Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಇನ್ವೆಸ್ಟ್ ಕರ್ನಾಟಕ 2025 |...

ಇನ್ವೆಸ್ಟ್ ಕರ್ನಾಟಕ 2025 | ಬಹುಧ್ರುವೀಕರಣದ ಜಗತ್ತಿನಲ್ಲಿ ವಿಶ್ವಸಂಸ್ಥೆ ಕೂಡಾ ಮೂಲ ಉದ್ದೇಶದೊಂದಿಗೆ ಕಾರ್ಯನಿರ್ವಹಿಸುತ್ತಿಲ್ಲ: ಶಶಿ ತರೂರ್

ವಾರ್ತಾಭಾರತಿವಾರ್ತಾಭಾರತಿ14 Feb 2025 4:10 PM IST
share
ಇನ್ವೆಸ್ಟ್ ಕರ್ನಾಟಕ 2025 | ಬಹುಧ್ರುವೀಕರಣದ ಜಗತ್ತಿನಲ್ಲಿ ವಿಶ್ವಸಂಸ್ಥೆ ಕೂಡಾ ಮೂಲ ಉದ್ದೇಶದೊಂದಿಗೆ ಕಾರ್ಯನಿರ್ವಹಿಸುತ್ತಿಲ್ಲ: ಶಶಿ ತರೂರ್

ಬೆಂಗಳೂರು : ಬಹುಧ್ರುವೀಕರಣದ ಜಗತ್ತಿನಲ್ಲಿ ವಿಶ್ವಸಂಸ್ಥೆ ಕೂಡಾ ಮೂಲ ಉದ್ದೇಶದೊಂದಿಗೆ ಕಾರ್ಯನಿರ್ವಹಿಸುತ್ತಿಲ್ಲ. ಅಸಮಾನತೆ, ತಾರತಮ್ಯಗಳು ಅಲ್ಲೂ ಇದ್ದು, ಅದನ್ನು ಅರ್ಥ ಮಾಡಿಕೊಂಡರಷ್ಟೇ ಪರ್ಯಾಯ ಜಾಗತಿಕ ವ್ಯವಸ್ಥೆಯ ಬಗ್ಗೆ ಚಿಂತಿಸಬಹುದು ಎಂದು ಸಂಸದ ಹಾಗೂ ಮಾಜಿ ಕೇಂದ್ರ ಸಚಿವ ಶಶಿ ತರೂರ್ ಶುಕ್ರವಾರ ಪ್ರತಿಪಾದಿಸಿದರು.

'ಜಾಗತಿಕ ಹೂಡಿಕೆದಾರರ ಸಮಾವೇಶ’ (ಜಿಮ್-25)'ದಲ್ಲಿ 'ಪ್ರಕ್ಷುಬ್ಧತೆಯಲ್ಲಿ ಪ್ರವರ್ಧಮಾನ: ರಾಷ್ಟ್ರಗಳು ಹೇಗೆ ಸವಾಲು ಎದುರಿಸಬಹುದು' ಗೋಷ್ಠಿಯಲ್ಲಿ ವಿಚಾರ ಮಂಡಿಸಿದ ಅವರು, ವಿಶ್ವಸಂಸ್ಥೆ ಕೂಡಾ ನಾವು ಬದುಕುತ್ತಿರುವ ಜಗತ್ತಿನ ಕನ್ನಡಿಯಾಗಿದೆ ಎಂದು ಹೇಳಿದರು.

ಕೋವಿಡ್ ಸಂಕಷ್ಟ ಪರಿಸ್ಥಿತಿ ಜಾಗತಿಕ ಪೂರೈಕೆ ಸರಣಿಯ ಸ್ವರೂಪ ಬದಲಾಗಿದ್ದನ್ನು ಜಗತ್ತಿಗೆ ತೋರಿಸಿಕೊಟ್ಟಿತು. ಕೋವಿಡ್ ನಂತರದ ಜಾಗತಿಕ ನಾಯಕರು ಗಡಿಯಾಚಿನ ವಿಶ್ವದಲ್ಲಿ ಪ್ರಬಲರಾಗುವ ಬದಲಿಗೆ ತಮ್ಮ ಗಡಿರೇಖೆಯೊಳಗೆ ಅಂದರೆ ಆಂತರಿಕವಾಗಿ ಬಲಿಷ್ಠರಾಗಲು ಯತ್ನಿಸುತ್ತಿದ್ದಾರೆ ಎಂದು ತರೂರ್ ವಿವರಿಸಿದರು.

