Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಶಿರೂರು: ಗುಡ್ಡ ಕುಸಿತದ ಸ್ಥಳ ಪರಿಶೀಲನೆ...

ಶಿರೂರು: ಗುಡ್ಡ ಕುಸಿತದ ಸ್ಥಳ ಪರಿಶೀಲನೆ ನಡೆಸಿದ ಸಿಎಂ ಸಿದ್ದರಾಮಯ್ಯ

ಲಭ್ಯವಿರುವ ಎಲ್ಲಾ ಆಧುನಿಕ ತಂತ್ರಜ್ಞಾನ ಬಳಸಿ ಕಾರ್ಯಾಚರಣೆಗೆ ಸಿಎಂ ಸೂಚನೆ

ವಾರ್ತಾಭಾರತಿವಾರ್ತಾಭಾರತಿ21 July 2024 4:05 PM IST
share
ಶಿರೂರು: ಗುಡ್ಡ ಕುಸಿತದ ಸ್ಥಳ ಪರಿಶೀಲನೆ ನಡೆಸಿದ ಸಿಎಂ ಸಿದ್ದರಾಮಯ್ಯ

ಅಂಕೋಲ: ರಣ ಭೀಕರ ಮಳೆಯಲ್ಲಿ ಶಿರೂರು ಗುಡ್ಡ ಕುಸಿತದ ಸ್ಥಳಕ್ಕೆ ಬಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಾಚರಣೆಯ ಪ್ರಗತಿ ಮತ್ತು SDRF ಹಾಗೂ NDRF ಸಿಬ್ಬಂದಿಗೆ ಎದುರಾಗುತ್ತಿರುವ ಸವಾಲುಗಳನ್ನು ಪರಿಶೀಲನೆ ನಡೆಸಿದರು.

ಈ ವೇಳೆ ಲಭ್ಯವಿರುವ ಎಲ್ಲಾ ಆಧುನಿಕ ತಂತ್ರಜ್ಞಾನ ಬಳಸಲು-ಉನ್ನತ ಮೆಟಲ್ ಡಿಟೆಕ್ಟರ್ ಮತ್ತು ಜೆಸಿಬಿ ಬಳಸಿ ಕಾರ್ಯಾಚರಣೆ ನಡೆಸಲು ಸಿಎಂ ಸೂಚನೆ ನೀಡಿದರು.

ಜೀವದ ಹಂಗು ತೊರೆದು ಕಾರ್ಯಾಚರಣೆ ನಡೆಸುತ್ತಿರುವ ಸಿಬ್ಬಂದಿಯ ಕಾರ್ಯಕ್ಷಮತೆಗೆ ಸಿಎಂ ಶ್ಲಾಘನೆ

ಅತ್ಯಂತ ಅಪಾಯಕಾರಿ ಸನ್ನಿವೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ SDRF ಮತ್ತು NDRF ತಂಡಗಳ ಜೊತೆ ಚರ್ಚೆ ನಡೆಸಿದ ಮುಖ್ಯಮಂತ್ರಿಗಳು ಸಿಬ್ಬಂದಿಯ ಕಾರ್ಯಕ್ಷಮತೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಗುಡ್ಡ ಕುಸಿತದಿಂದ ಮುಚ್ಚಿ ಹೋಗಿರುವ ರಸ್ತೆಯ ಎಡಭಾಗದಲ್ಲಿ ಕುಸಿತದ ಗುಡ್ಡ-ಬಲ ಭಾಗದಲ್ಲಿ ಭೋರ್ಗರೆದು ಹರಿಯುತ್ತಿರುವ ಕಾಳಿ ನದಿ ಇದೆ. ಜೊತೆಗೆ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಲ್ಲಿ ಮಣ್ಣಿನಡಿ ಸಿಲುಕಿರುವ ಜೀವಗಳ ಪತ್ತೆ ಕಾರ್ಯ ಬಹಳ ಸವಾಲಿನದ್ದಾಗಿದೆ ಎಂದು ಮುಖ್ಯಮಂತ್ರಿಗಳು ಸಿಬ್ಬಂದಿಯ ಶ್ರಮಕ್ಕೆ ಮೆಚ್ಚುಗೆ ಸೂಚಿಸಿದರು.

