Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನನ್ನದು ಆಡುಭಾಷೆ, ‘ಗೌರವ’ ಎಂದಿದ್ದು ಲಂಚ...

ನನ್ನದು ಆಡುಭಾಷೆ, ‘ಗೌರವ’ ಎಂದಿದ್ದು ಲಂಚ ಅಲ್ಲ: ಶಿವಲಿಂಗೇಗೌಡ ಸ್ಪಷ್ಟನೆ

ವಾರ್ತಾಭಾರತಿವಾರ್ತಾಭಾರತಿ23 Sept 2026 6:36 PM IST
share
ನನ್ನದು ಆಡುಭಾಷೆ, ‘ಗೌರವ’ ಎಂದಿದ್ದು ಲಂಚ ಅಲ್ಲ: ಶಿವಲಿಂಗೇಗೌಡ ಸ್ಪಷ್ಟನೆ

ಬೆಂಗಳೂರು : ನನ್ನದು ಗ್ರಾಮೀಣ ಭಾಷೆ. ಆಡುಭಾಷೆಯಲ್ಲಿ ಮಾತನಾಡುವ ಸಂದರ್ಭ ಪದ ಬಳಕೆಯ ವ್ಯತ್ಯಾಸವಾಗಿರಬಹುದು. ಗೌರವ ಕೊಡಿ ಎಂದಿದ್ದು ಲಂಚ ಕೊಡಿ ಎಂಬರ್ಥದಲ್ಲಿ ಹೇಳಿಲ್ಲ ಎಂದು ಅಬಕಾರಿ ಸಚಿವ ಕೆ.ಎಂ.ಶಿವಲಿಂಗೇಗೌಡ ಸ್ಪಷ್ಟನೆ ನೀಡಿದ್ದಾರೆ.

ಬುಧವಾರ ವಿಕಾಸಸೌಧದ ಸಭಾಂಗಣದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಒಂದು ಪದ ವ್ಯತ್ಯಾಸವಾಗಿದ್ದನ್ನೆ ದೊಡ್ಡ ಸಮಸ್ಯೆಯನ್ನಾಗಿ ಬಿಂಬಿಸಬಾರದು. ನಾನು ಪದ ವಿವಾದದ ಕುರಿತು ಸಮರ್ಥನೆ ಮಾಡಿಕೊಳ್ಳುತ್ತಿಲ್ಲ, ಉಚ್ಛಾರಣೆಯಲ್ಲಿ ತಪ್ಪಾಗಿದ್ದನ್ನು ಬೆಳೆಸಿಕೊಂಡು ಹೋಗಬಾರದು. ನನ್ನ ವ್ಯಾಖ್ಯಾನದಲ್ಲಿ ಸಹಾಯ ಮಾಡಿದವರಿಗೆ ಧನ್ಯವಾದ ಹೇಳುವುದು ನಮ್ಮ ಧರ್ಮ ಎಂಬುದಾಗಿತ್ತು. ಇದರಿಂದ ಫಲಾನುಭವಿ ಹಾಗೂ ಅಧಿಕಾರಿಗಳ ನಡುವಣ ಸಂಘರ್ಷ ಇತ್ಯರ್ಥಗೊಳ್ಳುತ್ತದೆ ಎಂಬ ಆಶಾಭಾವನೆಯಲ್ಲಿ ನಾನು ಹಾಗೆ ಹೇಳಿದ್ದಾಗಿತ್ತು ಎಂದರು.

