Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ದೇಶವನ್ನು ಜನರ ಗಣರಾಜ್ಯವಾಗಿ...

ದೇಶವನ್ನು ಜನರ ಗಣರಾಜ್ಯವಾಗಿ ಉಳಿಸಿಕೊಳ್ಳಲು ಎಸ್‍ಐಆರ್ ಅನ್ನು ವಿರೋಧಿಸಬೇಕು : ಶಿವಸುಂದರ್

ವಾರ್ತಾಭಾರತಿವಾರ್ತಾಭಾರತಿ17 Nov 2025 9:29 PM IST
share
ದೇಶವನ್ನು ಜನರ ಗಣರಾಜ್ಯವಾಗಿ ಉಳಿಸಿಕೊಳ್ಳಲು ಎಸ್‍ಐಆರ್ ಅನ್ನು ವಿರೋಧಿಸಬೇಕು : ಶಿವಸುಂದರ್
‘ಎದ್ದೇಳು ಕರ್ನಾಟಕ’ ವತಿಯಿಂದ ಎಸ್‍ಐಆರ್ ಪ್ರಕ್ರಿಯೆಯನ್ನು ವಿರೋಧಿಸಿ-ಮಂಥನಾ ಸಮಾವೇಶ

ಬೆಂಗಳೂರು : ದೇಶವನ್ನು ಜನರ ಗಣರಾಜ್ಯವಾಗಿ ಉಳಿಸಿಕೊಳ್ಳಬೇಕು ಎಂದು ಬಯಸುವ ಪ್ರತಿಯೊಬ್ಬರೂ ಮತದಾರರ ಪಟ್ಟಿಯ ‘ವಿಶೇಷ ಸಮಗ್ರ ಪರಿಷ್ಕರಣೆ' (ಎಸ್‍ಐಆರ್)ಅನ್ನು ವಿರೋಧ ಮಾಡಬೇಕು ಎಂದು ಅಂಕಣಕಾರ ಶಿವಸುಂದರ್ ಕರೆ ನೀಡಿದ್ದಾರೆ.

ಸೋಮವಾರ ಇಲ್ಲಿನ ಗಾಂಧಿಭವನದಲ್ಲಿ ‘ಎದ್ದೇಳು ಕರ್ನಾಟಕ’ ವತಿಯಿಂದ ಆಯೋಜಿಸಿದ್ದ ‘ಚುನಾವಣಾ ಆಯೋಗ ದೇಶವ್ಯಾಪಿ ಮಾಡಲು ಹೊರಟಿರುವ ಎಸ್‍ಐಆರ್ ಪ್ರಕ್ರಿಯೆಯನ್ನು ವಿರೋಧಿಸಿ-ಮಂಥನಾ ಸಮಾವೇಶ’ದಲ್ಲಿ ಅವರು ಮಾತನಾಡಿದರು.

ಎಸ್‍ಐಆರ್ ಕೇವಲ ವಿರೋಧ ಪಕ್ಷಗಳ ಮೇಲಿನ ದಾಳಿಯಲ್ಲ. ದೇಶದ ಜನರ ಮೇಲಿನ ದಾಳಿಯಾಗಿದೆ. ಹೀಗಾಗಿ ವಿರೋಧ ಪಕ್ಷಗಳು ಎಸ್‍ಐಆರ್‌ ಅನ್ನು ವಿರೋಧ ಮಾಡಲಿ, ಬಿಡಲಿ, ನಾವು ವಿರೋಧ ಮಾಡಬೇಕು. ಈ ಮೂಲಕ ಪ್ರಜಾಪ್ರಭುತ್ವವನ್ನು ಉಳಿಸಬೇಕು. ಎಸ್‍ಐಆರ್ ವಿರೋಧಿ ಹೋರಾಟವು ಫ್ಯಾಸಿಸ್ಟ್ ವಿರೋಧಿ ಹೋರಾಟದ ಭಾಗವಾಗಬೇಕು ಎಂದು ಅವರು ಹೇಳಿದರು.

