Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ‘ನೀನು ನನ್ನ ಋಣದಲ್ಲಿದ್ದೀಯಾ, ನಾನು...

‘ನೀನು ನನ್ನ ಋಣದಲ್ಲಿದ್ದೀಯಾ, ನಾನು ಅಲ್ಲ’ : ಜನಾರ್ದನ ರೆಡ್ಡಿ ವಿರುದ್ಧ ಶಿವರಾಜ್‌ ತಂಗಡಗಿ ವಾಗ್ದಾಳಿ

ʼಸಚಿವನಾಗಿ ಮೆರೆಸಿದ ಯಡಿಯೂರಪ್ಪ ಬೆನ್ನಿಗೆ ಚೂರಿ ಹಾಕಿದವನು ನೀನು, ಬಿಜೆಪಿಯನ್ನೇ ಮುಗಿಸಲು ಹೊರಟವನು’

ವಾರ್ತಾಭಾರತಿವಾರ್ತಾಭಾರತಿ9 Sept 2026 12:19 PM IST
share
‘ನೀನು ನನ್ನ ಋಣದಲ್ಲಿದ್ದೀಯಾ, ನಾನು ಅಲ್ಲ’ : ಜನಾರ್ದನ ರೆಡ್ಡಿ ವಿರುದ್ಧ ಶಿವರಾಜ್‌ ತಂಗಡಗಿ ವಾಗ್ದಾಳಿ

ಕೊಪ್ಪಳ: ಅಣ್ತಮ್ಮಾ ಜನಾರ್ದನರೆಡ್ಡಿ, ಮತ್ತದೇ ಪೊಳ್ಳು ನುಡಿಗಳ ಮೊರೆ ಹೋಗಿದ್ದೀಯ. ನಾನು ನನ್ನ ಸ್ವಂತ ಆಸ್ತಿ ಮಾರಿಕೊಂಡು ಚುನಾವಣೆ ಎದುರಿಸಿದವನು. ಚುನಾವಣೆಗಾಗಿ ಯಾರ ಮುಂದೆಯೂ ಕೈ ಚಾಚಿದವನಲ್ಲ. ಅದು ನಿನಗೂ ಚೆನ್ನಾಗಿ ಗೊತ್ತಿದೆ ಎಂದು ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.

ಜನಾರ್ದನ ರೆಡ್ಡಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ ಸಾಮಾಜಿಕ ಜಾಲತಾಣ ‘X’ನಲ್ಲಿ ಪೋಸ್ಟ್ ಮಾಡಿರುವ ಅವರು, ಎರಡು ದಿನ ಹುಡುಕಾಡಿ ತಡಕಾಡಿ ಒಂದು ವಿಡಿಯೋ ಹಾಕಿದ್ದೀಯ. ಸರಿ ಇದೆ. ಆದರೆ, ನಾನು ಮಾತನಾಡಿರುವ ಮಾತಿಗೂ ನೀನು ಹೇಳಿರುವುದಕ್ಕೂ ಸಾಸಿವೆ ಕಾಳಿನಷ್ಟಾದರೂ ಸಂಬಂಧವಿದೆಯೇ? ನನ್ನ ಯಾವ ಮಾತನ್ನು ಎಲ್ಲಿಗೆ ಜೋಡಿಸಿ ಮೈಲೇಜ್ ಪಡೆಯಲು ಯತ್ನಿಸುತ್ತಿದ್ದೀಯಾ? ಎಂದು ಕುಟುಕಿದ್ದಾರೆ.

‘ನಾನು ನಿನ್ನ ಗಣಿ ಹಣದಿಂದ ಗೆದ್ದಿದ್ದೇನೆ. ನಿನ್ನ ಆಶೀರ್ವಾದ ಗೆದ್ದಿದ್ದೇನೆ ಎಂದೆಲ್ಲಾ ಬೊಗಳೆ ಬಿಟ್ಟಿರುವೆ. ಚುನಾವಣೆ ಸಂದರ್ಭದಲ್ಲಿ ನಾನು ಎಷ್ಟು ಆಸ್ತಿ ಮಾರಾಟ ಮಾಡಿ ಚುನಾವಣೆಯನ್ನು ಎದುರಿಸಿದ್ದೇನೆ ಎಂಬುದು ನಿನಗೆ ಗೊತ್ತಿಲ್ಲವೇ? ನಿನ್ನ ಆಪ್ತ ಸಹಾಯಕನ ಮೂಲಕ ನನ್ನ ಆಸ್ತಿ ನಗದೀಕರಣ ಮಾಡಿಸಿದೆ. ನನ್ನ ಆಸ್ತಿ ನಗದೀಕರಣಕ್ಕೆ ಮಧ್ಯವರ್ತಿಯಾಗಿ ನೆರವಾಗಿದ್ದೆ ಅನ್ನೋದು ಬಿಟ್ಟರೆ ಬೇರೇನಿದೆ?’ ಎಂದು ಪ್ರಶ್ನಿಸಿದ್ದಾರೆ.

