Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಷ್ಟ್ರೀಯ ಪುರಸ್ಕಾರಕ್ಕೆ ಅಯ್ಕೆಯಾದ ...

ರಾಷ್ಟ್ರೀಯ ಪುರಸ್ಕಾರಕ್ಕೆ ಅಯ್ಕೆಯಾದ ಶೀರ್ಷೇಂದು ಮುಖ್ಯೋಪಾಧ್ಯಾಯ

ವಾರ್ತಾಭಾರತಿವಾರ್ತಾಭಾರತಿ4 Dec 2023 10:18 PM IST
share
ರಾಷ್ಟ್ರೀಯ ಪುರಸ್ಕಾರಕ್ಕೆ ಅಯ್ಕೆಯಾದ  ಶೀರ್ಷೇಂದು ಮುಖ್ಯೋಪಾಧ್ಯಾಯ
Shirshandhu Headmaster selected for National Award

ಶಿವಮೊಗ್ಗ: ಕುಪ್ಪಳಿಯ ರಾಷ್ಟ್ರ ಕವಿ ಕುವೆಂಪು ಪ್ರತಿಷ್ಟಾನ(ರಿ) ದ ವತಿಯಿಂದ ಕೊಡಮಾಡುವ 2023 ನೇ ಸಾಲಿನ ಕುವೆಂಪು ರಾಷ್ಟ್ರೀಯ ಪುರಸ್ಕಾರಕ್ಕೆ ಬಂಗಾಳಿ ಭಾಷೆಯ ಸುಪ್ರಸಿದ್ಧ ಬರಹಗಾರರಾದ ಶೀರ್ಷೇಂದು ಮುಖ್ಯೋಪಾಧ್ಯಾಯ ಆಯ್ಕೆ ಆಗಿದ್ದಾರೆ.

ನ.17 ರಂದು ಬೆಂಗಳೂರಿನಲ್ಲಿ ಕುವೆಂಪು ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಬಿ.ಎಲ್. ಶಂಕರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕುವೆಂಪು ರಾಷ್ಟ್ರೀಯ ಪುರಸ್ಕಾರ ಆಯ್ಕೆ ಸಮಿತಿ ಸಭೆಯಲ್ಲಿ ಆಯ್ಕೆ ಮಾಡಲಾಗಿದೆ.

ಪ್ರತಿಷ್ಠಾನದ ಸಮಕಾರ್ಯದರ್ಶಿ ಕಡಿದಾಳ್ ಪ್ರಕಾಶ್ ಸಂಚಾಲಕರಾಗಿದ್ದ ಆಯ್ಕೆ ಸಮಿತಿಯಲ್ಲಿ, ನಿರ್ಮಲ್ ಕಾಂತಿ ಭಟ್ಟಾಚಾರ್ಯ, ಗೀತಾ ವಿಜಯಕುಮಾರ್ ಹಾಗೂ ಸಾಹಿತ್ಯ ಅಕಾಡೆಮಿಯ ನಿವೃತ್ತ ಕಾರ್ಯದರ್ಶಿಗಳಾದ ಅಗ್ರಹಾರ ಕೃಷ್ಣಮೂರ್ತಿಯವರು ತೀರ್ಪುಗಾರಾಗಿದ್ದರು. ರಾಷ್ಟ್ರಕವಿ ಕುವೆಂಪುರವರ ಜನ್ಮ ದಿನವಾದ ಡಿ.29 ರಂದು ಶೀರ್ಷೇಂದು ಮುಖ್ಯೋಪಧ್ಯಾಯ ಅವರಿಗೆ “ಕುವೆಂಪು ರಾಷ್ಟ್ರೀಯ ಪುರಸ್ಕಾರವನ್ನು ಪ್ರದಾನ ಮಾಡಲಾಗುತ್ತದೆ. ಪ್ರಶಸ್ತಿಯು ಐದು ಲಕ್ಷ ರೂಪಾಯಿ ಮತ್ತು ಬೆಳ್ಳಿ ಪದಕಗಳನ್ನು ಒಳಗೊಂಡಿದೆ.

ಶೀರ್ಷೇಂದು ಮುಖ್ಯೋಪಾಧ್ಯಾಯ ಕುರಿತು:

ಶೀರ್ಷಂಧು ಮುಖ್ಯೋಪಧ್ಯಾಯ ಅವರು ಬಂಗಾಳಿ ಸಾಹಿತ್ಯದ ಶ್ರೀಮಂತಿಕೆ ಹಾಗೂ ಸತ್ವವನ್ನು ತಮ್ಮ ಮಹತ್ವದ ಕೃತಿಗಳ ಮೂಲಕ ಹೆಚ್ಚಿಸಿದ, ವರ್ತಮಾನದ ಬಹು ಮಹತ್ವದ ಮತ್ತು ಜನಪ್ರಿಯ ಲೇಖಕರು.ತಮ್ಮ ಹೊಸತನದ ಬರವಣಿಗೆಗಳಿಂದ ಬೆಂಗಾಳಿ ಭಾಷಾ ಸಾಹಿತ್ಯವನ್ನೂ, ತನ್ಮೂಲಕ ಭಾರತೀಯ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ. ಕಥೆ, ಕಾದಂಬರಿ, ಪ್ರವಾಸಕಥನ, ಮಕ್ಕಳ ಪುಸ್ತಕಗಳು ಸೇರಿ ಸುಮಾರು 90 ಕೃತಿಗಳು ಇದುವರೆಗೆ ಪ್ರಕಟವಾಗಿವೆ. ಕೇಂದ್ರ ಸಾಹಿತ್ಯ ಅಕಾಡೆಮಿ ಬಹುಮಾನವೂ ಸೇರಿದಂತೆ ಹಲವಾರು ಪುರಸ್ಕಾರಗಳು ಶೀರ್ಷಂಧು ಅವರಿಗೆ ದೊರೆತಿವೆ.

