿ ವೇತನಕ್ಕೆ ಹಂಚಿಕೆ ಮಾಡಬೇಕು ಎಂದು ವಿಧಾನಮಂಡಲ ಎಸ್‍ಸಿ-ಎಸ್‍ಟಿ ಕಲ್ಯಾಣ ಸಮಿತಿ, ಆರ್ಥಿಕ ಇಲಾಖೆಗೆ ಶಿಫಾರಸ್ಸು ಮಾಡಿದೆ.

ಗುರುವಾರ ವಿಧಾನಸಭೆಯಲ್ಲಿ ಸಮಿತಿಯ ಅಧ್ಯಕ್ಷರೂ ಆಗಿರುವ ಶಾಸಕ ಪಿ.ಎಂ.ನರೇಂದ್ರಸ್ವಾಮಿ, ಪ್ರತಿಪಕ್ಷಗಳ ಸದಸ್ಯರ ಧರಣಿ, ಗದ್ದಲದ ಮಧ್ಯೆ ಸಮಿತಿಯ ಮೂರನೇ ವರದಿಯನ್ನು ಮಂಡನೆ ಮಾಡಿದರು. ಎಸ್‍ಸಿಪಿ/ಟಿಎಸ್‍ಪಿ ಅನುದಾನವನ್ನು ‘ಶಕ್ತಿ ಯೋಜನೆ’ಗೆ ಬಳಕೆ ಮಾಡುವುದು ಸರಿಯಲ್ಲ. ಈ ಅನುದಾನವನ್ನು ಆ ಸಮುದಾಯದ ಶ್ರೇಯೋಭಿವೃದ್ಧಿಗೆ ಬಳಕೆ ಮಾಡಲು ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದು ಸಲಹೆ ನೀಡಿದೆ.

ಕ್ರೈಸ್ಟ್ ವಸತಿ ಶಾಲೆಗಳಲ್ಲಿ ಎಸ್‍ಸಿ/ಎಸ್‍ಟಿ ಸಮುದಾಯಕ್ಕೆ ವೆಚ್ಚ ಮಾಡಬೇಕಾದ ಅನುದಾನವನ್ನು ಪೂರ್ಣ ಪ್ರಮಾಣದಲ್ಲಿ ಬಳಕೆ ಮಾಡದಿರುವುದರ ಕುರಿತು ಸಮಗ್ರ ತನಿಖೆ ನಡೆಸಬೇಕು. ಎಸ್‍ಸಿಪಿ/ಟಿಎಸ್‍ಪಿ ಅನುದಾನವನ್ನು ಕಾಯ್ದೆಯ ಸೆಕ್ಷನ್ 7 ‘ಸಿ’ ಅಡಿಯಲ್ಲಿ ಸಾಮೂಹಿಕ ಬಳಕೆ ತಪ್ಪಿಸಲು ಕಾಯ್ದೆಯ 7 ‘ಸಿ’ ರದ್ದುಗೊಳಿಸಬೇಕು. ವಸತಿ ಶಾಲೆ ಮತ್ತು ವಿದ್ಯಾರ್ಥಿನಿಯರ ಹಾಸ್ಟೆಲ್‍ಗಳಿಗೆ ಕಡ್ಡಾಯವಾಗಿ ಮಹಿಳಾ ವಾರ್ಡನ್‍ಗಳನ್ನು ನೇಮಕ ಮಾಡಬೇಕು ಎಂದು ಸಮಿತಿ ತಿಳಿಸಿದೆ.

ಕೆಆರ್‌ಐಡಿಎಲ್ ಅಥವಾ ಲೋಕೋಪಯೋಗಿ ಇಲಾಖೆ ಕಾಮಗಾರಿಗಳನ್ನು ಹಂಚಿಕೆ ವೇಳೆ ಒಗ್ಗೂಡಿಸಿ ನೀಡದೆ, 1 ಕೋಟಿ ರೂ.ವರೆಗೆ ಇರುವ ಕಾಮಗಾರಿಗಳನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗಗಳ ಗುತ್ತಿಗೆದಾರರಿಗೆ ಮೀಸಲಾತಿ ಅನ್ವಯ ನೀಡಬೇಕು. ಬ್ಯಾಕ್‍ಲಾಗ್ ಹುದ್ದೆಗಳನ್ನು ನೇಮಕಾತಿ ನಿಯಮಗಳ ಅನ್ವಯ ಕೂಡಲೇ ಎಲ್ಲ ಕೃಷಿ ವಿವಿ ಮತ್ತು ಇಲಾಖೆಗಳಲ್ಲಿ ನೇಮಕ ಮಾಡಿಕೊಳ್ಳಬೇಕು ಎಂದು ಸಮಿತಿ ನಿರ್ದೇಶನ ನೀಡಿದೆ.

ಕ್ರಮಕ್ಕೆ ಶಿಫಾರಸ್ಸು: ‘ಮ್ಯಾನ್ಯುಯೆಲ್ ಸ್ಕ್ಯಾವೆಂಜರ್ ಪದ್ಧತಿ ಈಗಲೂ ಯಾರಾದರೂ ಮಾಡಿಸುತ್ತಿದ್ದರೆ, ಇಲಾಖೆಯಿಂದ ಪತ್ತೆ ಹಚ್ಚಿ, ಈ ಕೆಲಸ ಮಾಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಈ ಪದ್ಧತಿಯನ್ನು ಸಂಪೂರ್ಣ ನಿಲ್ಲಿಸಲು ಕ್ರಮ ಕೈಗೊಳ್ಳಬೇಕು. ವಿವಿಧ ನಿಗಮಗಳ ಅನುದಾನವನ್ನು ಬ್ಯಾಂಕ್ ಖಾತೆಯಲ್ಲಿದ್ದರೂ ಉದ್ದೇಶಿತ ಕಾರ್ಯಕ್ರಮಗಳ ಅನುಷ್ಟಾನಕ್ಕೆ ಬಳಕೆ ಮಾಡದ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಬೇಕು’

-ಪಿ.ಎಂ.ನರೇಂದ್ರಸ್ವಾಮಿ, ವಿಧಾನಮಂಡಲ ಎಸ್‍ಸಿ-ಎಸ್‍ಟಿ ಕಲ್ಯಾಣ ಸಮಿತಿ ಅಧ್ಯಕ್ಷ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X