Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಹಿರಿಯ ಪತ್ರಕರ್ತ, ಬರಹಗಾರ...

ಹಿರಿಯ ಪತ್ರಕರ್ತ, ಬರಹಗಾರ ಜಿ.ಎನ್.ರಂಗನಾಥರಾವ್ ನಿಧನ

ವಾರ್ತಾಭಾರತಿವಾರ್ತಾಭಾರತಿ9 Oct 2023 1:40 PM IST
share
ಹಿರಿಯ ಪತ್ರಕರ್ತ, ಬರಹಗಾರ ಜಿ.ಎನ್.ರಂಗನಾಥರಾವ್ ನಿಧನ

ಬೆಂಗಳೂರು, ಅ.9: ಹಿರಿಯ ಪತ್ರಕರ್ತ, ಖ್ಯಾತ ಬರಹಗಾರರಾಗಿದ್ದ ಜಿ.ಎನ್.ರಂಗನಾಥರಾವ್(81) ವಯೋಸಹಜ ಅನಾರೋಗ್ಯದಿಂದ ಇಂದು ಬೆಳಗ್ಗೆ ನಗರದ ಬಸವನಗುಡಿಯ ಬಿಎಂಎಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಮೃತರು ಓರ್ವ ಪುತ್ರ, ಪುತ್ರಿ ಸಹಿತ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

ವಾರ್ತಾ ಭಾರತಿಯಲ್ಲಿ ಪ್ರಕಟವಾಗುತ್ತಿದ್ದ ‘ನೇಸರ ನೋಡು,ನೇಸಾರ ನೋಡು’ ಅಂಕಣದ ಮೂಲಕ ಜಿ.ಎನ್. ರಂಗನಾಥರಾವ್ ಅವರು ಜನಪ್ರಿಯರಾಗಿದ್ದರು.

ಬೆಂಗಳೂರು ಜಿಲ್ಲೆಯ ಹಾರೋಹಳ್ಳಿಯಲ್ಲಿ 1942ರಲ್ಲಿ ಜನಿಸಿದ ಜಿ.ಎನ್.ರಂಗನಾಥ್ ರಾವ್ ಹೊಸಕೋಟೆ ಹಾಗೂ ಬೆಂಗಳೂರು ನಗರಗಳಲ್ಲಿ ವಿದ್ಯಾಭ್ಯಾಸ ಪೂರ್ಣಗೊಳಿಸಿದರು. ಸಂಯುಕ್ತ ಕರ್ನಾಟಕ ದಿನಪತ್ರಿಕೆಯಲ್ಲಿ ಉಪ ಸಂಪಾದಕರಾಗಿ ವೃತ್ತಿ ಜೀವನ ಆರಂಭಿಸಿದ ಅವರು ಪ್ರಜಾವಾಣಿ ಕಾರ್ಯನಿರ್ವಾಹಕ ಸಂಪಾದಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.

ಆ ಬಳಿಕ ಅನುವಾದಕ, ಅಂಕಣಕಾರ, ಬರಹಗಾರ ಮಾತ್ರವಲ್ಲದೆ ಭಾರತೀಯ ವಿದ್ಯಾ ಭವನದಲ್ಲಿ ಪತ್ರಿಕೋದ್ಯಮದ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದರು. ಜಿ ಎನ್ ರಂಗನಾಥ ರಾವ್ ಮೃದು ಮಾತು ಹಾಗೂ ಸರಳತೆಗೆ ಹೆಸರಾಗಿದ್ದರು.

ಇವರು ಕಾದಂಬರಿ, ಸಣ್ಣಕತೆ, ನಾಟಕ, ಪ್ರಬಂಧಗಳನ್ನು ರಚಿಸಿದ್ದಾರೆ. ಹೊಸ ತಿರುವು, ಮಾಸ್ತಿಯವರ ನಾಟಕಗಳು, ಒಳನೋಟ, ಹಿಂದಣ್ಣ ಹೆಜ್ಜೆ, ಅನ್ಯೋನ್ಯ, ಗುಣ- ದೋಷ ಮುಖ್ಯ ಇವು ಅವರ ವಿಮರ್ಶಾ ಕೃತಿಗಳು. ಇವಲ್ಲದೆ ಅನೇಕ ಕೃತಿಗಳನ್ನು ಅವರು ಕನ್ನಡಕ್ಕೆ ಅನುವಾದಿಸಿದ್ದಾರೆ.

