Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ನಾಮಫಲಕದಲ್ಲಿ‌ ಶೇ.60ರಷ್ಟು ಕನ್ನಡ ಬಳಕೆ;...

ನಾಮಫಲಕದಲ್ಲಿ‌ ಶೇ.60ರಷ್ಟು ಕನ್ನಡ ಬಳಕೆ; ಕಠಿಣ ನಿಯಮ ರೂಪಿಸುವಂತೆ ಸಚಿವ ಶಿವರಾಜ್ ತಂಗಡಗಿ ಸೂಚನೆ

ವಾರ್ತಾಭಾರತಿವಾರ್ತಾಭಾರತಿ30 Jan 2025 5:10 PM IST
share
ನಾಮಫಲಕದಲ್ಲಿ‌ ಶೇ.60ರಷ್ಟು ಕನ್ನಡ ಬಳಕೆ; ಕಠಿಣ ನಿಯಮ ರೂಪಿಸುವಂತೆ ಸಚಿವ ಶಿವರಾಜ್ ತಂಗಡಗಿ ಸೂಚನೆ

ಬೆಂಗಳೂರು : ರಾಜ್ಯಾದ್ಯಂತ ಎಲ್ಲಾ ವ್ಯಾಪಾರ ಉದ್ದಿಮೆ, ಶಿಕ್ಷಣ ಸಂಸ್ಥೆ, ಅಂಗಡಿ ಮುಂಗಟ್ಟುಗಳ ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಅಳವಡಿಕೆ‌ಗೆ ಕಠಿಣವಾದ ಅಂತಿಮ ಕರಡು ನಿಯಮ ರೂಪಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ‌ ಶಿವರಾಜ್.ಎಸ್.ತಂಗಡಗಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಗುರುವಾರ ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕೈಗಾರಿಕೆ ಇಲಾಖೆ,‌ ಗೃಹ ಇಲಾಖೆ ಹಾಗೂ ಕಾನೂನು, ಶಾಲಾ ಶಿಕ್ಷಣ, ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧಿಕಾರಗಳ ಜತೆ ಸಚಿವರು ಸಭೆ ನಡೆಸಿ ಈ ಸೂಚನೆ ನೀಡಿದ್ದಾರೆ.

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ವಿಧೇಯಕ ವನ್ನು ಸಮರ್ಪಕ ಅನುಷ್ಠಾನ ಆಗಲೇಬೇಕು. ಕೆಲವೆಡೆ ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಬಳಕೆ ಆಗಿಲ್ಲ. ಹೀಗಾಗಿ ಕಠಿಣವಾದ ಕ್ರಮ ಆಗಬೇಕು. ಶೀಘ್ರವೇ ನಿಯಮಗಳ ಆದೇಶ ಹೊರಡಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪೊಲೀಸರನ್ನೊಳಗೊಂಡ ಟಾಸ್ಕ್ ಫೋರ್ಸ್‌ ರಚನೆ, ಬಿಬಿಎಂಪಿ ವಲಯಗಳಲ್ಲಿ ಜಾಗೃತ ವಾಹನಗಳ ಬಳಕೆ, ರಾಜ್ಯಾದ್ಯಂತ ಸಾರ್ವಜನಿಕರಲ್ಲಿ ನಾಮ ಫಲಕದಲ್ಲಿ ಶೇ.60ರಷ್ಟು ಕನ್ನಡ ಬಳಕೆ ಬಗ್ಗೆ ಜಾಗೃತಿ ಮೂಡಿಸಬೇಕು. ವಿಧೇಯಕ ಪರಿಣಾಮಕಾರಿ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯತಿ ಮಟ್ಟದಲ್ಲಿ ಸಮಿತಿ ರಚನೆಯಾಗಬೇಕು ಎಂಬ ಸಭೆಯಲ್ಲಿ ಚರ್ಚೆ ನಡೆಸಲಾಯಿತು.

ಸಭೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ್ ಬಿಳಿಮಲೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಡಾ.ಎನ್.ಮಂಜುಳಾ, ನಿರ್ದೇಶಕರಾದ ಡಾ.ಕೆ.ಧರಣಿದೇವಿ ಮಾಲಗತ್ತಿ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಡಾ.ಸಂತೋಷ್ ಹಾನಗಲ್, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ಕಾನೂನು, ಕೈಗಾರಿಕೆ, ಕಾರ್ಮಿಕ ಇಲಾಖೆ ಸೇರಿದಂತೆ ಹಲವು ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

Tags

Shivraj Thandagi
share
ವಾರ್ತಾಭಾರತಿ
ವಾರ್ತಾಭಾರತಿ
Next Story
X