Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಮೇ 7ಕ್ಕೆ ಎರಡನೇ ಹಂತದ ಚುನಾವಣೆ : ಉತ್ತರ...

ಮೇ 7ಕ್ಕೆ ಎರಡನೇ ಹಂತದ ಚುನಾವಣೆ : ಉತ್ತರ ಕರ್ನಾಟಕ ಭಾಗದತ್ತ ರಾಜಕೀಯ ನಾಯಕರ ಚಿತ್ತ

ವಾರ್ತಾಭಾರತಿವಾರ್ತಾಭಾರತಿ27 April 2024 8:09 PM IST
share
ಮೇ 7ಕ್ಕೆ ಎರಡನೇ ಹಂತದ ಚುನಾವಣೆ : ಉತ್ತರ ಕರ್ನಾಟಕ ಭಾಗದತ್ತ ರಾಜಕೀಯ ನಾಯಕರ ಚಿತ್ತ

ಬೆಂಗಳೂರು : ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಮತದಾನ ಅಂತ್ಯಗೊಂಡ ಬೆನ್ನಲ್ಲೆ ಪ್ರಧಾನಿ ಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸಹಿತ ಘಟಾನುಘಟಿ ನಾಯಕರು ಮೇ 7ರಂದು ನಡೆಯಲಿರುವ ಎರಡನೇ ಹಂತದ 14 ಲೋಕಸಭಾ ಕ್ಷೇತ್ರಗಳ ಚುನಾವಣಾ ಪ್ರಚಾರ ಕಾರ್ಯಕ್ಕೆ ಉತ್ತರ ಕರ್ನಾಟಕ ಭಾಗದತ್ತ ಮುಖ ಮಾಡಿದ್ದಾರೆ.

ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ(ಎಸ್‍ಸಿ), ಕಲಬುರಗಿ(ಎಸ್‍ಸಿ), ರಾಯಚೂರು (ಎಸ್‍ಟಿ), ಬೀದರ್, ಕೊಪ್ಪಳ, ಬಳ್ಳಾರಿ(ಎಸ್‍ಟಿ), ಹಾವೇರಿ, ಧಾರವಾಡ, ಉತ್ತರಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗ ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ. ಮಾಜಿ ಸಿಎಂ ಶೆಟ್ಟರ್, ಕೇಂದ್ರ ಸಚಿವ ಜೋಶಿ, ಖರ್ಗೆ ಅಳಿಯ ರಾಧಾಕೃಷ್ಣ, ಬಿ.ಶ್ರೀರಾಮುಲು, ಬಿ.ವೈ.ರಾಘವೇಂದ್ರ, ಗೀತಾ ಶಿವರಾಜ್ ಕುಮಾರ್ ಸಹಿತ 227 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಎರಡನೇ ಹಂತದ ಚುನಾವಣೆಯಲ್ಲಿ ಒಟ್ಟು 2.50 ಕೋಟಿ ಮತದಾರರು ಹಕ್ಕು ಚಲಾಯಿಸಲಿದ್ದು, 28,269 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 14 ಕ್ಷೇತ್ರಗಳ ಪೈಕಿ 12 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ. ಶಿವಮೊಗ್ಗ ಮತ್ತು ದಾವಣಗೆರೆ ಲೋಕಸಭಾ ಕ್ಷೇತ್ರಗಳಲ್ಲಿ ಬಂಡಾಯದ ಕಾರಣ ತ್ರಿಕೋನ ಸ್ಪರ್ಧೆ ಇದೆ.

ರಾಜ್ಯದಲ್ಲಿ ಬೇಸಿಗೆ ಬಿಸಿಲು ಮಿತಿ ಮೀರುತ್ತಿದ್ದು, ಈ ನಡುವೆ, ಚುನಾವಣೆ ನಡೆಯುವ ಜಿಲ್ಲೆಗಳಲ್ಲಿ ಪ್ರಚಾರ ಕಾರ್ಯವು ಬಿರುಸುಗೊಂಡಿದೆ. ಕಾಂಗ್ರೆಸ್, ಬಿಜೆಪಿ-ಜೆಡಿಎಸ್ ಮೈತ್ರಿ ನಾಯಕರು ಉತ್ತರ ಕರ್ನಾಟಕ, ಹೈದ್ರಾಬಾದ್ ಕರ್ನಾಟಕ ಸಹಿತ ಮಧ್ಯ ಕರ್ನಾಟಕದಲ್ಲಿ ಮತದಾರರ ಮನ ಗೆಲ್ಲಲ್ಲು ಬೆವರು ಹರಿಸುತ್ತಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ರಾಷ್ಟ್ರೀಯಾಧ್ಯಕ್ಷ ಜೆ.ಪಿ.ನಡ್ಡಾ ಈಗಾಗಲೇ ಪ್ರಚಾರದ ಅಖಾಡಕ್ಕೆ ಧುಮುಕ್ಕಿದ್ದು, ನಾಳೆ(ಎ.28) ಪ್ರಧಾನಿ ಮೋದಿ ಬೆಳಗಾವಿ, ಸಿರಸಿ, ದಾವಣಗೆರೆ ಹಾಗೂ ಹೊಸಪೇಟೆಯಲ್ಲಿ ಪ್ರಚಾರ ಕೈಗೊಳ್ಳಲಿದ್ದಾರೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಚಾರ ಕಾರ್ಯ ನಡೆಸಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X