Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಶೀಘ್ರದಲ್ಲೇ ವೈದ್ಯಕೀಯ ಕಾಲೇಜುಗಳಿಗೆ 650...

ಶೀಘ್ರದಲ್ಲೇ ವೈದ್ಯಕೀಯ ಕಾಲೇಜುಗಳಿಗೆ 650 ಸಹಾಯಕ ಪ್ರಾಧ್ಯಾಪಕರು, 1200 ನರ್ಸ್‍ಗಳ ನೇಮಕ : ಶರಣಪ್ರಕಾಶ್ ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ7 Aug 2024 7:07 PM IST
share
ಶೀಘ್ರದಲ್ಲೇ ವೈದ್ಯಕೀಯ ಕಾಲೇಜುಗಳಿಗೆ 650 ಸಹಾಯಕ ಪ್ರಾಧ್ಯಾಪಕರು, 1200 ನರ್ಸ್‍ಗಳ ನೇಮಕ : ಶರಣಪ್ರಕಾಶ್ ಪಾಟೀಲ್

ಬೆಂಗಳೂರು : ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಗ್ರೂಪ್-ಎ ನ 650 ಸಹಾಯಕ ಪ್ರಾಧ್ಯಾಪಕರು ಹಾಗೂ 1200 ನರ್ಸ್‍ಗಳನ್ನು(ದಾದಿಯರು) ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಮೂಲಕ ಶೀಘ್ರವೆ ನೇಮಕ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಸೂಚಿಸಿದ್ದಾರೆ.

ಬುಧವಾರ ವಿಕಾಸಸೌಧದಲ್ಲಿ ಈ ಸಂಬಂಧ ವೈದ್ಯಕೀಯ ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆ ನಡೆಸಿದ ಮಹತ್ವದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಪಾಡಿಕೊಳ್ಳುವ ಉದ್ದೇಶದಿಂದ ಸ್ಪರ್ಧಾತಕ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕವೇ ನಡೆಸಿ, ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಬೇಕೆಂದು ವೈದ್ಯಕೀಯ ಶಿಕ್ಷಣ ಇಲಾಖೆಗೆ ಸ್ಪಷ್ಟ ನಿರ್ದೇಶನ ನೀಡಿದರು.

ಸಹಾಯಕ ಪ್ರಾಧ್ಯಾಪಕರು ಹಾಗೂ ನರ್ಸ್‍ಗಳ ನೇಮಕಾತಿ ಸಂದರ್ಭದಲ್ಲಿ ಭ್ರಷ್ಟಾಚಾರ ಮತ್ತು ಸ್ವಜನಪಕ್ಷಪಾತದ ಆರೋಪದ ನಡುವೆ, ವೈದ್ಯಕೀಯ ಕಾಲೇಜು ಸಂಸ್ಥೆಗಳ ಮುಖ್ಯಸ್ಥರು ನಡೆಸುತ್ತಿದ್ದ ಪ್ರಸ್ತುತ ನೇಮಕಾತಿ ಪ್ರಕ್ರಿಯೆಯಿಂದ ತೃಪ್ತರಾಗದ ಶರಣಪ್ರಕಾಶ್ ಪಾಟೀಲ್, ಮುಂಬರುವ ಗ್ರೂಪ್-ಎ ಮತ್ತು ದಾದಿಯರ ನೇಮಕಾತಿಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕವೇ ಭರ್ತಿ ಮಾಡಿಕೊಳ್ಳಬೇಕೆಂದು ನಿರ್ದೇಶನ ನೀಡಿದರು.

ರಾಜ್ಯಾದ್ಯಂತ 22 ವೈದ್ಯಕೀಯ ಕಾಲೇಜುಗಳು ಮತ್ತು 11 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು ವೈದ್ಯಕೀಯ ಶಿಕ್ಷಣ ಇಲಾಖೆ ಅಡಿಯಲ್ಲಿ ಬರುತ್ತಿವೆ. ಈ ಹುದ್ದೆಗಳನ್ನು ನಿಯಮದಂತೆ ಯಾವುದೇ ಮುಲಾಜಿಗೊಳಗಾಗದೇ ಭರ್ತಿ ಮಾಡಬೇಕೆಂದು ಶರಣಪ್ರಕಾಶ್ ಪಾಟೀಲ್ ತಾಕೀತು ಮಾಡಿದರು.

ನೇಮಕಾತಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆಯನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು. ಖಾಲಿ ಇರುವ ಹುದ್ದೆಗಳಿಗೆ ಪರೀಕ್ಷೆಗಳನ್ನು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಅಗತ್ಯವಾದ ಸಹಕಾರ ನೀಡುವುದರ ಜೊತೆಗೆ ಇಲಾಖೆಯ ನೇಮಕಾತಿ ಬೈಲಾಗಳನ್ನು ತಿದ್ದುಪಡಿ ಮಾಡಲಾಗುವುದು ಎಂದು ಅವರು ಹೇಳಿದರು.

ಕೆಇಎ ಮೂಲಕ ಶುಶ್ರೂಷಕರನ್ನು ನೇಮಕ ಮಾಡಿಕೊಳ್ಳುವ ಪ್ರಸ್ತಾವನೆಯನ್ನು ಸರಕಾರ ಕಳೆದೆರಡು ವರ್ಷಗಳ ಹಿಂದೆಯೇ ಕಳುಹಿಸಿತ್ತು. ಆದಾಗ್ಯೂ, ಸರಿಯಾದ ಸಿ ಅಂಡ್ ಆರ್ ನಿಯಮಗಳು, ರೋಸ್ಟರ್ ಸಿಸ್ಟಮ್ ಇಲ್ಲದಿದ್ದಲ್ಲಿ ಪರೀಕ್ಷೆಯನ್ನು ನಡೆಸುವುದು ಕಷ್ಟ ಎಂದು ಕೆಇಎ ಉತ್ತರಿಸಿದೆ ಎಂಬ ಮಾಹಿತಿಯನ್ನು ಸಭೆಯಲ್ಲಿ ಅಧಿಕಾರಿಗಳು ಸಚಿವರ ಗಮನಕ್ಕೆ ತಂದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಡಿ ದಾದಿಯರ ನೇಮಕಾತಿಗೆ ಅನ್ವಯವಾಗುವ ಸಿ ಮತ್ತು ಆರ್ ನಿಯಮಗಳನ್ನು ಅನುಸರಿಸುವಂತೆ ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕರು ಮತ್ತು ಜಂಟಿ ಕಾರ್ಯದರ್ಶಿಗೆ ಶರಣಪ್ರಕಾಶ್ ಪಾಟೀಲ್ ಸೂಚಿಸಿದರು.

ನೇಮಕಾತಿ ನಿಲುವಳಿಯನ್ನು ಕೆಇಎಗೆ ಹಸ್ತಾಂತರಿಸುವ ಸುಗಮ ಪ್ರಕ್ರಿಯೆಗಾಗಿ, ಪರೀಕ್ಷೆಗಳನ್ನು ನಡೆಸಲು ಕೆಇಎಗೆ ಪಠ್ಯಕ್ರಮಕ್ಕಾಗಿ ತಜ್ಞರ ಸಮಿತಿಯನ್ನು ರಚಿಸುವಂತೆ ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕಿ ಡಾ.ಸುಜಾತಾ ರಾಥೋಡ್‍ಗೆ ಸಚಿವರು ಸೂಚಿಸಿದರು.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X