‘ಬುಕ್ ಆಫ್ ರೆಕಾರ್ಡ್’ಗೆ ಸೇರಿದ ‘ಶಕ್ತಿ ಯೋಜನೆ’; ಸಚಿವ ರಾಮಲಿಂಗಾರೆಡ್ಡಿ, ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಸಿಎಂ ಅಭಿನಂದನೆ

ಬೆಂಗಳೂರು: ಕಾಂಗ್ರೆಸ್ ಸರಕಾರದ ಮಹಿಳಾ ಸಬಲೀಕರಣದೆಡೆಗಿನ ಮಹತ್ವಾಕಾಂಕ್ಷೆಯ ‘ಶಕ್ತಿ ಯೋಜನೆ’ಗೆ ‘ಇಂಟರ್‍ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್ ಹಾಗೂ ʼವರ್ಲ್ಡ್ ರೆಕಾರ್ಡ್ ಆಫ್ ಎಕ್ಸಲೆನ್ಸ್’ ಪ್ರಶಸ್ತಿ ಲಭಿಸಿದ್ದು, ಈ ಮೂಲಕ 500 ಕೋಟಿ ಮಹಿಳಾ ಉಚಿತ ಪ್ರಯಾಣ ಬೆನ್ನಲ್ಲೇ ‘ಶಕ್ತಿ ಯೋಜನೆ’ ಮತ್ತೊಂದು ವಿಶ್ವ ದಾಖಲೆಗೆ ಸೇರ್ಪಡೆಯಾಗಿದೆ.
ಈ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಸಾರಿಗೆ ಇಲಾಖೆಯ ನಾಲ್ಕು ನಿಗಮಗಳ ಅಧಿಕಾರಿಗಳು, ಸಿಬ್ಬಂದಿ, ಕಾರ್ಮಿಕ ಮುಖಂಡರು ಹಾಗೂ ಮಹಿಳಾ ಪ್ರಯಾಣಿಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದನೆ ತಿಳಿಸಿದ್ದಾರೆ.
ಈ ಬಗ್ಗೆ ಶುಕ್ರವಾರ ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ‘ಸಮಸ್ತ ಕನ್ನಡಿಗರು ಹೆಮ್ಮೆ ಪಡುವ ಕ್ಷಣವಿದು. ನಮ್ಮ ಸರಕಾರ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಶಕ್ತಿ’ಯು ‘ಇಂಟರ್‍ನ್ಯಾಷನಲ್ ಬುಕ್ ಆಫ್ ರೆಕಾಡ್ರ್ಸ್ ಹಾಗೂ ವಲ್ರ್ಡ್ ರೆಕಾರ್ಡ್ ಆಫ್ ಎಕ್ಸಲೆನ್ಸ್’ ಗೆ ಸೇರ್ಪಡೆಗೊಂಡು, ಮತ್ತೊಂದು ಮೈಲಿಗಲ್ಲು ಸಾಧಿಸಿದೆ’ ಎಂದಿದ್ದಾರೆ.
‘ಶಕ್ತಿ ಯೋಜನೆಯು ಚಾಲನೆಗೊಂಡ ದಿನದಿಂದ ಅಂದರೆ, 2023ರ ಜೂನ್ 11 ರಿಂದ 2025ರ ಜುಲೈ 25ರ ಅವಧಿಯಲ್ಲಿ ಸಾರಿಗೆ ನಿಗಮದ ಬಸ್ಸುಗಳಲ್ಲಿ 504ಕೋಟಿ 90 ಲಕ್ಷಕ್ಕೂ ಹೆಚ್ಚು ಬಾರಿ ಮಹಿಳಾ ಪ್ರಯಾಣಿಕರು ಸಾರಿಗೆ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ. ಈ ಸಾಧನೆಗಾಗಿ ಶಕ್ತಿ ಯೋಜನೆಯು ಈಗಾಗಲೇ ಪ್ರತಿಷ್ಠಿತ ‘ಗೋಲ್ಡನ್ ಬುಕ್ ಆಫ್ ವಲ್ರ್ಡ್ ರೆಕಾಡ್ರ್ಸ್’ನಲ್ಲಿ ದಾಖಲಾಗಿದೆ. ಇದೀಗ ಮತ್ತೊಂದು ಮೈಲಿಗಲ್ಲು ಸಾಧಿಸಿದ್ದು, ವಿಶ್ವ ದಾಖಲೆ ಬರೆದಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ನಾಡಿನ ಸ್ವಾಭಿಮಾನಿ ಮಹಿಳೆಯರನ್ನು ಸ್ವಾವಲಂಬಿಗಳನ್ನಾಗಿಸುವ ಉದ್ದೇಶದೊಂದಿಗೆ ಜಾರಿಗೆ ತಂದ ಶಕ್ತಿ ತನ್ನ ಗುರಿಯನ್ನು ಯಶಸ್ವಿಯಾಗಿ ಈಡೇರಿಸುತ್ತಾ ಮುನ್ನಡೆಯುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಉದ್ಯೋಗದಲ್ಲಿ ತೊಡಗಿಕೊಂಡಿದ್ದು, ಇದರಿಂದ ಆರ್ಥಿಕ ಅಭಿವೃದ್ದಿ ಸಾಧ್ಯವಾಗಿದೆ. ಸ್ತ್ರೀ ಸಬಲೀಕರಣದ ಮಹತ್ವದ ಹೆಜ್ಜೆಯಲ್ಲಿ ನಮ್ಮೊಂದಿಗೆ ಜೊತೆಯಾಗಿರುವ ಎಲ್ಲಾ ಹೆಣ್ಣುಮಕ್ಕಳಿಗೆ ಶಕ್ತಿ ಯೋಜನೆಯ ಸಾಧನೆಯ ಶ್ರೇಯಸ್ಸು ಸಲ್ಲುತ್ತದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಸಮಸ್ತ ಕನ್ನಡಿಗರು ಹೆಮ್ಮೆ ಪಡುವ ಕ್ಷಣವಿದು. ನಮ್ಮ ಸರ್ಕಾರ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ʼಶಕ್ತಿʼಯು International Book of Records - World Record of Excellence ಗೆ ಸೇರ್ಪಡೆಗೊಂಡು, ಮತ್ತೊಂದು ಮೈಲಿಗಲ್ಲು ಸಾಧಿಸಿದೆ.
— CM of Karnataka (@CMofKarnataka) October 3, 2025
ಶಕ್ತಿ ಯೋಜನೆಯು ಚಾಲನೆಗೊಂಡ ದಿನದಿಂದ ಅಂದರೆ, ಜೂನ್ 11, 2023 ರಿಂದ ಜುಲೈ 25, 2025ರ… pic.twitter.com/407Qud3WIA







