Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಶಿಕಾರಿಪುರ ಹಾಗೂ ಸೊರಬ ನನ್ನ ಎರಡು...

ಶಿಕಾರಿಪುರ ಹಾಗೂ ಸೊರಬ ನನ್ನ ಎರಡು ಕಣ್ಣುಗಳಿದ್ದಂತೆ‌: ಸಚಿವ ಮಧುಬಂಗಾರಪ್ಪ

ಶಿಕಾರಿಪುರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಚಿವರಿಗೆ ಅಭಿನಂದನೆ

ವಾರ್ತಾಭಾರತಿವಾರ್ತಾಭಾರತಿ13 Sep 2023 4:02 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಶಿಕಾರಿಪುರ ಹಾಗೂ ಸೊರಬ ನನ್ನ ಎರಡು ಕಣ್ಣುಗಳಿದ್ದಂತೆ‌: ಸಚಿವ ಮಧುಬಂಗಾರಪ್ಪ

ಶಿಕಾರಿಪುರ (ಸೆ.13): ಬಿಜೆಪಿಯ ಭಾವನಾತ್ಮಕ ರಾಜಕೀಯಕ್ಕೆ ಜನರೇ ಬ್ರೇಕ್ ಹಾಕಬೇಕು ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ಕರೆ ನೀಡಿದರು.

ಶಿಕಾರಪುರದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆ ಹಾಗೂ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು,ಕಾಂಗ್ರೆಸ್ ಪಕ್ಷ ಚುನಾವಣಾ ಪೂರ್ವ ನೀಡಿದ ಗ್ಯಾರಂಟಿಗಳನ್ನು ಅನುಷ್ಠಾನ ಮಾಡುವ ಮೂಲಕ ಬದ್ಧತೆಯನ್ನು ಪ್ರದರ್ಶಿಸಿದೆ ಎಂದರು.

ರಾಜ್ಯದಲ್ಲಿ ಬಡವರ ಪರವಾದ ಸರ್ಕಾರ ಇದ್ದರೆ ಭಾವನಾತ್ಮಕವಾಗಿ ಜನರನ್ನು ಮರಳು ಮಾಡಲು ಸಾಧ್ಯವಿಲ್ಲ ಎಂದ ಅವರು, ಮುಂಬರುವ ಎಲ್ಲಾ ಚುನಾವಣೆಗಳಲ್ಲಿ ಜನರು ಕಾಂಗ್ರೆಸ್ ಬೆಂಬಲಿಸಲಿದ್ದಾರೆ ಎಂಬ ಭರವಸೆ ಇದೆ. ದೇವರಾಜ ಅರಸು, ಬಂಗಾರಪ್ಪ ರವರು ಭೂ ರೈತರಿಗೆ ಭೂಮಿ ಕೊಟ್ಟರು, ಉಚಿತ ವಿದ್ಯುತ್ ಕೊಟ್ಟರು, ರೈತರಿಗೆ ಹಕ್ಕು ಪತ್ರ ಕೊಟ್ಟರು, ಅವರ ಕೆಲಸಗಳಿಂದಾಗಿಯೇ ಇಂದು ಅವರು ಎಂದಿಗೂ ಜನರ ಮನಸ್ಸಿನಲ್ಲಿದ್ದಾರೆ.ಮುಂಬರುವ ದಿನಗಳಲ್ಲಿ ಜಿಲ್ಲೆಯಲ್ಲಿರುವ ಬಡವರಿಗೆ ಹಕ್ಕುಪತ್ರ ವಿತರಿಸಲಾಗುವುದು ಎಂದರು.

ಕಳೆದ ಚುನಾವಣೆಯಲ್ಲಿ ಶಿಕಾರಿಪುರ ಕಾಂಗ್ರೆಸ್ ಪಕ್ಷದ ಶಕ್ತಿ ತೋರಿಸಿದ್ದೀರಿ.ನನಗೆ ಶಿಕಾರಿಪುರ ಹಾಗೂ ಸೊರಬ ಬೇರೆ ಬೇರೆ ಅಲ್ಲ. ಎರಡು ಕಣ್ಣುಗಳಿದ್ದಂತೆ‌.ಇಲ್ಲಿ ಪಕ್ಷದ ಅಭ್ಯರ್ಥಿ ಸೋತಿರಬಹುದು. ಅದ್ರೇ, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ.ಜನರ ಸಮಸ್ಯೆಗಳನ್ನು ಬಗೆಹರಿಸುವ ಕೆಲಸ ಮಾಡಲಾಗುತ್ತದೆ ಎಂದರು.

ಶಿಕಾರಿಪುರ ಕ್ಷೇತ್ರದಲ್ಲಿ ಜಾರಿಗೆ ತಂದಿರುವ ನೀರಾವರಿ ಯೋಜನೆಗಳು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿಯೇ ಅರಂಭವಾಗಿದ್ದವು, ತದ ನಂತರ ಬಂದವರು, ಅನುದಾನ ನೀಡಿ ಜಾರಿಗೊಳಿಸಿದ್ದಾರೆ . ಇನ್ನೂ ಆಗಬೇಕಿರುವ ಕಾಮಗಾರಿಯನ್ನು ನಮ್ಮ ಸರ್ಕಾರ ಮಾಡುತ್ತದೆ ಎಂದರು.

