ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಶ್ರೀನಿವಾಸ್ ರಾವ್ ನಿಧನ: ಜಿಲ್ಲಾಡಳಿತದಿಂದ ಗೌರವ ಸಮರ್ಪಣೆ

ಚಾಮರಾಜನಗರ. ಸೆ.13: ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾಗಿದ್ದ ಚಾಮರಾಜನಗರ ಜಿಲ್ಲೆಯ ಶ್ರೀನಿವಾಸ ರಾವ್ (96) ಅವರು ಇಂದು ಮೈಸೂರಿನಲ್ಲಿ ನಿಧನರಾಗಿದ್ದಾರೆ.
ಮೈಸೂರಿನ ಟಿ.ಕೆ.ಬಡಾವಣೆಯಲ್ಲಿರುವ ಶ್ರೀನಿವಾಸ್ ರಾವ್ ಅವರ ನಿವಾಸಕ್ಕೆ ಜಿಲ್ಲಾಧಿಕಾರಿಯವರ ನಿರ್ದೇಶನದ ಮೇರೆಗೆ ಹೆಚ್ಚುವರಿ ಜಿಲ್ಲಾಧಿಕಾರಿಯವರಾದ ಗೀತಾ ಹುಡೇದ ಅವರು ಭೇಟಿ ನೀಡಿ ಅಂತಿಮ ದರ್ಶನ ಪಡೆದು ಜಿಲ್ಲಾಡಳಿತದ ಪರವಾಗಿ ಗೌರವ ಸಮರ್ಪಿಸಿದರು.
ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿದ್ದ ಅವರನ್ನು ಮೈಸೂರಿನ ಅವರ ಮನೆಯಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಜಿಲ್ಲಾಡಳಿತದಿಂದ ಕಳೆದ ಆಗಸ್ಟ್ 9 ರಂದು ಜಿಲ್ಲಾಧಿಕಾರಿಯವರಾದ ಸಿ.ಟಿ.ಶಿಲ್ಪ ನಾಗ್,ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರು ತೆರಳಿ ಸನ್ಮಾನಿಸಿ ಗೌರವಿಸಿದ್ದರು.
Next Story