‘ವೋಟ್ ಚೋರಿ’ ವಿರುದ್ಧ ಕಾಂಗ್ರೆಸ್ ಸೇರಿ ಇತರೆ ಪಕ್ಷಗಳು ದೊಡ್ಡ ಚಳುವಳಿಯನ್ನು ಕಟ್ಟಿವೆ. ಚುನಾವಣಾ ಆಯೋಗವು ಬಿಜೆಪಿಯ ಶಾಖಾ ಕಚೇರಿಯಾಗಿದೆ ಎಂದು ಆರೋಪಿಸಿವೆ. ಆದರೆ ಬಿಹಾರ ಚುನಾವಣೆಯಲ್ಲಿ ಸೋತಿವೆ. ಚುನಾವಣೆಗೆ ಮುನ್ನ ಮತಗಳ್ಳತನವನ್ನು ಬಯಲಿಗೆ ತಂದಿವೆ. ಚುನಾವಣೆಯ ನಂತರ ಮತಗಳ್ಳತನ ಆರೋಪ ಮಾಡಿದ್ದರೆ, ಸೋತ ಕಾರಣ ಸುಳ್ಳು ಹೇಳುತ್ತಿದ್ದಾರೆ ಎಂದು ಅಪಪ್ರಚಾರ ಮಾಡುತ್ತಿದ್ದರು ಎಂದು ಶಿವಸುಂದರ್ ಹೇಳಿದರು.

ಎಸ್‍ಐಆರ್ ಇಲ್ಲದಿದ್ದಾಗಲೂ, ದ್ವೇಷ ರಾಜಕಾರಣವನ್ನು ಭಿತ್ತಿ, ಹಿಂದುತ್ವ ರಾಜಕಾರಣ ಕಟ್ಟುತ್ತಿದ್ದರು. ಮತಗಳ್ಳತನದ ಜೊತೆಗೆ ಮತೀಯ ಕಳ್ಳತನ ನಡೆಯುತ್ತಿದೆ. ಇದಕ್ಕೆ ಪ್ರತಿಯಾಗಿ ಚಳುವಳಿಗಳನ್ನು ಕಟ್ಟಬೇಕು. ದೇಶದ ಜನರ ಎದುರಿಗೆ ಅಸಾಧಾರಣವಾದ ಸಂದರ್ಭ ಬಂದಿದೆ. ಹೀಗಾಗಿ ಅಸಾಧಾರಣವಾದ ಪರಿಹಾರಗಳನ್ನು ನಾವು ಹುಡುಕಲೇಬೇಕು ಎಂದು ಅವರು ತಿಳಿಸಿದರು.

1950ರಲ್ಲಿ ರೆಪ್ರೆಸೆಂಟೇಶನ್ ಆಫ್ ಪೀಪಲ್ಸ್ ಆಕ್ಟ್ ಮತ್ತು 1960ರ ಮತದಾರರ ನೋಂದಣಿ ನಿಯಮಗಳಲ್ಲಿಯೂ ಎಸ್‍ಐಆರ್ ಇಲ್ಲ. ಈ ಕಾಯ್ದೆಗಳ ಅನ್ವಯ ಅರ್ಹರನ್ನು ಹುಡುಕಿ ಪಟ್ಟಿಗೆ ಸೇರಿಸುವುದು ಚುನಾವಣಾ ಆಯೋಗದ ಕೆಲಸವಾಗಿದ್ದು, ನಾಗರಿಕತ್ವ ಪರಿಶೀಲನೆ ಆಯೋಗದ ಕಾರ್ಯವಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ದಿಢೀರನೇ 2025ರಲ್ಲಿ ಬಿಹಾರದಲ್ಲಿ ಚುನಾವಣಾ ಆಯೋಗವು ಎಸ್‍ಐಆರ್ ಮಾಡುವುದಾಗಿ ಘೋಷಿಸಿತು. ಈಗ 12 ರಾಜ್ಯಗಳಲ್ಲಿ ಈ ಪ್ರಕ್ರಿಯೆ ಶುರುವಾಗಿದೆ. ಜನಗಣತಿಗೆ ಮುಂಚೆಯೇ ಬಹುಭಾಗ ಎಲ್ಲ ರಾಜ್ಯಗಳಲ್ಲೂ ಎಸ್‍ಐಆರ್ ಆಗುತ್ತದೆ. ಈಗಿನ ಎಸ್‍ಐಆರ್ ಪ್ರಕ್ರಿಯೆಯಲ್ಲಿರುವ ಹೊಸ ನಿಯಮಗಳು ಈ ಹಿಂದೆ ಎಲ್ಲಿಯೂ ಇಲ್ಲ ಎನ್ನುವುದನ್ನು ಗಮನಿಸಬೇಕು. ನಾವು ಮತದಾರರು ಎಂದು ಆಯೋಗಕ್ಕೆ ಅರ್ಜಿ ಹಾಕಬೇಕಾದ ನಿಯಮ ಮೊದಲು ಇರಲಿಲ್ಲ. ಆದರೆ ಎಸ್‍ಐಆರ್ ಪ್ರಕ್ರಿಯೆಯಲ್ಲಿದ್ದು, ಸಂವಿಧಾನ ಬಾಹಿರವಾಗಿದೆ ಎಂದು ಅವರು ಹೇಳಿದರು.

