Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಕಾಂತರಾಜು ವರದಿಯಲ್ಲಿ ಲೋಪಗಳಿದ್ದರೆ...

ಕಾಂತರಾಜು ವರದಿಯಲ್ಲಿ ಲೋಪಗಳಿದ್ದರೆ ಸರಿಪಡಿಸೋಣ : ಸಚಿವ ಶಿವರಾಜ್ ತಂಗಡಗಿ

"ವರದಿ ನೋಡುವ ಮೊದಲೇ ವಿರೋಧಿಸುವುದು ಸರಿಯಲ್ಲ"

ವಾರ್ತಾಭಾರತಿವಾರ್ತಾಭಾರತಿ1 Feb 2025 10:27 PM IST
share
ಕಾಂತರಾಜು ವರದಿಯಲ್ಲಿ ಲೋಪಗಳಿದ್ದರೆ ಸರಿಪಡಿಸೋಣ : ಸಚಿವ ಶಿವರಾಜ್ ತಂಗಡಗಿ

ಬೆಂಗಳೂರು: ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಎಚ್.ಕಾಂತರಾಜು ಅವರ ವರದಿಯಲ್ಲಿ ಯಾವುದೇ ಲೋಪಗಳಿದ್ದರೆ ಸರಿಪಡಿಸೋಣ, ವರದಿ ನೋಡುವ ಮೊದಲೇ ಅದಕ್ಕೆ ವಿರೋಧಪಡಿಸುವುದು ಸರಿಯಲ್ಲ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಶ್ರೀ ಮುಕ್ತಾನಂದ ಮಹಾಸ್ವಾಮೀಜಿ ಅವರ ದಿವ್ಯ ಸಾನಿಧ್ಯದಲ್ಲಿ ನಡೆದ ಮಡಿವಾಳ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಹಿಂದಿನ ಸರ್ಕಾರಗಳು ಅಧಿಕಾರಕ್ಕೆ ಬಂದರೂ ವರದಿ ಸ್ವೀಕಾರ ಮಾಡಲಿಲ್ಲ. ನಾವು ವರದಿ‌ ಸ್ವೀಕಾರ ಮಾಡುವುದಿಲ್ಲ ಎಂದು ಕೆಲವರು ಟೀಕೆ ಮಾಡಿದರು. ಆದರೆ ವರದಿಯನ್ನು ಸ್ವೀಕಾರ ಮಾಡಲು ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಬೇಕಾಯಿತು. ಖಂಡಿತವಾಗಿಯೂ ಸಚಿವ ಸಂಪುಟ ಸಭೆಗೆ ವರದಿಯನ್ನು ತರುತ್ತೇವೆ. ತುಳಿತಕ್ಕೊಳಗಾದ ಸಮುದಾಯಗಳ ಬಗ್ಗೆ ಯಾರಾದರೂ ಚಿಂತನೆ ಮಾಡುತ್ತಿದ್ದರೆ ಅದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತ್ರ. ಯಾವುದೇ ಕಾರಣಕ್ಕೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕುಗ್ಗುವ ಪ್ರಶ್ನೆಯೇ ಇಲ್ಲ ಎಂದರು.

ಇನ್ನು ಮಡಿವಾಳ ಸಮಾಜ ಒಗ್ಗಟ್ಟನ್ನು ಪ್ರದರ್ಶಿಸಬೇಕು‌. ಅಂಬೇಡ್ಕರ್ ಅವರು ಹೋರಾಟ, ಶಿಕ್ಷಣ ಮತ್ತು ಸಂಘಟನೆ ಬೇಕು ಎಂದಿದ್ದಾರೆ. ಅದರಂತೆ ಸಣ್ಣ ಸಮುದಾಯಗಳು ಹೋರಾಟ, ಶಿಕ್ಷಣ ಹಾಗೂ ಸಂಘಟನೆಗೆ ಆದ್ಯತೆ ನೀಡಬೇಕು. ಸಮಾಜಗಳಲ್ಲಿ ಒಗ್ಗಟ್ಟನ್ನು ಪ್ರದರ್ಶನ ಮಾಡಿದಾಗ ಸಮಾಜ ಬಲಿಷ್ಠವಾಗಲಿದೆ. ಜೊತೆಗೆ ಸಂಘಟನೆಯಿಂದ ಸಮುದಾಯಕ್ಕೆ ಬೇಕಾದ ಎಲ್ಲಾ ಸವಲತ್ತುಗಳು ಸಿಗಲಿದೆ ಎಂದು ತಿಳಿಸಿದರು.

ಇನ್ನು ಅನುಭವ ಮಂಟಪ ಕಟ್ಟುವಲ್ಲಿ ಮಡಿವಾಳ ಮಾಚಿದೇವರ ಕಾಯಕ ಅತಿ ಮಹತ್ವದ್ದು. ದೇಶದ ನಾನಾ ಭಾಗಗಳಿಂದ ಕಲ್ಯಾಣಕ್ಕೆ ಬರುವವರಿಗೆ ಪರೀಕ್ಷಿಸಿ, 'ಮಡಿ' ಹಾಸಿ ಸ್ವಾಗತಿಸುವ ಕೆಲಸ ಅವರದ್ದಾಗಿತ್ತು. ಮಾಚಿದೇವರ ಪರೀಕ್ಷೆಗೊಳಪಡದ ಹೊರತು ಕಲ್ಯಾಣಪುರ ಪ್ರವೇಶದ ಪ್ರಮಾಣ ಪತ್ರ ಹೊರಗಿನಿಂದ ಬರುವವರಿಗೆ ಸಿಗುತ್ತಿರಲಿಲ್ಲವೆಂಬುದು ಮಾಚಯ್ಯನ ಮಹಾ ಘನತೆಗೆ ಸಾಕ್ಷಿ ಎಂದು ಶ್ಲಾಘಿಸಿದರು.

ಸಮಾರಂಭದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ್ ಬಿಳಿಮಲೆ, ಇಲಾಖೆ ನಿರ್ದೇಶಕಿ ಡಾ.ಧರಣಿದೇವಿ ಮಾಲಗತ್ತಿ, ಮುಖ್ಯಮಂತ್ರಿಗಳ ವೈದ್ಯಕೀಯ ಸಲಹೆಗಾರ ಡಾ.ಎಚ್.ರವಿಕುಮಾರ್, ಮಡಿವಾಳ ಸಂಘದ ರಾಜ್ಯಾಧ್ಯಕ್ಷರಾದ ಸಿ.ನಂಜಪ್ಪ, ಶಾಶ್ವತ ಆಯೋಗದ ಮಾಜಿ ಸದಸ್ಯ ಜಿ.ಡಿ.ಗೋಪಾಲ್, ಇಲಾಖೆ ಜಂಟಿ ನಿರ್ದೇಶಕ ಬಲವಂತರಾಯ ಪಾಟೀಲ್‌ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X