Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಶಾಲಾ ಹಂತದಲ್ಲಿಯೇ ಡಿಜಿಟಲ್ ಭದ್ರತೆ...

ಶಾಲಾ ಹಂತದಲ್ಲಿಯೇ ಡಿಜಿಟಲ್ ಭದ್ರತೆ ಅರಿವು ಮೂಡಿಸಿ : ಡಾ.ಶಾಲಿನಿ ರಜನೀಶ್

ವಾರ್ತಾಭಾರತಿವಾರ್ತಾಭಾರತಿ20 Aug 2024 7:17 PM IST
share
ಶಾಲಾ ಹಂತದಲ್ಲಿಯೇ ಡಿಜಿಟಲ್ ಭದ್ರತೆ ಅರಿವು ಮೂಡಿಸಿ : ಡಾ.ಶಾಲಿನಿ ರಜನೀಶ್

ಬೆಂಗಳೂರು : ಮಕ್ಕಳ ವಿರುದ್ದ ನಡೆಯುತ್ತಿರುವ ಸೈಬರ್ ಅಪರಾಧ ಪ್ರಕರಣಗಳನ್ನು ಗಣನೀಯವಾಗಿ ನಿಯಂತ್ರಿಸಬೇಕಾಗಿದೆ. ಹೀಗಾಗಿ ಶಾಲಾ ಹಂತದಲ್ಲಿಯೇ ಮಕ್ಕಳಿಗೆ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳಲ್ಲಿ ಡಿಜಿಟಲ್ ಭದ್ರತೆ ಕುರಿತು ಅರಿವು ಮೂಡಿಸಬೇಕು ಎಂದು ಸರಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ತಿಳಿಸಿದ್ದಾರೆ.

ಮಂಗಳವಾರ ವಿಧಾನಸೌಧದಲ್ಲಿ ಸೈಬರ್ ಅಪಾರಾಧ ನಿಯಂತ್ರಣ ಮತ್ತು ಸೈಬರ್ ಭದ್ರತೆ ಹೆಚ್ಚಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಆನ್‍ಲೈನ್ ಹಣಕಾಸು ವಂಚನೆ ಮತ್ತು ಸೈಬರ್ ಚಟುವಟಿಕೆಗಳಿಗೆ ಭದ್ರತೆ ಒದಗಿಸಲು ಕರ್ನಾಟಕ ಸೈಬರ್ ಭದ್ರತಾ ನೀತಿಯನ್ನು ಇನಷ್ಟು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದರು.

18 ವರ್ಷದ ಒಳಗಿನ ಮಕ್ಕಳ ರಕ್ಷಣೆ, ತಂತ್ರಜ್ಞಾನ ಮತ್ತು ಜಾಲತಾಣಗಳಿಂದ ಮಕ್ಕಳ ಮೇಲೆ ಉಂಟಾಗುತ್ತಿರುವ ಪರಿಣಾಮಗಳು, ಅಹಿತಕರ ಚಟುವಟಿಕೆಗಳಲ್ಲಿ ಕಾನೂನಿಗೆ ವಿರುದ್ಧವಾದ ಚಟುವಟಿಕೆಗಳಲ್ಲಿ ಮಕ್ಕಳು ತಮಗೆ ಅರಿಯದೆ ಭಾಗಿಯಾಗುತ್ತಿರುವುದನ್ನು ನಿಯಂತ್ರಿಸುವುದು ಅತ್ಯಗತ್ಯವಾಗಿದೆ. ಎನ್‍ಸಿಆರ್‍ಬಿ ಮತ್ತು ಎಸ್‍ಸಿಆರ್‍ಬಿ ವರದಿಗಳಲ್ಲಿ ಮಕ್ಕಳ ವಿರುದ್ದ ನಡೆಯುತ್ತಿರುವ ಸೈಬರ್ ಅಪಾರಾಧಗಳ ಪ್ರಮಾಣವನ್ನು ಅವಲೋಕಿಸಿ ನಿಯಂತ್ರಿಸುವ ಕಾರ್ಯಗಳು ನಿರಂತರವಾಗಿ ಹಾಗೂ ಪರಿಣಮಕಾರಿಯಾಗಿ ಮುಂದುವರೆಯಬೇಕು ಎಂದು ಅವರು ತಿಳಿಸಿದರು.