ಪ್ರಜಾಸೇವಾ ಕಾರ್ಯಕ್ರಮದ ನಡುವೆ ಒಂದು ಗುಂಪು ಒಟ್ಟಾಗಿ ಬಂದು ಸರ್ವೆ ಇಲಾಖೆಯಲ್ಲಿ 2 ಲಕ್ಷ ರೂಪಾಯಿವರೆಗೆ ಲಂಚ ತೆಗೆದುಕೊಳ್ಳುತ್ತಿರುವುದಾಗಿ ಆರೋಪಿಸಿದರು. ಈ ಸಂದರ್ಭ ಜಿಲ್ಲಾಮಂತ್ರಿ ನೇತೃತ್ವದಲ್ಲಿ ಪ್ರಜಾಸೇವಾ ಇಲಾಖೆಯಡಿ ಅದಾಲತ್ ನಡೆಸಿ ಅಧಿಕಾರಿಗಳನ್ನು ಹಾಗೂ ಫಲಾನುಭವಿಗಳನ್ನು ವೈಯಕ್ತಿಕವಾಗಿ ಕರೆಸಿ ಚರ್ಚಿಸಿ ಸಮಸ್ಯೆ ಬಗೆಹರಿಸಿ ಎಂಬ ಸಲಹೆಯನ್ನು ನೀಡಿದೆ. 2 ಲಕ್ಷ ಲಂಚ ಕೊಟ್ಟಿದ್ದೇನೆ ಎಂಬ ವ್ಯಕ್ತಿಯ ಸಮಸ್ಯೆಯನ್ನು ಸರಿಯಾಗಿ ಕೇಳುವಂತೆ ಜಿಲ್ಲಾಧಿಕಾರಿಗೆ ಸ್ಥಳದಲ್ಲೇ ಹೇಳಿದೆ. ಅಧಿಕಾರಿಗಳು ಹಾಗೂ ಫಲಾನುಭವಿಗಳ ನಡುವೆ ಸಂಘರ್ಷ ಬೇಡ. ಕೆಲಸ ಮಾಡಿಕೊಟ್ಟ ಮೇಲೆ ಅಧಿಕಾರಿಗಳಿಗೆ ಗೌರವ ಸಲ್ಲಿಸಿ, ಅದು ನಮ್ಮ ಧರ್ಮ. ನಮ್ಮ ಕೆಲಸವನ್ನು ಮಾಡಿಕೊಟ್ಟವರಿಗೆ ಗೌರವ ಕೊಡುವುದು ಸನ್ನಡತೆ ಎಂದಿದ್ದೆ. ಆಗ ಗೌರವ ನೀಡಿ ಎಂದರೆ ಲಂಚ ಕೊಡಬೇಕೆ ಎಂದು ಕೆಲವರು ಗಲಾಟೆ ಮಾಡಿದರು. ಆಗ ಯಾರೂ ಕೂಡ ಒಂದು ರೂಪಾಯಿ ಲಂಚ ಕೊಡಬಾರದು. ಈಗಾಗಲೇ ಲಂಚದ ರೂಪದಲ್ಲಿ ಕೊಟ್ಟಿರುವ ಹಣವನ್ನು ಅಧಿಕಾರಿಗಳಿಂದ ವಾಪಸ್ ಕೊಡಿಸುವ ನಿಟ್ಟಿನಲ್ಲಿ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದಿದ್ದೇನೆ ಎಂದು ಸ್ಪಷ್ಟಪಡಿಸಿದರು.

ಸಕಲೇಶಪುರದಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 8 ಗಂಟೆ ವರೆಗೆ ಬಿಡುವಿಲ್ಲದೆ ನಿರಂತರವಾಗಿ ಸ್ಥಳೀಯರ ಸಮಸ್ಯೆಗಳನ್ನು ಆಲಿಸಿದ್ದೇನೆ. ಒಂದು ಬದಿಯಲ್ಲಿ ಸಮಸ್ಯೆ ತಂದವರನ್ನು, ಮತ್ತೊಂದು ಬದಿಯಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ನಿಲ್ಲಿಸಿಕೊಂಡು ಇಬ್ಬರ ವಾದಗಳನ್ನು ಆಲಿಸಿದ್ದೇನೆ. ಸರಕಾರದ ಯೋಜನೆ ಫಲಾನುಭವಿಗೆ ಸರಿಯಾಗಿ ತಲುಪುವ ನಿಟ್ಟಿನಲ್ಲಿ ಸಲಹೆಗಳನ್ನು ನೀಡಿದ್ದೇನೆ. ಎಷ್ಟು ದಿನಗಳಲ್ಲಿ ಸಮಸ್ಯೆ ಬಗೆಹರಿಸಿಕೊಡುತ್ತೀರಿ ಎಂಬುದನ್ನು ಅಧಿಕಾರಿಗಳನ್ನು ಸ್ಥಳದಲ್ಲಿಯೇ ಕೇಳಿ, ನಿಗದಿತ ಸಮಯವನ್ನು ದಾಖಲಿಸಿಕೊಂಡಿದ್ದೇನೆ. ನಿಗದಿತ ಸಮಯದಲ್ಲಿ ಇತ್ಯರ್ಥ ಪಡಿಸಿಕೊಡದಿದ್ದರೆ ಕ್ರಮ ಕೈಗೊಳ್ಳುವುದಾಗಿಯೂ ಎಚ್ಚರಿಕೆ ನೀಡಿದ್ದೇನೆ. ಹೀಗೆ ಸುಮಾರು 400ಕ್ಕೂ ಹೆಚ್ಚು ಮಂದಿಯ ಕುಂದುಕೊರತೆಗಳನ್ನು ಖುದ್ದಾಗಿ ಆಲಿಸಿ, ಬಗೆಹರಿಸುವ ನಿಟ್ಟಿನಲ್ಲಿ ಪ್ರಯತ್ನಿಸಿದ್ದೇನೆ. ವಿಧಾನಸೌಧದಲ್ಲಿ ನಡೆಯುವ ಪ್ರಶ್ನೋತ್ತರ ಮಾದರಿಯಲ್ಲಿ ನಡೆಸಿದ ಆಂದೋಲನದ ಬಗ್ಗೆ ಸ್ಥಳೀಯರಿಂದ ಭಾರಿ ಮುಚ್ಚುಗೆ ವ್ಯಕ್ತವಾಗಿದೆ. ಆದರೆ ವಿರೋಧ ಪಕ್ಷಗಳ ಕೆಲವರು ನನ್ನ ಒಂದು ಪದ ಬಳಕೆಯನ್ನೇ ಪ್ರಧಾನವಾಗಿಸಿ ನನ್ನ ಶ್ರಮವನ್ನೇ ಹಾಳುಗೆಡವಲು ಪ್ರಯತ್ನಿಸುತ್ತಿದ್ದಾರೆ ಎಂದು ಅವರು ಹೇಳಿದರು.