ನಾಲ್ಕು ತಂಡಗಳು ಗುಡ್ಡ ಕುಸಿತದ ಕೆಳಗೆ ಸಿಲುಕಿರಬಹುದಾದವರ ಪತ್ತೆಗೆ ರಾಡಾರ್ ತಂತ್ರಜ್ಞಾನ ಬಳಸಿ ಕಾರ್ಯಾಚರಣೆ ನಡೆಸುತ್ತಿವೆ. ಇನ್ನು ನಾಲ್ಕು ತಂಡಗಳು ಮತ್ತೊಂದು ಬದಿಯ ನದಿಯೊಳಗೆ ಕಾರ್ಯಾಚರಣೆ ನಡೆಸುತ್ತಿವೆ. ಈ ಬಗ್ಗೆ ಹಲವು ದಿನಗಳಿಂದ ತಾಲೂಕಿನಲ್ಲೇ ಮೊಕ್ಕಾಂ ಹೂಡಿರುವ ಕಂದಾಯ ಸಚಿವ ಕೃಷ್ಣಬೈರೇಗೌಡರು ಮುಖ್ಯಮಂತ್ರಿಗಳಿಗೆ ವಿವರಿಸಿದರು.

ಕಾರ್ಯಾಚರಣೆ ನಡೆಯುತ್ತಿರುವ ಜಾಗ ಮತ್ತು ಮಣ್ಣು ತುಂಬಿರುವ ರಸ್ತೆಯೂ ಕುಸಿಯುವ ಸಾಧ್ಯತೆಗಳ ಬಗ್ಗೆ ಮುಖ್ಯಮಂತ್ರಿಗಳು ಅಧಿಕಾರಿಗಳಿಂದ ಮಾಹಿತಿ ಪಡೆದು ಈ ಬಗ್ಗೆ ಹೆಚ್ಚು ಜಾಗರೂಕರಾಗಿರುವಂತೆ ಎಚ್ಚರಿಸಿದರು.

ಗುಡ್ಡ ಕುಸಿತದ ಸ್ಥಳ ಒಂದು ರೀತಿ ದ್ವೀಪದಂತಾಗಿದೆ. ಸುತ್ತಲೂ ಕಾಳಿ ನದಿ ಭೋರ್ಗರೆದು ಹರಿಯುತ್ತಿದೆ. ನಡುವೆ ಅರ್ಧ ಕುಸಿದ ಗುಡ್ಡ ನಿಂತಿದೆ. ಹೀಗಾಗಿ ಕಾರ್ಯಾಚರಣೆ ವೇಳೆ ಎದುರಾಗಬಹುದಾದ ಅಪಾಯಗಳು ಮತ್ತು ಸವಾಲುಗಳ ಬಗ್ಗೆ ಉನ್ನತ ಮಟ್ಟದ ತಜ್ಞರಿಂದ ಮಾಹಿತಿ ಪಡೆದು ತಂತ್ರಜ್ಞಾನದ ನೆರವು ಪಡೆಯುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಕಂದಾಯ ಸಚಿವ ಕೃಷ್ಣಬೈರೇಗೌಡ, ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಶಾಸಕ ಸತೀಶ್ ಸೈಲ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಎಲ್.ಕೆ. ಅತೀಕ್, ಶಾಲಿನಿ ರಜನೀಶ್ ಸೇರಿ ಕಂದಾಯ ಇಲಾಖೆಯ ಹಿರಿಯ ಅಧಿಕಾರಿ ಮತ್ತು ಸಿಬ್ಬಂದಿ ಸ್ಥಳದಲ್ಲಿದ್ದರು.‌

ಪತ್ರಕರ್ತರಿಗೆ ರೇನ್ ಕೋಟ್ ಕೊಟ್ಟಿದ್ದೀರಾ?

ಒಂದೇ ಸಮನೆ ಸುರಿಯುತ್ತಿದ್ದ ಭೀಕರ ಮಳೆ ನಡುವೆ ಕಾರ್ಯ ನಿರ್ವಹಿಸುತ್ತಿದ್ದ ಪತ್ರಕರ್ತರು ಮತ್ತು ಕ್ಯಾಮರಾಮನ್ ಗಳನ್ನು ಗಮನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, "ಪತ್ರಕರ್ತರಿಗೆಲ್ಲಾ ರೇನ್ ಕೋಟ್ ಮತ್ತು ರಬ್ಬರ್ ಶೂ ಕೊಟ್ಟಿದ್ದೀರಾ" ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.

ಮುಖ್ಯಮಂತ್ರಿಗಳಿಂದ ಈ ಪ್ರಶ್ನೆ ನಿರೀಕ್ಷಿಸಿರದ ಅಧಿಕಾರಿಗಳು ತಬ್ಬಿಬ್ಬಾದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X