Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಬೆಂಗಳೂರು ವಿವಿ ಕುಲಸಚಿವರಾಗಿ ಬೆಳ್ತಂಗಡಿ...

ಬೆಂಗಳೂರು ವಿವಿ ಕುಲಸಚಿವರಾಗಿ ಬೆಳ್ತಂಗಡಿ ಮೂಲದ ಶೇಕ್ ಲತೀಫ್ ನೇಮಕ

ವಾರ್ತಾಭಾರತಿವಾರ್ತಾಭಾರತಿ20 July 2023 3:39 PM IST
share
ಬೆಂಗಳೂರು ವಿವಿ ಕುಲಸಚಿವರಾಗಿ ಬೆಳ್ತಂಗಡಿ ಮೂಲದ ಶೇಕ್ ಲತೀಫ್ ನೇಮಕ

ಮಂಗಳೂರು, ಜು.20: ಬೆಂಗಳೂರು ವಿಶ್ವವಿದ್ಯಾನಿಲಯದ ನೂತನ ಕುಲಸಚಿವರಾಗಿ (ಆಡಳಿತ) ಮೂಲತಃ ಬೆಳ್ತಂಗಡಿ ತಾಲೂಕಿನ ಉಜಿರೆಯ ನಿವಾಸಿ ಪ್ರಸಕ್ತ ಬೆಂಗಳೂರಿನಲ್ಲಿ ವಾಸ್ತವ್ಯವಿರುವ ಶೇಕ್ ಲತೀಫ್ ಅಧಿಕಾರ ಸ್ವೀಕರಿಸಿದ್ದಾರೆ.

ಕೆಎಎಸ್ ಅಧಿಕಾರಿಯಾಗಿರುವ ಶೇಕ್ ಲತೀಫ್ ಈ ಹಿಂದೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಹಣಕಾಸು ಸದಸ್ಯರಾಗಿದ್ದರು. ಪ್ರಾರಂಭದಲ್ಲಿ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ವಿಭಾಗದ ಸಹಾಯಕ ನಿಯಂತ್ರಣ ಅಧಿಕಾರಿಯಾಗಿದ್ದ ಶೇಕ್ ಲತೀಫ್ ಪದವಿ ಪೂರ್ವ ಶಿಕ್ಷಣ ಇಲಾಖಾ ಲೆಕ್ಕಾಧಿಕಾರಿಯಾಗಿ, ದ.ಕ. ಜಿಲ್ಲಾ ಪಂಚಾಯತ್ ಮುಖ್ಯ ಲೆಕ್ಕಾಧಿಕಾರಿಯಾಗಿ, ಕರ್ನಾಟಕ ರಾಜ್ಯ ಹಜ್ ಸಮಿತಿಯ ಕಾರ್ಯನಿರ್ವಹಣಾಧಿಕಾರಿಯಾಗಿ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮುಖ್ಯ ಹಣಕಾಸು ಅಧಿಕಾರಿಯಾಗಿ, ಬೆಂಗಳೂರು ಮಹಾನಗರ ಸಾರಿಗೆ ನಿಗಮದ ಆರ್ಥಿಕ ಸಲಹೆಗಾರರಾಗಿ, ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಪ್ರದಾನ ವ್ಯವಸ್ಥಾಪಕರಾಗಿ (ಆರ್ಥಿಕ) ವಿವಿಧ ಇಲಾಖೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದರು.

ದಿಲ್ಲಿಯ ಇನ್ ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿ ಆಫ್ ಇಂಡಿಯಾ ನಡೆಸುವ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಇವರು ಸದ್ಯ ಅದರ ಫೆಲೋ ಮೆಂಬರ್ (ಎಫ್.ಸಿ.ಎಸ್.) ಆಗಿದ್ದಾರೆ.