2009ನೇ ಸಾಲಿನ ಖಾದ್ರಿ ಶಾಮಣ್ಣ ಪ್ರಶಸ್ತಿ ಹಾಗೂ 2018ರಲ್ಲಿ ರಾಜ್ಯೋತ್ಸವ ಪ್ರಶಸ್ತಿ, ಸಂದೇಶ ಪ್ರಶಸ್ತಿ, ಕುವೆಂಪು ಭಾಷಾಭಾರತಿ ಪ್ರಶಸ್ತಿ, ಕರ್ನಾಟಕ ನಾಟಕ ಅಕಾಡಮಿ ಫೆಲೋಷಿಪ್, ಟೀಎಸ್ಸಾರ್ ಪ್ರಶಸ್ತಿ, ಮಾಸ್ತಿ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡಮಿಯ ಅನುವಾದ ಸಾಹಿತ್ಯ ಪ್ರಶಸ್ತಿಗಳ ಸಹಿತ ಹಲವು ಪ್ರಶಸ್ತಿ ಪುರಸ್ಕಾರಗಳಿಗೆ ಅವರು ಭಾಜನರಾಗಿದ್ದಾರೆ.

ಮುಖ್ಯಮಂತ್ರಿ ಸಂತಾಪ:

ಲೇಖಕ ಜಿ.ಎನ್.ರಂಗನಾಥರಾವ್ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

"ಹಿರಿಯ ಲೇಖಕ, ಪತ್ರಕರ್ತ ಜಿ.ಎನ್. ರಂಗನಾಥ ರಾವ್ ಅವರ ನಿಧನದ ಸುದ್ದಿ ಆಘಾತವುಂಟುಮಾಡಿದೆ. ಪ್ರಜಾವಾಣಿ ದಿನಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರಾಗಿ ಕಾರ್ಯನಿರ್ವಹಿಸುವುದರ ಜೊತೆಗೆ ಸಾಹಿತ್ಯ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ನಾಡು ನುಡಿಯ ಉನ್ನತಿಗಾಗಿ ದುಡಿದವರು. ರಂಗನಾಥ ರಾವ್ ಅವರ ಅಗಲಿಕೆ ನಾಡಿನ ಪತ್ರಿಕಾರಂಗ ಮತ್ತು ಸಾಹಿತ್ಯ ಕ್ಷೇತ್ರಕ್ಕೆ ತುಂಬಿಬಾರದ ನಷ್ಟ. ಮೃತರ ಆತ್ಮಕ್ಕೆ ಶಾಂತಿ ಮತ್ತು ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಕುಟುಂಬವರ್ಗಕ್ಕೆ ದೇವರು ಕರುಣಿಸಲೆಂದು ಪ್ರಾರ್ಥಿಸುತ್ತೇನೆ." ಎಂದು ಮುಖ್ಯಮಂತ್ರಿ ಸಂತಾಪ ಸಂದೇಶದಲ್ಲಿ ಹೇಳಿದ್ದಾರೆ.


ಹಿರಿಯ ಲೇಖಕ, ಪತ್ರಕರ್ತ ಜಿ.ಎನ್. ರಂಗನಾಥ ರಾವ್ ಅವರ ನಿಧನದ ಸುದ್ದಿ ಆಘಾತವುಂಟುಮಾಡಿದೆ. ಪ್ರಜಾವಾಣಿ ದಿನಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕರಾಗಿ ಕಾರ್ಯನಿರ್ವಹಿಸುವುದರ ಜೊತೆಗೆ ಸಾಹಿತ್ಯ ಕ್ಷೇತ್ರದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ನಾಡು ನುಡಿಯ ಉನ್ನತಿಗಾಗಿ ದುಡಿದಿದ್ದರು. ರಂಗನಾಥ ರಾವ್ ಅವರ ಅಗಲಿಕೆ ನಾಡಿನ ಪತ್ರಿಕಾರಂಗ ಮತ್ತು… pic.twitter.com/8v9EL8MqMP

— CM of Karnataka (@CMofKarnataka) October 9, 2023


share
ವಾರ್ತಾಭಾರತಿ
ವಾರ್ತಾಭಾರತಿ
Next Story
X