‘ಸಾಸಿವೆ ಕಾಳಿನಷ್ಟು ಸಹಾಯವನ್ನೂ ಬೆಟ್ಟದಂತೆ ನೆನೆಸುವವನು ನಾನು.‌ ಹೀಗಾಗಿಯೇ ತುರ್ತು ಸಮಯದಲ್ಲಿ ನನ್ನ ಆಸ್ತಿ‌ ನಗದೀಕರಣಕ್ಕೆ ನೆರವಾದ ನಿನಗೆ ತುಂಬು ಸಭೆಯಲ್ಲಿ ಮನ ಬಿಚ್ಚಿ ಧನ್ಯವಾದ ತಿಳಿಸಿದ್ದೇನೆ. ಆದರೆ ಅದನ್ನೇ ಬೇರೆ ರೀತಿ ಬಿಂಬಿಸಿ ಪೋಸು ಕೊಡುತ್ತಿದ್ದೀಯ. ಪಕ್ಷೇತರ ಶಾಸಕನಾಗಿದ್ದ ನಾನು, ನೀನು ಹೇಳಿದ ಪಕ್ಷಕ್ಕೆ ಬೇಷರತ್ ಬೆಂಬಲ ಕೊಟ್ಟೆ. ನನ್ನ ಅಡ್ಡ ಇಟ್ಟುಕೊಂಡು ನೀನು ಮಂತ್ರಿಯಾದೆ. ನಿನ್ನ ಸಹೋದರ, ಸ್ನೇಹಿತ ಎಲ್ಲರೂ ಅಧಿಕಾರದ ಪಡಸಾಲೆಗೆ ಬಂದಿರಿ ಎಂದು ಹೇಳಿದ್ದಾರೆ.

‘ಹಳೆಯ ವಿಚಾರ ಕೆದಕ್ಕಿದ್ದೀಯಲ್ಲಪ್ಪ. ನೀನೇ ನಿನ್ನ ಬಾಯಲ್ಲಿ ದಕ್ಷಿಣ ಭಾರತದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ನಾನು ಕಾರಣವಲ್ಲ. ಭೋವಿ ಸಮಾಜದ ಶಿವರಾಜ ತಂಗಡಗಿ, ಗೂಳಿಹಟ್ಟಿ ಶೇಖರ್, ವೆಂಕಟರಮಣಪ್ಪ ಕಾರಣ ಎಂದಿದ್ದೀಯಲ್ಲ. ಅದು ಮರೆತು ಹೋಯಿತೇ ಅಥವಾ ಮರೆತಂತೆ ನಾಟಕವೇ? ಹಾಗಾದರೆ ನಮ್ಮ ಬೆಂಬಲ ಹಾಗೂ ಕನಕಗಿರಿ ಕ್ಷೇತ್ರದ ಜನತೆಯ ಭಿಕ್ಷೆಯಿಂದಲೇ ನೀನು, ನಿನ್ನ ಸಹೋದರ ಸಚಿವರಾಗಿದ್ದಲ್ಲವೇ? ಅದನ್ನೂ ಹೇಳಿಬಿಡು’ ಎಂದು ಛೇಡಿಸಿದ್ದಾರೆ.

‘ಆ ದಿನ ನಿನ್ನ ಕ್ಷೇತ್ರಕ್ಕೆ ನನ್ನನ್ನು ಬಲವಂತವಾಗಿ ಆಹ್ವಾನಿಸಿದ್ದೇ ನೀನು. ಸಾಸಿವೆ ಕಾಳಷ್ಟು ಸಹಾಯವನ್ನೂ ನೆನೆಯಬೇಕಿರುವುದು ಧರ್ಮ, ನೆನೆದಿದ್ದೇನೆ. ಅದನ್ನೂ ತಿರುಚಿ ದುರ್ಲಾಭ ಪಡೆದುಕೊಳ್ಳಲು ಯತ್ನಿಸುತ್ತಿದ್ದೀಯಲ್ಲಾ, ನಿನ್ನ ಏನನ್ನಬೇಕು? ರಾಜ್ಯಸಭಾ ಚುನಾವಣೆ ಸಂದರ್ಭದಲ್ಲಿ ನೀನು ಎಷ್ಟು ಬಾರಿ ನನ್ನ ಸಂಪರ್ಕಿಸಿದ್ದೆ? ನಮ್ಮ ಅಭ್ಯರ್ಥಿಗೆ ಬೆಂಬಲ‌ ನೀಡುತ್ತೇನೆ ಎಂದು ಎಷ್ಟು ಬಾರಿ ಗೋಗರೆದೆ. ಎಲ್ಲಿ ಯಾವ ರೀತಿ ಸಹಾಯ ಪಡೆದೆ ಎಂಬುದನ್ನು ಹೇಳಿಬಿಡು. ನಿನಗೆ ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿ ನೆನಪಾಗಲಿಲ್ಲವೇ?’ ಎಂದು ತಿರುಗೇಟು ನೀಡಿದ್ದಾರೆ.