ಪಾರ್ತಿಬೊ, ನಯನ್ ಶ್ಯಾಮ್, ಪರಪರ್ , ದುರ್ಬೀನ್, ಏಕಾದಶಿ ಓ ಭೂತ್ ಮೊದಲಾದ ಕೃತಿಗಳು ಅವರಿಗೆ ಅತ್ಯಂತ ಜನಪ್ರಿಯತೆಯನ್ನು ತಂದುಕೊಟ್ಟಿವೆ. ಭ್ರಮಣ್ ಸಮಗ್ರ ಅವರ ಪ್ರವಾಸ ಕಥನ, ಬೆಂಗಾಳಿಯಲ್ಲಿ ಅತ್ಯಂತ ಹೆಚ್ಚು ಮಾರಾಟವಾದ ಕೃತಿ.

ಇವರ ಕತೆಗಳ ಗಟ್ಟಿತನದಿಂದಾಗಿ, ಸಿನಿಮಾ ಕ್ಷೇತ್ರದ ಸಂಪರ್ಕವೂ ಅನಾಯಾಸವಾಗಿ ದೊರೆತಿರುತ್ತದೆ. 1992ರಲ್ಲಿ ರಿತುಪರ್ಣೋ ಅವರ ನಿರ್ದೇಶನದಲ್ಲಿ ತಯಾರಾಗಿ ಬಿಡುಗಡೆಯಾದ, ಶೀರ್ಷೇಂಧು ಅವರ ಹೈರೇರ್ ಅಂಗ್ತಿ ಕಥೆಯಾಧಾರಿತ, ಅದೇ ಹೆಸರಿನ ಸಿನಿಮಾದಿಂದ ಪ್ರಾರಂಭಿಸಿ, ಇದುವರೆಗೆ 17 ಸಿನಿಮಾಗಳು ಇವರ ಕಥೆ-ಕಾದಂಬರಿಯನ್ನು ಆಧರಿಸಿ ಬಂದಿವೆ. ಬಹುತೇಕ ಬಂಗಾಳಿಯ ಎಲ್ಲ ಪ್ರಮುಖ ಸಿನಿಮಾ ನಿರ್ದೇಶಕರೂ ಇವರ ಕಥೆ ಕಾದಂಬರಿಗಳನ್ನು ಆಧರಿಸಿ ಸಿನಿಮಾ ಮಾಡಿರುವುದು ವಿಶೇಷ.

ಜನಪ್ರಿಯ ಕತೆಗಾರರಾಗಿರುವ ಶೀರ್ಷೇಂಧು ಅವರನ್ನು ಸಹಜವಾಗಿ ಹಲವಾರು ಸಾಹಿತ್ಯ ಪುರಸ್ಕಾರಗಳೂ ಹುಡುಕಿಕೊಂಡು ಬಂದಿವೆ. ಮುಖ್ಯವಾಗಿ, ಮಕ್ಕಳ ಸಾಹಿತ್ಯಕ್ಕಾಗಿ ವಿದ್ಯಾಸಾಗರ ಪುರಸ್ಕಾರ (1985), ಎರಡು ಬಾರಿ ಆನಂದ ಪುರಸ್ಕಾರ (1973 ಮತ್ತು 1990), ಮನಮಿನ್ ಕಾದಂಬರಿಗಾಗಿ ಸಾಹಿತ್ಯ ಅಕಾಡೆಮಿ ಬಹುಮಾನ (19689), ಬಂಗಬಿಭೂಷಣ್ ಪ್ರಶಸ್ತಿ (2012), ಎ.ಬಿ.ಪಿ. ಆನಂದ ಸೆರ ಬಂಗಾಳಿ ಪ್ರಶಸ್ತಿ ಮೊದಲಾದವು ಸೇರಿವೆ. ಇದಲ್ಲದೆ, 2021ರಲ್ಲಿ ಸಾಹಿತ್ಯ ಅಕಾಡೆಮಿಯ ಫೆಲೋಶಿಪ್ ಕೂಡಾ ದೊರೆತಿರುತ್ತದೆ. ಅಶೋಕ್ ವಿಶ್ವನಾಥನ್ ಎಂಬುವವರು, ಸಾಹಿತ್ಯ ಅಕಾಡೆಮಿಗಾಗಿ ಶೀರ್ಷೇಂಧು ಮುಖ್ಯೋಪಧ್ಯಾಯ್ ಎಂಬ ಸಾಕ್ಷ್ಯಚಿತ್ರವನ್ನು ನಿರ್ಮಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X