Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ ದೊಡ್ಡ...

ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ ದೊಡ್ಡ ವಿಚಾರವಲ್ಲ: ಮಲ್ಲಿಕಾರ್ಜುನ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ18 July 2023 6:54 PM IST
share
ಲೋಕಸಭೆ ಚುನಾವಣೆಗೆ ಸೀಟು ಹಂಚಿಕೆ ದೊಡ್ಡ ವಿಚಾರವಲ್ಲ: ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು, ಜು.18: ಲೋಕಸಭೆ ಚುನಾವಣೆ ಸಂದರ್ಭದಲ್ಲಿ ವಿಪಕ್ಷಗಳ ಜತೆ ಸೇರಿ ಕ್ಷೇತ್ರವಾರು ಸೀಟು ಹಂಚಿಕೆ ಮಾಡುವ ವಿಚಾರ ಅಷ್ಟೊಂದು ದೊಡ್ಡದಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.

ಮಂಗಳವಾರ ಖಾಸಗಿ ಹೋಟೆಲ್‍ನಲ್ಲಿ "ಒಂದಾಗಿದ್ದೇವೆ ನಾವು" ರಾಷ್ಟ್ರೀಯ ವಿಪಕ್ಷಗಳ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸೀಟು ಹಂಚಿಕೆ ವಿಚಾರ ದೊಡ್ಡ ವಿಚಾರವಲ್ಲ. ನಮ್ಮ ಸಮನ್ವಯ ಸಮಿತಿ ತೀರ್ಮಾನ ಮಾಡಲಿದೆ. ಎಲ್ಲ್ಲ ನಾಯಕರು, ಸಮಿತಿ ಸೇರಿ ತೀರ್ಮಾನ ಮಾಡಲಿದೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರ ಸ್ಥಳೀಯ ಪಕ್ಷಗಳನ್ನು ಇಬ್ಭಾಗ ಮಾಡುತ್ತಿದ್ದು, ಈ ಸಮಯದಲ್ಲಿ ನೀವು ಎಲ್ಲಾ ಪ್ರಾದೇಶಿಕ ಪಕ್ಷಗಳನ್ನು ಹೇಗೆ ಒಗ್ಗಟ್ಟಾಗಿ ಕೊಂಡೊಯ್ಯುತ್ತೀರಿ ಎಂಬ ಪ್ರಶ್ನೆಗೆ, ಎನ್‍ಸಿಪಿ ನಾಯಕ ಶರದ್ ಪವಾರ್, ಶಿವಸೇನೆ ನಾಯಕ ಉದ್ಧವ್ ಠಾಕ್ರೆ ಸೇರಿದಂತೆ ಪ್ರಾದೇಶಿಕ ಪಕ್ಷಗಳ ನಾಯಕರು ಇಲ್ಲಿದ್ದಾರೆ. ಶಾಸಕರು ಪಕ್ಷ ಬಿಟ್ಟು ಹೋಗಿರಬಹುದು. ಆದರೆ ಜನ ಈ ಪ್ರಮುಖ ನಾಯಕರ ಬೆನ್ನಿಗೆ ನಿಲ್ಲಲಿದ್ದಾರೆ. ನಾವು ಒಟ್ಟಾಗಿ ಇರುತ್ತೇವೆ. ಆ ಬಗ್ಗೆ ಚಿಂತಿಸುವ ಅಗತ್ಯವಿಲ್ಲ ಎಂದು ಉತ್ತರಿಸಿದರು.

ನಾವು 11 ಸದಸ್ಯರು ಸಮನ್ವಯ ಸಮಿತಿ ರಚಿಸುತ್ತಿದ್ದು, ಆ ಸಮಿತಿ ನಿರ್ಧರಿಸಲಿದೆ. ಈ ಸಮಿತಿ ಸದಸ್ಯರನ್ನು ಮುಂಬೈ ಸಭೆಯಲ್ಲಿ ತೀರ್ಮಾನ ಮಾಡಲಾಗುವುದು ಎಂದ ಅವರು, ಯುಸಿಸಿ ಮಸೂದೆ ನನಗೆ ಸಿಕ್ಕಿಲ್ಲ. ನಿಮ್ಮ ಬಳಿ ಇದ್ದರೆ ಅದನ್ನು ನೀಡಿ. ಮಸೂದೆ ಇಲ್ಲದೆ ಅದರ ಬಗ್ಗೆ ಚರ್ಚೆ ಮಾಡಲು ಹೇಗೆ ಸಾಧ್ಯ? ನಾವು ಮಣಿಪುರ, ನಿರುದ್ಯೋಗ, ಹಣದುಬ್ಬರ ಸೇರಿದಂತೆ ಇತರೆ ವಿಚಾರಗಳ ಬಗ್ಗೆ ಹೇಗೆ ಹೋರಾಟ ಮಾಡಬೇಕು. ಪ್ರಜಾಪ್ರಭುತ್ವ ಹಾಗೂ ಸಂವಿಧಾನ ರಕ್ಷಣೆ ವಿಚಾರವಾಗಿ ವಿಸ್ತಾರವಾಗಿ ಚರ್ಚೆ ಮಾಡಲಾಗಿದೆ ಎಂದು ಉಲ್ಲೇಖಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X