Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ ಆಯೋಗ...

ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ ಆಯೋಗ ಕುರಿತು ಕಾನೂನು ಸಲಹೆ ಪಡೆದು ತೀರ್ಮಾನ: ಸಿಎಂ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ28 July 2023 11:53 PM IST
share
ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ ಆಯೋಗ ಕುರಿತು ಕಾನೂನು ಸಲಹೆ ಪಡೆದು ತೀರ್ಮಾನ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ‘ಅಲೆಮಾರಿ, ಅರೆಅಲೆಮಾರಿ ಜನಾಂಗದವರ ಅಭಿವೃದ್ಧಿಗೆ ಪ್ರತ್ಯೇಕ ಆಯೋಗ ರಚನೆಗೆ ಸಂಬಂಧಿಸಿದಂತೆ ಕಾನೂನು ಸಲಹೆ ಪಡೆದು ತೀರ್ಮಾನಕ್ಕೆ ಬರಲಾಗುವುದು. ಈ ಬಗ್ಗೆ ಸರಕಾರ ಸಕಾರಾತ್ಮಕವಾಗಿದೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದ್ದಾರೆ.

ಶುಕ್ರವಾರ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ರಾಜ್ಯದ ಎಸ್.ಸಿ, ಎಸ್.ಟಿ ಮತ್ತು ಹಿಂ.ವರ್ಗಗಳ ಅಲೆಮಾರಿ, ಅರೆಅಲೆಮಾರಿ, ವಿಮುಕ್ತ ಬುಡಕಟ್ಟು ಸಂಘಟನೆಗಳ ಸಮನ್ವಯ ಸಮಿತಿಯ ಮುಖಂಡರೊಂದಿಗೆ ಅಲೆಮಾರಿ ಜನರ ಕುಂದು-ಕೊರತೆಗಳ ಕುರಿತು ಸಭೆಯಲ್ಲಿ ಮಾತನಾಡಿದ ಅವರು, ‘ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂ.ವರ್ಗಗಳ ಅಭಿವೃದ್ಧಿ ನಿಗಮಗಳಿಗೆ ಅನುದಾನ ನೀಡುವ ಬಗ್ಗೆ ಪರಿಶೀಲಿಸಿ ಕ್ರಮ ವಹಿಸಲಾಗುವುದು ಎಂದರು.

‘ಅಲೆಮಾರಿ ಜನಾಂಗಗಳು ಶೈಕ್ಷಣಿಕ, ಆರ್ಥಿಕವಾಗಿ ಮುಖ್ಯವಾಹಿನಿಗೆ ಬರಬೇಕು. ಇವರಿಗೆ ವಿಶೇಷವಾಗಿ ವಸತಿ ಸೌಲಭ್ಯ ಕಲ್ಪಿಸುವ ಬಗ್ಗೆಯೂ ಪರಿಶೀಲಿಸಲಾಗುವುದು. ಸಾಮಾಜಿಕ ನ್ಯಾಯ ಎಲ್ಲರಿಗೂ ದೊರಕಬೇಕು’ ಎಂದು ಸಿದ್ದರಾಮಯ್ಯ ಪ್ರತಿಪಾದಿಸಿದರು.

‘ಅಲೆಮಾರಿಗಳ ಸಮಸ್ಯೆಗಳು ವಿಶಿಷ್ಟವಾಗಿದ್ದು, ಒಟ್ಟು 120 ಜಾತಿಗಳಿವೆ. ಈ ಪೈಕಿ ಎಸ್.ಸಿ 51, ಎಸ್.ಟಿ 23 ಹಾಗೂ ಹಿಂ.ವರ್ಗದ 46 ಜಾತಿಗಳಿವೆ. ಈ ಸಮುದಾಯಗಳ ರಾಜ್ಯ ಮಟ್ಟದ ಸಂಘಟನೆಗಳಿದ್ದು, ಅವುಗಳನ್ನು ಒಟ್ಟು ಸೇರಿಸಿ ಸಮನ್ವಯ ಸಮಿತಿ ರಚಿಸಲಾಗಿದೆ. ಹೀನಾಯ ಪರಿಸ್ಥಿತಿಯಲ್ಲಿ ಬದುಕುತ್ತಿರುವ, ಅಸ್ಮಿತೆ ಇಲ್ಲದ ಸಮುದಾಯಗಳಿಗೆ ಸೌಲಭ್ಯಗಳು ದೊರೆಯುತ್ತಿಲ್ಲ. ಸರಕಾರ ಅಲೆಮಾರಿಗಳನ್ನು ಗುರುತಿಸಬೇಕಿದೆ. ದಾಖಲೆಗಳಲ್ಲಿ ಇವರು ಇಲ್ಲದಿರುವುದರಿಂದ ಸಮಾಜದ ತಿರಸ್ಕಾರಕ್ಕೆ ಒಳಗಾಗಿದ್ದಾರೆ.