ಪ್ರಜಾತಂತ್ರ ವ್ಯವಸ್ಥೆ ಉತ್ತಮಗೊಳ್ಳುವ ನಿಟ್ಟಿನಲ್ಲಿ ಮತದಾರರು ಸುಶಿಕ್ಷಿತರಾಗುವುದು ಅತಿ ಮುಖ್ಯ. ಜನರಿಗೆ ಉತ್ತಮ ಶಿಕ್ಷಣ ನೀಡಿ, ಸಬಲೀಕರಣಗೊಳಿಸಿದಲ್ಲಿ, ದಕ್ಷ ಸರಕಾರ ರಚನೆ ಖಾತರಿಯಾಗಲಿದೆ. ನಮ್ಮ ಸಮಾಜದ ತಳವರ್ಗದ ಜನರಲ್ಲಿ ಖರೀದಿ ಸಾಮರ್ಥ್ಯ ಅತಿ ಕಡಿಮೆ ಇದೆ. ಪ್ರಸ್ತುತ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ 80 ಕೋಟಿ ಜನರಿಗೆ ಉಚಿತ ಆಹಾರಧಾನ್ಯ ಒದಗಿಸುತ್ತಿದೆ. ಅಂದರೆ, ಇದರರ್ಥ ಇಷ್ಟು ಭಾರಿ ಸಂಖ್ಯೆಯ ಜನರಲ್ಲಿ ಖರೀದಿ ಸಾಮರ್ಥ್ಯ ಕಡಿಮೆ ಇದೆ ಎಂದು ಅಭಿಪ್ರಾಯಪಟ್ಟರು.

ಜಗತ್ತಿನಲ್ಲೇ ಭಾರತ ಅತಿಹೆಚ್ಚು ನಿರುದ್ಯೋಗಿಗಳನ್ನು ಹೊಂದಿದ್ದು, ಯುವಜನರನ್ನು ಸಬಲೀಕರಣಗೊಳಿಸುವ ನಿಟ್ಟಿನಲ್ಲಿ ನಮ್ಮ ಶಿಕ್ಷಣ ವ್ಯವಸ್ಥೆ ಬದಲಾಗಬೇಕಿದೆ. ಏನನ್ನು ಚಿಂತಿಸಬೇಕು ಎಂಬುದರ ಬದಲಿಗೆ ಹೇಗೆ ಚಿಂತಿಸಬೇಕು ಎಂಬುದನ್ನು ವಿದ್ಯಾರ್ಥಿಗಳಲ್ಲಿ ಕಲಿಸಬೇಕಿದೆ. ಯುವಜನರನ್ನು ಕೌಶಲ್ಯಪೂರ್ಣರನ್ನಾಗಿಸಿ, ಉದ್ಯೋಗ ದೊರಕಿಸಬೇಕಿದೆ ಎಂದರು.

ಕೃತಕ ಬುದ್ಧಿಮತ್ತೆ ಸೇರಿದಂತೆ ತಂತ್ರಜ್ಞಾನದ ಬಳಕೆಯಿಂದ ಜಾಗತಿಕ ಉದ್ಯೋಗ ಮಾರುಕಟ್ಟೆಯಲ್ಲಿ ಇನ್ನು ಕೆಲವೇ ವರ್ಷಗಳಲ್ಲಿ ಭಾರಿ ಬದಲಾವಣೆಯಾಗಲಿದ್ದು, ವಿದ್ಯಾರ್ಥಿಗಳು ಮತ್ತು ಯುವಜನರನ್ನು ಭವಿಷ್ಯದ ಬೇಡಿಕೆಗಳಿಗೆ ಅನುಗುಣವಾಗಿ ಸಜ್ಜುಗೊಳಿಸುವ ಅಗತ್ಯವಿದೆ. ಪ್ರಸ್ತುತ ಜಾಗತಿಕ ಉದ್ಯೋಗ ವಲಯದಲ್ಲಿರುವ ಶೇಕಡ 30ರಷ್ಟು ಉದ್ಯೋಗಗಳು ಇನ್ನು ಐದು ವರ್ಷಗಳಲ್ಲಿ ಕಣ್ಮರೆಯಾಗಲಿವೆ ಎಂದು ಹೇಳಿದರು.

'ಇಂಕ್ ಟಾಕ್ಸ್' ಸಂಸ್ಥೆ ಸಿಇಒ ಲಕ್ಷ್ಮಿ ಪ್ರಟೂರಿ ಗೋಷ್ಠಿ ನಿರ್ವಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X