ಕರ್ನಾಟಕ ಸೈಬರ್ ಭದ್ರತಾ ನೀತಿಯ ಪರಿಣಾಮಕಾರಿ ಅನುಷ್ಠಾನಕ್ಕೆ ಅಗತ್ಯವಿರುವ ನೆರವು ಹಾಗೂ ಮಾನವ ಸಂಪನ್ಮೂಲ ಒದಗಿಸಲು ಸರಕಾರ ಸಿದ್ದವಿದೆ. ಗೂಗಲ್, ಮೆಟಾ, ಫೇಸ್‍ಬುಕ್, ಮೈಕ್ರೋಸಾಫ್ಟ್, ಯುಟ್ಯೂಬ್ ಮತ್ತಿತರ ಕಂಪನಿಗಳ ಜೊತೆ ಸಮನ್ವಯ ಸಾಧಿಸಿ ಮಕ್ಕಳಿಗೆ ಸಂಬಂಧಿಸಿದ ಸಿಎಸ್‍ಎಎಂ ಸಾಮಾಗ್ರಿಗಳನ್ನು ಗುರುತಿಸಿ ಸಂಬಂಧಿಸಿದ ಇಲಾಖೆಗಳಿಗೆ ಕಳುಹಿಸಿ ಅಗತ್ಯ ಕ್ರಮ ಕೈಗೊಳ್ಳಲು ತಿಳಿಸಲಾಗುವುದು ಎಂದು ಅವರು ಹೇಳಿದರು.

ಸೈಬರ್ ವಂಚನೆಗೆ ಒಳಗಾದ ಮಕ್ಕಳಿಗೆ, ಮಕ್ಕಳ ರಕ್ಷಣಾ ನಿರ್ದೇಶನಾಲಯ ಸಹಯೋಗದಲ್ಲಿ ಪುನರ್‌ ವಸತಿಗೆ ಕ್ರಮ ವಹಿಸಬೇಕು. ಮಕ್ಕಳ ಕೈಗೆ ಮೊಬೈಲ್ ಕೊಟ್ಟು ಪಾಲಕರು ನಿರ್ಲಕ್ಷ್ಯ ತೋರಬಾರದು. ಸೈಬರ್ ಅಪರಾಧ ಪತ್ತೆ ಘಟಕಗಳು ಹಾಗೂ ಬ್ಯಾಂಕಿಂಗ್ ವಲಯ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ ಹಣಕಾಸು ವಂಚನೆಗಳನ್ನು ತ್ವರಿತವಾಗಿ ಪತ್ತೆ ಮಾಡಿ ತಪ್ಪಿತಸ್ಥರನ್ನು ಶಿಕ್ಷಿಸುವ ಕಾರ್ಯಗಳಾಬೇಕು ಎಂದು ಡಾ. ಶಾಲಿನಿ ರಜನೀಶ್ ಸೂಚಿಸಿದರು.

ಗೃಹ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿ ಎಸ್.ರವಿ, ಅಪರಾಧ ವಿಭಾಗದ ಎಡಿಜಿಪಿ ಹರಿಶೇಖರನ್, ವಾರ್ತಾ ಇಲಾಖೆಯ ಆಯುಕ್ತ ಹೇಮಂತ್ ಎಂ.ನಿಂಬಾಳ್ಕರ್, ಸಿಐಡಿ ಡಿಜಿಪಿ ಅಬ್ದುಲ್ ಸಲೀಂ, ಸೈಬರ್ ಆಂತರಿಕಾ ಭದ್ರತಾ ವಿಭಾಗದ ಡಿಜಿಪಿ ಪ್ರಣಬ್ ಮೊಹಾಂತಿ, ನಾರ್ಕೋಟಿಕ್ಸ್ ವಿಭಾಗದ ಪೊಲೀಸ್ ಅಧೀಕ್ಷಕಿ ಸವಿತಾ, ಸಿಎಂ ವಿಶೇಷ ಕರ್ತವ್ಯಾಧಿಕಾರಿ ಡಾ.ಕೆ.ವೈಷ್ಣವಿ ಮತ್ತಿತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X