Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. 'ಗೃಹಲಕ್ಷ್ಮಿ' ಯೋಜನೆಗೆ ಪ್ರತ್ಯೇಕ...

'ಗೃಹಲಕ್ಷ್ಮಿ' ಯೋಜನೆಗೆ ಪ್ರತ್ಯೇಕ ಆ್ಯಪ್’; ಬುಧವಾರದ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ವಾರ್ತಾಭಾರತಿವಾರ್ತಾಭಾರತಿ23 Jun 2023 10:58 PM IST
share
ಗೃಹಲಕ್ಷ್ಮಿ ಯೋಜನೆಗೆ ಪ್ರತ್ಯೇಕ ಆ್ಯಪ್’; ಬುಧವಾರದ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು, ಜೂ. 23: ‘ಸರಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ‘ಗೃಹಲಕ್ಷ್ಮಿ' ಯೋಜನೆಗೆ ಬುಧವಾರ(ಜೂ.28) ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ರೂಪುರೇಷೆ ಸಿಗಲಿದೆ’ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ಶುಕ್ರವಾರ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಗೃಹ ಲಕ್ಷ್ಮಿ ಯೋಜನೆ ಜಾರಿ ಸಂಬಂಧ ಕಂದಾಯ ಸಚಿವ ಕೃಷ್ಣಭೈರೇಗೌಡ, ಗ್ರಾಮೀಣಾಭಿವೃದ್ಧಿ ಹಾಗೂ ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಅವರೊಂದಿಗೆ ಸುದೀರ್ಘ ಸಭೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಗೃಹ ಲಕ್ಷ್ಮಿ ಯೋಜನೆಗೆ ಪ್ರತ್ಯೇಕ ಆ್ಯಪ್ ತಯಾರಾಗಿದ್ದು, ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಚರ್ಚೆ ನಡೆಸಲಾಗುವುದು. ಅಧಿಕಾರಿಗಳು ಮತ್ತು ಸಚಿವರ ಜೊತೆ ಸುದೀರ್ಘ ಸಭೆ ನಡೆಸಲಾಗಿದೆ. ಯಾವತ್ತು ಅರ್ಜಿ ಸ್ವೀಕಾರ ಮಾಡಬೇಕು ಎಂಬುದನ್ನು ಮುಖ್ಯಮಂತ್ರಿ ಗಮನಕ್ಕೆ ತಂದು ನಿರ್ಧಾರ ಮಾಡುತ್ತೇವೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.

ಆಗಸ್ಟ್‍ನಲ್ಲಿ ಯೋಜನೆ ಜಾರಿ: ಆಗಸ್ಟ್ ತಿಂಗಳಲ್ಲಿ ಗೃಹಲಕ್ಷ್ಮಿ ಯೋಜನೆ ಜಾರಿಗೆ ಬರುತ್ತೆ. ಸೇವಾಸಿಂಧು ಸರ್ವರ್‍ಗೆ ಓವರ್ ಲೋಡ್ ಆಗುತ್ತಿದೆ. ಅಪ್‍ಡೇಟ್ ಆದರೂ ಕೂಡ ಸಮಸ್ಯೆ ಆಗುತ್ತಿದೆ. ಇದಕ್ಕೆಲ್ಲಾ ಆ್ಯಪ್ ನಲ್ಲಿ ಪರಿಹಾರ ಸಿಗಲಿದೆ. ಸಂಪುಟ ಸಭೆಯಲ್ಲಿ ಆ್ಯಪ್‍ನ ಸ್ವರೂಪ, ಕಾರ್ಯವಿಧಾನ ಕುರಿತು ಮುಖ್ಯಮಂತ್ರಿಗೆ ತೋರಿಸಿ ಅಂತಿಮ ದಿನಾಂಕ ಘೋಷಣೆ ಮಾಡ್ತೇವೆ. ಬಹುತೇಕ ಆಗಸ್ಟ್ 17 ಅಥವಾ 18ರಿಂದ ಅರ್ಜಿ ಸ್ವೀಕಾರಕ್ಕೆ ಚಾಲನೆ ಸಿಗಬಹುದು ಎಂದು ಅವರು ಹೇಳಿದರು.

ಕಂದಾಯ ಸಚಿವ ಕೃಷ್ಣಭೈರೇಗೌಡ ನಾಡಕಚೇರಿ, ತಹಶೀಲ್ದಾರರ ಕಚೇರಿ ಬಗ್ಗೆ ಗಮನ ಹರಿಸುತ್ತಿದ್ದಾರೆ. ಗ್ರಾಮೀಣಾಬಿವೃದ್ಧಿ ಸಚಿವರ ಅಡಿ ಬಾಪೂಜಿ ಕೇಂದ್ರಗಳು ಬರುತ್ತವೆ. ಹೀಗಾಗಿ ಮೂವರು ಸಚಿವರೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದರು.

ಗೃಹ ಜ್ಯೋತಿ ಯೋಜನೆಯ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಒಂದೇ ಸಾರಿ ಓವರ್ ಲೋಡ್ ಆಗುತ್ತಿತ್ತು. ಲಕ್ಷಾಂತರ ಜನ ಅರ್ಜಿ ಹಾಕಿದ್ದರಿಂದ ಓವರ್ ಲೋಡ್ ಆಗಿತ್ತು. ಇದೀಗ ಗೃಹ ಜ್ಯೋತಿ ಅರ್ಜಿ ಸಲ್ಲಿಕೆಯ ಪ್ರಕ್ರಿಯೆ ಸ್ಥಿರವಾಗಿದೆ. ಇಂದು ಒಂದೇ ದಿನ ಗೃಹ ಜ್ಯೋತಿಗೆ ಆರು ಲಕ್ಷ ಮಂದಿ ಅರ್ಜಿ ಹಾಕಿದ್ದಾರೆ. ಅದೇ ರೀತಿ ಗೃಹ ಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಕೆ ಪ್ರಕ್ರಿಯೆಯೂ ಸ್ಥಿರವಾಗಿರುವಂತೆ ನೋಡಿಕೊಳ್ಳುತ್ತೇವೆ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.

ಪ್ರಜಾಪ್ರತಿನಿಧಿ ಆಯ್ಕೆ: ಗೃಹಲಕ್ಷ್ಮಿ ಯೋಜನೆಗೆ ಪ್ರಜಾಪ್ರತಿನಿಧಿ ಆಯ್ಕೆ ಮಾಡುತ್ತೇವೆ. ಸಚಿವ ಸಂಪುಟ ಸಭೆಯಲ್ಲಿ ಪ್ರಜಾಪ್ರತಿನಿಧಿ ಆಯ್ಕೆ ಅಂತಿಮ ನಿರ್ಧಾರ ಆಗುತ್ತದೆ. ಸಾವಿರ ಜನರಿಗೆ ಇಬ್ಬರು ಪ್ರಜಾಪ್ರತಿನಿಧಿ ಆಯ್ಕೆ ಮಾಡುವ ಕುರಿತು ಚರ್ಚೆ ಮಾಡಿದ್ದೇವೆ. ಅರ್ಜಿ ಸಲ್ಲಿಕೆಗೆ ಕಾಲಮಿತಿಯಿಲ್ಲ. ಆದುದರಿಂದ, ಯಾರೊಬ್ಬರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X