ಜಾತಿ ಪ್ರಮಾಣಪತ್ರವೂ ಇವರಿಗಿಲ್ಲ. ಸರಕಾರ ಕೆಲವು ಜಾತಿಗಳನ್ನು ಮಾತ್ರ ಗುರುತಿಸಿದ್ದು, ಇವರನ್ನು ಗುರುತಿಸುವ ಔದಾರ್ಯವನ್ನು ಸರಕಾರ ತೋರಬೇಕು. ಸಮಾನ ಕುಲ, ಗೋತ್ರ, ಭಾಷೆ ಇರುವ ಜಾತಿಗಳನ್ನು ಗುರುತಿಸಬೇಕಿದೆ. ತಬ್ಬಲಿ ಸಮುದಾಯಗಳನ್ನು ಬೆಳೆಸುವ ನಿಟ್ಟಿನಲ್ಲಿ ಅಲೆಮಾರಿ ಸಮುದಾಯಗಳಿಗೆ ಆಯೋಗ ರಚಿಸಬೇಕು. ಆಗಸ್ಟ್ 31ರಂದು ರಾಷ್ಟ್ರೀಯ ಅಲೆಮಾರಿ ವಿಮುಕ್ತ ದಿನಾಚರಣೆಯಂದು ರಾಜ್ಯ ಸರಕಾರ ಆಚರಿಸಬೇಕು. ಜೋಗಿ, ಪಿಚ್ಚಗುಂಟಲು ಜಾತಿಗಳ ಕುಲಶಾಸ್ತ್ರೀಯ ಅಧ್ಯಯನ ಪೂರ್ಣಗೊಂಡಿದೆ. ಅವುಗಳನ್ನು ಸೂಕ್ತ ಜಾತಿಗೆ ಸೇರಿಸಿ ಮೀಸಲಾತಿ ಕಲ್ಪಿಸಬೇಕು. ಅಲೆಮಾರಿ ಸಮುದಾಯಕ್ಕೂ ರಾಜಕೀಯ ಪ್ರಾತಿನಿಧ್ಯ ನೀಡಬೇಕು’ ಎಂದು ಸಮಿತಿಯ ಮುಖಂಡರು ಮನವಿ ಮಾಡಿದರು.

ಹಲವು ಜಾತಿಗಳು ಬಹುನಾಮಿಗಳಾಗಿರುವುದರಿಂದ ಜಾತಿ ಪ್ರಮಾಣ ಪತ್ರ ದೊರೆಯುತ್ತಿಲ್ಲ. ಅಗೋಚರ ಸಮುದಾಯಗಳು ಪ್ರಾತಿನಿಧ್ಯವಿಲ್ಲದೆ ಇದ್ದಾರೆ. ಅವರಿಗೆ ಗುರುತು ಸಿಕ್ಕರೆ, ಶಿಕ್ಷಣ, ರಾಜ್ಯ ಸರಕಾರದ ಯೋಜನೆಗಳನ್ನು ಪಡೆಯಲು ಸಾಧ್ಯವಾಗುತ್ತದೆ ಎಂದು ಮುಖಂಡರು, ಸಿಎಂಗೆ ಇದೇ ವೇಳೆ ಮನವಿ ಮಾಡಿದರು.

ಸಚಿವ ಭೈರತಿ ಸುರೇಶ್, ಸಿಎಂ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಶಾಸಕ ಕೊತ್ತೂರು ಮಂಜುನಾಥ್, ಪರಿಷತ್ ಸದಸ್ಯ ಅನಿಲ್ ಕುಮಾರ್, ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷ ಪ್ರೊ.ಎಸ್.ಜಿ. ಸಿದ್ದರಾಮಯ್ಯ, ಹಿರಿಯ ಪತ್ರಕರ್ತ ಇಂದೂಧರ ಹೊನ್ನಾಪುರ, ಹಂಪಿ ಕನ್ನಡ ವಿ.ವಿ ಉಪನ್ಯಾಸಕ ಡಾ. ಮೇತ್ರಿ, ಲೀಲಾ ಸಂಪಿಗೆ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X