ಸ್ವಕ್ಷೇತ್ರ ಅರಸೀಕೆರೆಯಲ್ಲಿ ಸ್ಥಳೀಯರ ಕುಂದುಕೊರತೆಗಳನ್ನು ಆಲಿಸಿ, ಬಗೆಹರಿಸುವ ಕೆಲಸವನ್ನು ಮೊದಲಿನಿಂದಲೂ ಮಾಡುತ್ತ ಬಂದಿದ್ದೇನೆ. ಅದೇ ಮಾದರಿಯಲ್ಲಿ ಹಾಸನದ ಉಸ್ತುವಾರಿ ಸಚಿವರಾದ ಮೇಲೆ ಮೊದಲ ಬಾರಿಗೆ ಸಕಲೇಶಪುರದಲ್ಲೂ ನಡೆಸಿದೆ. ಕಾರ್ಯಕ್ರಮ ಯಶಸ್ವಿಯಾದ ತೃಪ್ತಿ ನನಗಿದೆ. ಆದರೆ ಒಂದು ಪದ ಬಳಕೆಯನ್ನು ವಿವಾದಕ್ಕೆ ಬಳಸಲಾಯಿತಲ್ಲ ಎಂಬ ವ್ಯಥೆಯೂ ಇದೆ. ಹೃದಯದ ಭಾರವನ್ನು ಇಳಿಸಿಕೊಳ್ಳಲು ಈ ಮಾತುಗಳನ್ನು ಹೇಳುತ್ತಿದ್ದೇನೆ. ನನ್ನ ರಾಜಕೀಯ ಜೀವನದಲ್ಲಿ ಒಂದೇ ಒಂದು ಕಪ್ಪುಚುಕ್ಕಿಯಿಲ್ಲ, ಅತ್ಯಂತ ಪ್ರಾಮಾಣಿಕವಾಗಿ ನಡೆದುಕೊಂಡು ಬಂದಿದ್ದೇನೆ ಎಂದು ಅವರು ತಿಳಿಸಿದರು.

ಹಾಸನದಲ್ಲಿ ಡ್ಯಾಶ್ ಬೋರ್ಡ್ ಸ್ಥಾಪನೆ: ರಾಜ್ಯದಲ್ಲೇ ಮೊದಲ ಬಾರಿಗೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಹಾಸನದಲ್ಲಿ ಕುಂದುಕೊರತೆಗಳ ಪರಿಹಾರ ಪ್ರಕ್ರಿಯೆಗೆ ಸಂಬಂಧಿಸಿದ ಡ್ಯಾಶ್ ಬೋರ್ಡ್ ಅನ್ನು ಸ್ಥಾಪಿಸಲಾಗುವುದು. ಅದರಲ್ಲಿ ದಾಖಲಾದ ಜನರ ಸಮಸ್ಯೆಗಳು, ಪರಿಹರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ತೆಗೆದುಕೊಂಡ ಸಮಯಾವಕಾಶ ಮತ್ತು ಅದು ಯಾವ ಹಂತದಲ್ಲಿದೆ ಎಂಬ ವಿವರಗಳು ಅದರಲ್ಲಿ ಲಭ್ಯವಿರಲಿದೆ ಎಂದು ಸಚಿವ ಕೆ.ಎಂ.ಶಿವಲಿಂಗೇಗೌಡ ಮಾಹಿತಿ ನೀಡಿದರು.

Tags

Shivalinge Gowda
share
ವಾರ್ತಾಭಾರತಿ
ವಾರ್ತಾಭಾರತಿ
Next Story
X