ಸರಕಾರಿ ಗೌರವದೊಂದಿಗೆ ಶಾಮನೂರು ಶಿವಶಂಕರಪ್ಪ ಅಂತ್ಯಕ್ರಿಯೆ

ದಾವಣಗೆರೆ : ಹಿರಿಯ ರಾಜಕಾರಣಿ, ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಹಾಗೂ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಅಂತ್ಯಕ್ರಿಯೆ ಸೋಮವಾರ ಸಂಜೆ ವೀರಶೈವ ಲಿಂಗಾಯತ ಸಂಪ್ರದಾಯದಂತೆ ನಡೆಯಿತು.
ನಗರದ ಹಳೇಯ ಭಾಗದ ಕಲ್ಲೇಶ್ವರ ರೈಸ್ ಮಿಲ್ ನಲ್ಲಿ ಆವರಣದಲ್ಲಿರುವ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಅವರ ಸಮಾಧಿ ಪಕ್ಕದಲ್ಲೇ ಸರಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು.
ಪುತ್ರರಾದ ಎಸ್.ಎಸ್.ಗಣೇಶ್, ಎಸ್.ಎಸ್.ಬಕ್ಕೇಶ್, ಜಿಲ್ಲಾ ಉಸ್ತುವಾರಿ ಸಚಿವ ಎಸ್..ಎಸ್. ಮಲ್ಲಿಕಾರ್ಜುನ್, ಸಂಸದೆ ಡಾ ಪ್ರಭಾ ಮಲ್ಲಿಕಾರ್ಜುನ್, ನಾಲ್ವರು ಪುತ್ರಿಯರು ಹಾಗೂ ಕುಟುಂಬ ವರ್ಗದವರು ಅಂತಿಮ ವಿಧಿವಿಧಾನ ಪೂರೈಸಿದರು.
ಅಂತ್ಯಕ್ರಿಯೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ರಾಷ್ಟ್ರೀಯ ಮಲ್ಲಿಕಾರ್ಜುನ ಖರ್ಗೆ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಧಾನಸಭೆಯ ಸಭಾಪತಿ ಯು.ಟಿ.ಖಾದರ್, ಕಾನೂನು ಸಚಿವ ಎಚ್.ಕೆ.ಪಾಟೀಲ್, ಸಚಿವರಾದ ಈಶ್ವರ್ ಖಂಡ್ರೆ, ಟಿ.ಕೆ.ಜಾರ್ಜ್, ಭೈರತಿ ಸುರೇಶ್, ಎಚ್.ಸಿ.ಮಹಾದೇವಪ್ಪ, ಎಂ.ಬಿ.ಪಾಟೀಲ್, ಝಮೀರ್ ಅಹಮ್ಮದ್, ಲಕ್ಷ್ಮೀ ಹೆಬ್ಬಾಳ್ಕರ್, ಡಿ.ಸುಧಾಕರ್, ಕೆ.ಎಚ್.ಮುನಿಯಪ್ಪ, ಶರಣಪ್ಪ ದರ್ಶನಾಪುರ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ, ಮಾಜಿ ಸಚಿವೆ ಉಮಾಶ್ರೀ, ಎಚ್.ಡಿ.ರೇವಣ್ಣ, ಶಾಸಕರಾದ ಕೆ.ಎಸ್.ಬಸವಂತಪ್ಪ, ಬಸವರಾಜ್ ಶಿವಗಂಗಾ, ಸಿ.ಟಿ.ರವಿ ಸೇರಿದಂತೆ ಸಚಿವರು, ಶಾಸಕರು, ರಾಜಕೀಯ ನಾಯಕರು ಅಂತಿಮ ದರ್ಶನ ಪಡೆದರು.
ಸಿರಿಗೆರೆ ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ, ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ವಚನಾನಂದ ಸ್ಬಾಮೀಜಿ, ಮೈಸೂರಿನ ಸುತ್ತೂರು ಶ್ರೀ , ರಂಭಾಪುರಿ ಶ್ರೀ ಸೇರಿದಂತೆ ನಾಡಿನ ವಿವಿಧ ಮಠಾಧೀಶರು ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು.