ಚುನಾವಣಾ ಆಯೋಗದ ಆಯುಕ್ತರನ್ನು ಪ್ರಧಾನಮಂತ್ರಿ, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರು ಹಾಗೂ ವಿರೋಧ ಪಕ್ಷದ ನಾಯಕರು ಸೇರಿ ಆಯ್ಕೆ ಮಾಡಬೇಕು. ಹೀಗೆ ಮಾಡಿದಾಗ ಮಾತ್ರ ಸ್ವತಂತ್ರವಾದ ಚುನಾವಣಾ ಆಯುಕ್ತ ನೇಮಕವಾಗಬಹುದು. ಇದು ನಿಯಮ. ಆದರೆ, ತಮಗಿರುವ ಸಂಖ್ಯಾಬಲ ಬಳಸಿಕೊಂಡು, ಈ ಆದೇಶಕ್ಕೆ ತಿದ್ದುಪಡಿ ತಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರನ್ನು ಸಮಿತಿಯಿಂದ ಹೊರಹಾಕಿ ಪ್ರಧಾನ ಮಂತ್ರಿಗಳೇ ನೇಮಕ ಮಾಡಿಕೊಂಡ ಇನ್ನೊಬ್ಬ ಮಂತ್ರಿ ಹಾಗೂ ವಿರೋಧಪಕ್ಷದ ನಾಯಕನನ್ನು ಸೇರಿಸಿಕೊಂಡು ಆಯುಕ್ತರನ್ನು ಆಯ್ಕೆ ಮಾಡಲಾಗುತ್ತದೆ ಎಂದು ಅವರು ತಿಳಿಸಿದರು.

ಒಂದು ಚುನಾವಣಾ ಪ್ರಕ್ರಿಯೆಯನ್ನೇ ಭ್ರಷ್ಟಗೊಳಿಸಿ ತಮಗೆ ಬೇಕಾದ ರೀತಿ ತಿದ್ದುಪಡಿ ಮಾಡಿಕೊಳ್ಳುತ್ತಿರುವಾಗ ವಿರೋಧಪಕ್ಷಗಳಾದರೂ ಅದನ್ನು ಸಮರ್ಥವಾಗಿ ಎದುರಿಸಬೇಕಾಗಿತ್ತು. ಅವರ ಬಂಡವಾಳವನ್ನು ಬಯಲು ಮಾಡಬೇಕಿತ್ತು. ಆದರೆ ವಿರೋಧಪಕ್ಷಗಳಿಗೆ ಆ ಶಕ್ತಿ ಇಲ್ಲ ಎಂದು ಶಿವಸುಂದರ್ ಟೀಕಿಸಿದರು.

ಕಾರ್ಯಕ್ರಮದಲ್ಲಿ ರಾಜಕೀಯ ವಿಶ್ಲೇಷಕ ಪರಕಾಲ ಪ್ರಭಾಕರ್, ಓಬಾಮ ಆಡಳಿತದ ಸಲಹೆಗಾರ ಹಾಗೂ ತಾಂತ್ರಿಕ ಸುರಕ್ಷಣಾ ತಜ್ಞ ಮಾಧವ ದೇಶಪಾಂಡೆ, ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರೈಟ್ಸ್‌ ನ ಮುಖ್ಯಸ್ಥ ಹರೀಶ್ ನರಸಪ್ಪ, ಎದ್ದೇಳು ಕರ್ನಾಟಕದ ಮುಖ್ಯಸ್ಥೆ ತಾರಾರಾವ್, ನಮ್ಮ ಓಟು, ನಮ್ಮ ಹಕ್ಕು ಅಭಿಯಾನದ ಮಾನವಿ, ಸಾಮಾಜಿಕ ಹೋರಾಟಗಾರ ನೂರ್ ಶ್ರೀಧರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X