1995-96ರಲ್ಲಿ ಮಂಗಳೂರು ವಿ.ವಿ. ವ್ಯಾಪ್ತಿಯಲ್ಲಿ ಬಿ.ಕಾಂ ನಲ್ಲಿ ಎರಡನೇ ರ್ಯಾಂಕ್ ಪಡೆದಿರುವ ಶೇಕ್ ಲತೀಫ್ ಬಿ.ಕಾಂ. (ಕಾನೂನು ಮತ್ತು ಬ್ಯಾಂಕಿಂಗ್ ಅಭ್ಯಾಸ) ದಲ್ಲಿ ಅತ್ಯಧಿಕ ಅಂಕ ಪಡೆದು ಎ.ಬಿ.ಶೆಟ್ಟಿ ಸ್ಮಾರಕ ಚಿನ್ನದ ಪದಕ ಗಳಿಸಿದ್ದರು. 97-98ರಲ್ಲಿ ಎಂ.ಬಿ.ಎ. ಯಲ್ಲಿ ಮಂಗಳೂರು ವಿ.ವಿ. ವ್ಯಾಪ್ತಿಯಲ್ಲಿ ಪ್ರಥಮ ರ್ಯಾಂಕ್ ನೊಂದಿಗೆ ಚಿನ್ನದ ಪದಕದ ಗೌರವಕ್ಕೆ ಭಾಜನರಾಗಿದ್ದರು. ವೈಶ್ಯ ಬ್ಯಾಂಕ್ ಕೂಡಾ ಈ ಸಂದರ್ಭ ಚಿನ್ನದ ಪದಕ ನೀಡಿ ಗೌರವಿಸಿತ್ತು.

1995ರಲ್ಲಿ 800 ಮೀಟರ್ ಓಟದಲ್ಲಿ ಕೂಡಾ ಮಂಗಳೂರು ವಿ.ವಿ. ಗೆ ಪ್ರಥಮರಾಗಿ ಚಿನ್ನದ ಪದಕ ಪಡೆದಿದ್ದ ಶೇಕ್ ಲತೀಫ್ ರಾಷ್ಟ್ರಮಟ್ಟದ ಗುಡ್ಡಗಾಡು ಓಟದಲ್ಲಿ ಎರಡು ಬಾರಿ ಮಂಗಳೂರು ವಿ.ವಿ.ಯನ್ನು ಪ್ರತಿನಿಧಿಸಿದ್ದು, ಒಂದು ಬಾರಿ ವಿ.ವಿ. ತಂಡದ ನಾಯಕರಾಗಿದ್ದರು.

ಬೆಳ್ತಂಗಡಿ ತಾಲೂಕಿನ ಉಜಿರೆಯ ಓಡಲ ನಿವಾಸಿ ಶೇಕ್ ಫಕೀರ್ ಸಾಹೇಬ್ ಹಾಗೂ ರಶೀದಾಬಿ ದಂಪತಿಯ ಪುತ್ರರಾಗಿರುವ ಶೇಖ್ ಲತೀಫ್ ಉಜಿರೆಯ ದೊಂಪದಪಲ್ಕೆ ಓಡಲ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ ಪಡೆದವರು. ಎಸೆಸೆಲ್ಸಿ ತರಗತಿ ತನಕ ಕನ್ನಡ ಮಾಧ್ಯಮದಲ್ಲೇ ವಿದ್ಯಾಭ್ಯಾಸಗೈದ ಅವರು, ಪ್ರೌಢ, ಪದವಿ ಪೂರ್ವ ಮತ್ತು ಪದವಿ ಶಿಕ್ಷಣವನ್ನು ಉಜಿರೆಯ ಎಸ್.ಡಿ.ಎಂ. ಕಾಲೇಜಿನಲ್ಲಿ ಪಡೆದಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಎಂ.ಬಿ.ಎ. ಪದವಿಯನ್ನು ಪ್ರಥಮ ರ್ಯಾಂಕ್ ನೊಂದಿಗೆ ತೇರ್ಗಡೆಯಾಗಿದ್ದಾರೆ.

1998ನೇ ಸಾಲಿನ ಗಜೆಟೆಡ್ ಪ್ರೊಬೆಷನರಿ ಅಧಿಕಾರಿಯಾಗಿದ್ದು, ಹುದ್ದೆ ಬದಲಾವಣೆಯಿಂದ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಿಂದ ಕಂದಾಯ ಇಲಾಖೆಗೆ ತಹಶೀಲ್ದಾರ್ ಆಗಿ ಬದಲಾವಣೆ ಹೊಂದಿ ನಂತರ ಸಹಾಯಕ ಆಯುಕ್ತರಾಗಿ (ಕೆಎಎಸ್ ಕಿರಿಯ ಶ್ರೇಣಿ), ಬಳಿಕ ಹಿರಿಯ ಶ್ರೇಣಿ ಹಾಗೂ ಪ್ರಸ್ತುತ ಕೆಎಎಸ್ ಆಯ್ಕೆ ಶ್ರೇಣಿಗೆ ಪದೋನ್ನತಿ ಹೊಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X