‘ನಿಮ್ಮ ಕ್ಷೇತ್ರಕ್ಕೆ ಹರಿದು ಬಂದ ಅನುದಾನ ಸುಮ್ಮನೆ ಬಂತೇ? ಅನುದಾನಕ್ಕೆ ಅಂಗಾಲಾಚಿದೆಯಲ್ಲ. ನಿನ್ನ ಕ್ಷೇತ್ರಕ್ಕೆ ಬಂದ ಅನುದಾನದಲ್ಲಿ ನನ್ನ ಕೊಡುಗೆ ಇಲ್ಲವೇ? ನೀನು ನನ್ನ ಋಣದಲ್ಲಿದ್ದೀಯೇ ಹೊರತು ನಾನು ಅಲ್ಲ. ಉಪಕಾರ ಸ್ಮರಣೆ ಇಲ್ಲದ ಕೃತಘ್ನ ನೀನು. ರಾಜಕೀಯದಲ್ಲಿ ಕಾಲಕ್ಕೆ ತಕ್ಕಂತೆ ಮಾತು ಬದಲಾಯಿಸುವ ಊಸರವಳ್ಳಿ. ನೀನು ಎಷ್ಟೇ ಸುಳ್ಳು ಹೇಳಿದರು ಜನರಿಗೆ ಸತ್ಯ ತಿಳಿದಿದೆ’ ಎಂದು ಅವರು ಆರೋಪಿಸಿದ್ದಾರೆ.

‘ಮೊದಲು ಸಹಾಯ ಮಾಡಿದವರನ್ನು ನೆನೆಯುವುದು ಕಲಿ. ನಿನ್ನ ಸಚಿವನಾಗಿ ಮೆರೆಸಿದ ಯಡಿಯೂರಪ್ಪ ಅವರಿಗೆ ಬೆನ್ನಿಗೆ ಚೂರಿ ಹಾಕಿದವನು ನೀನು. ಬಿಜೆಪಿಯನ್ನೇ ಮುಗಿಸಲು ಹೊರಟವನು’ ಎಂದು ತಂಗಡಗಿ ಆರೋಪಿಸಿದ್ದಾರೆ.

‘ಕನಕಗಿರಿಯಲ್ಲಿ ನನ್ನ ವಿರುದ್ಧ ನಿಂತಿದ್ದ ಬಿಜೆಪಿ ಅಭ್ಯರ್ಥಿಗೆ ಬಿಟ್ಟು ನನಗೆ ಆರ್ಥಿಕ ನೆರವಾದೆ ಎಂದು ಬುರುಡೆ ಬಿಡುತ್ತಿದ್ದೀಯ. ಹಾಗಾದರೆ ಸ್ವಂತ ಪಕ್ಷ ಮುಗಿಸುವ ಖಯಾಲಿ ಅಂದಿನಿಂದಲೇ ಇತ್ತು ಎಂಬುದನ್ನು ಒಪ್ಪಿಕೊಳ್ಳುತ್ತಿದ್ದೀಯಾ?’ ಎಂದು ಅವರು ಪ್ರಶ್ನಿಸಿದ್ದಾರೆ.

‘ಒಂದು ಸುಳ್ಳು ಹೇಳಿದರೆ ಅದನ್ನು ಮುಚ್ಚಿಕೊಳ್ಳಲು ನೂರು ಹೇಳಬೇಕಾಗುತ್ತದೆ. ನಿನಗೆ ಮಾನ ಮರ್ಯಾದೆ ಇದ್ದರೆ ಜೈಲಿಗೆ ಯಾಕೆ ಹೋದೆ? ಬಿಜೆಪಿ ವಿರುದ್ಧ ಪಕ್ಷ ಯಾಕೆ ಕಟ್ಟಿದೆ? ಶ್ರೀರಾಮುಲು ಮುಗಿಸಲು ಷಡ್ಯಂತ್ರ ಯಾಕೆ ಮಾಡಿದೆ? ಸ್ವಂತ ತಮ್ಮನನ್ನೇ ಯಾಕೆ ಸೋಲಿಸಿದೆ ಹೇಳು’ ಎಂದು ತಂಗಡಗಿ ಸವಾಲು ಹಾಕಿದ್ದಾರೆ.

‘ಇದೆಲ್ಲಾ ಪ್ರಶ್ನೆಗೆ ಉತ್ತರಿಸಿ ನಿನ್ನ ಮೊದಲ ಸವಾಲಿನಂತೆ ನಾಳೆಯೇ ರಾಜೀನಾಮೆ ನೀಡು. ಬೆನ್ನಲ್ಲೇ ನಾನೂ ರಾಜೀನಾಮೆ‌ ನೀಡುತ್ತೇನೆ. ಮುಂದಿನದ್ದು ಉಪ ಚುನಾವಣಾ ಕಣದಲ್ಲೇ ಚರ್ಚೆಯಾಗಲಿ’ ಎಂದು ಅವರು ಹೇಳಿದ್ದಾರೆ.

Tags

Shivaraj ThangadgiJanardhana Reddy
share
ವಾರ್ತಾಭಾರತಿ
ವಾರ್ತಾಭಾರತಿ
Next Story
X