ಶಿಕಾರಿಪುರ ಕಾಂಗ್ರೆಸ್ ಪಕ್ಷದಲ್ಲಿ ಇದ್ದ ಚಿಕ್ಕ ಪುಟ್ಟ ಭಿನ್ನಾಭಿಪ್ರಾಯಗಳು ದೂರವಾಗಿದ್ದು, ಈಗ ಎಲ್ಲಾ ಬಗೆಹರಿದಿದೆ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದ್ದು ಶಿಕಾರಿಪುರದಲ್ಲಿ ಕಾಂಗ್ರೆಸ್ ಮುಖಂಡರ ಮಾತುಗಳಿಗೆ ಮನ್ನಣೆ ಸಿಗಲಿದೆ. ಇಲ್ಲಿ ನಿಮ್ಮದೇ ಸರ್ಕಾರವಿದ್ದು, ನೀವೆ ನನಗೆ ಮಾಡಿದ ಅಭಿನಂದನೆ ನಿಮಗೆ ಸಲ್ಲಬೇಕು. ಮುಂದಿನ ಎಲ್ಲಾಚುನಾವಣೆಗಳಲ್ಲೂ ಜಯ ನಿಶ್ಚಿತ ಎಂದು ಹೇಳಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಚಂದ್ರಪ್ಪ ಮಾತನಾಡಿ, ಸಮ್ಮಿಶ್ರ ಸರ್ಕಾರವಿದ್ದ ಸಮಯದಲ್ಲಿ ಮಧು ಬಂಗಾರಪ್ಪ ಅವರ ಪಾದಯಾತ್ರೆ ಫಲದಿಂದ ಇಂದು ಶಿಕಾರಿಪುರದಲ್ಲಿ ಏತನೀರಾವರಿ ಪೂರ್ಣಗೊಂಡಿವೆ. ಶಿಕಾರಿಪುರದ ನಕಲಿ ಹುಲಿಗಳು ಸುಳ್ಳು ಹೇಳುತ್ತಾ ಕಾಲ ಕಳೆಯುತಿದ್ದಾರೆ ಎಂದು ಪರೋಕ್ಷವಾಗಿ ಬಿ ಎಸ್ ವೈ ಕುಟುಂಬಕ್ಕೆ ಕುಟುಕಿದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಂದರೇಶ್ ಹೆಚ್ ಎಸ್ ಮಾತನಾಡಿ,ಪಕ್ಷದ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಬೇಕು. ಬಿಜೆಪಿಗೆ ಪ್ರತಿಪಕ್ಷ ನಾಯಕರನ್ನು ಆಯ್ಕೆ ಮಾಡಲು ಸಾಧ್ಯವಾಗಿಲ್ಲ ಎಂದರು.

ಕಾಂಗ್ರೆಸ್ ಮುಖಂಡ ನಾಗರಾಜ್ ಗೌಡ, ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಪ್ರಮುಖರಾದ ಸಕಲೇಶ, ಬಲ್ಕೀಶ್ ಬಾನು, ರಮೇಶ್, ಆರ್ ಪ್ರಸನ್ನ ಕುಮಾರ್, ಆರ್ ಎಂ ಮಂಜುನಾಥ್ ಗೌಡ, ಎಸ್ ಕೆ ಮರಿಯಪ್ಪ, ನಗರದ ಮಹಾದೇಪ್ಪ, ಕಲಗೋಡು ರತ್ನಾಕರ್ ಇತರರು ಉಪಸ್ಥಿತರಿದ್ದರು.

ʼಗಂಡುಗಲಿ ಬಂಗಾರಪ್ಪರ ಪುತ್ರ ಮಧು ಬಂಗಾರಪ್ಪ ಮಂತ್ರಿ ಆಗಿದ್ದಾರೆ ಇನ್ನು ಯಾರಿಗೂ ಹೆದರುವ ಅಗತ್ಯ ಇಲ್ಲ. ಶಿಕಾರಿಪುರ ಕಾಂಗ್ರೆಸ್ ವಿಜೃಂಭಿಸುತ್ತದೆʼ

- ಗೋಣಿ ಮಾಲ್ತೇಶ್, ಕಾಂಗ್ರೆಸ್ ಪರಾಜಿತ ಅಭ್ಯರ್ಥಿ

ʼಕಾಂಗ್ರೆಸ್ ಸರ್ಕಾರ ಜನ ಸಾಮಾನ್ಯರು, ಬಡವರ ಬದುಕಿಗೆ ಭದ್ರತೆ ಹಾಗೂ ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ ಎರಡು ಸಾವಿರ ರೂ.ವನ್ನು ಹಣವನ್ನು ನೀಡುವ ಮೂಲಕ ಆರ್ಥಿಕ ಶಕ್ತಿ ನೀಡಿದೆ.ಇದರಿಂದ ಬಿಜೆಪಿಗೆ ಭಯ ಶುರುವಾಗಿದೆ. ಬಿಜೆಪಿ -ಜೆಡಿಎಸ್ ಮೈತ್ರಿ ಕುರುಡನ ಹೆಗಲ ಮೇಲೆ ಕುಂಟನ ಸವಾರಿ,ಯಾರು ಯಾರನ್ನು ಯಾವತ್ತು ಕೆಡವುತಾರೊ ಗೊತ್ತಿಲ್ಲʼ

-ಆಯನೂರು ಮಂಜುನಾಥ್, ಮಾಜಿ ಸಂಸದ





share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X