Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ರಾಜ್ಯದಲ್ಲಿ ವೈದ್ಯರು, ಸಿಬ್ಬಂದಿಗಳ...

ರಾಜ್ಯದಲ್ಲಿ ವೈದ್ಯರು, ಸಿಬ್ಬಂದಿಗಳ ಕೊರತೆ: ಕೇಂದ್ರ, ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್

ವಾರ್ತಾಭಾರತಿವಾರ್ತಾಭಾರತಿ9 Jan 2024 7:47 PM IST
share
ರಾಜ್ಯದಲ್ಲಿ ವೈದ್ಯರು, ಸಿಬ್ಬಂದಿಗಳ ಕೊರತೆ: ಕೇಂದ್ರ, ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್

ಬೆಂಗಳೂರು: ರಾಜ್ಯದ ಸರಕಾರಿ ಆಸ್ಪತ್ರೆಗಳಲ್ಲಿ ವೈದ್ಯರು ಸೇರಿದಂತೆ 16,500 ವೈದ್ಯಕೀಯ ಸಿಬ್ಬಂದಿ ಹುದ್ದೆಗಳು ಖಾಲಿ ಇರುವುದು ಹಾಗೂ ಆಸ್ಪತ್ರೆಗಳಲ್ಲಿ ಮೂಲ ಸೌಕರ್ಯ ಕೊರತೆಗೆ ಸಂಬಂಧಿಸಿದಂತೆ ದಾಖಲಿಸಿಕೊಂಡ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಸಂಬಂಧ ಹೈಕೋರ್ಟ್ ರಾಜ್ಯ ಮತ್ತು ಕೇಂದ್ರ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿ ಆದೇಶಿಸಿದೆ.

ರಾಜ್ಯದಲ್ಲಿ ವೈದ್ಯಕೀಯ ಸಿಬ್ಬಂದಿ ಕೊರತೆ ಕುರಿತಂತೆ ಮಾಧ್ಯಮಗಳ ವರದಿ ಆಧರಿಸಿ ದಾಖಲಿಸಿಕೊಂಡಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ, ಈ ಆದೇಶ ನೀಡಿದೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮತ್ತು ರಾಜ್ಯ ಆರೋಗ್ಯ ಇಲಾಖೆಗೆ ನೋಟಿಸ್ ಜಾರಿ ಮಾಡಿ ಆಕ್ಷೇಪಣೆ ಸಲ್ಲಿಸುವಂತೆ ಸೂಚನೆ ನೀಡಿ ವಿಚಾರಣೆ ಮುಂದೂಡಿದೆ.

ಪ್ರಕರಣವೇನು?: ಭಾರತೀಯ ವಾಣಿಜ್ಯೋದ್ಯಮ ಮಹಾ ಸಂಘಗಳ ಒಕ್ಕೂಟ 2023ರ ಅ.11ರಂದು ಕರ್ನಾಟಕ ವಿಷನ್ ಅಡಿ 1 ಟ್ರಿಲಿಯನ್ ಆರ್ಥಿಕತೆ ವರದಿ ಬಿಡುಗಡೆ ಮಾಡಿತ್ತು. ಈ ವರದಿಯಲ್ಲಿ 454 ಗ್ರಾಮೀಣ ಭಾಗದಲ್ಲಿ ಪ್ರಾರ್ಥಮಿಕ ಆರೋಗ್ಯ ಕೇಂದ್ರಗಳ ಕೊರತೆಯಿದೆ. ಇದರಿಂದ ಗ್ರಾಮೀಣ ಭಾಗಗಳಲ್ಲಿ ಉತ್ತಮ ಸೇವೆ ಲಭ್ಯವಾಗಬೇಕಿದೆ. ರಾಜ್ಯದಲ್ಲಿ 723 ಎಂಬಿಬಿಎಸ್ ವೈದ್ಯರು, 7,492 ಶುಶ್ರೂಷಕಿಯರು, 1,517 ಲ್ಯಾಬ್ ಟೆಕ್ನಿಷಿಯನ್ಸ್, 1,517 ಫಾರ್ಮಸಿ ಸಿಬ್ಬಂದಿ, 1752 ಸಹಾಯಕರು, 3253 ಗ್ರೂಪ್ ಡಿ ನೌಕರರು ಸೇರಿ ಹಲವು ಸಿಬ್ಬಂದಿ ಕೊರತೆಯಿದೆ ಎಂದು ಪ್ರಕಟವಾಗಿದೆ.

ಇದರಲ್ಲಿ ದೊಡ್ಡ ಮಟ್ಟದ ಸಾರ್ವಜನಿಕ ಹಿತಾಸಕ್ತಿ ಅಡಗಿದೆ. ಹೀಗಾಗಿ ಅರ್ಜಿ ದಾಖಲಿಸಿಕೊಂಡು ನ್ಯಾಯಾಲಯದ ಮುಂದೆ ಪಟ್ಟಿ ಮಾಡಲು ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್‍ಗೆ ಸೂಚನೆ ನೀಡಿತ್ತು.

ಅಲ್ಲದೇ, ರಾಜ್ಯದಲ್ಲಿ ಮಂಜೂರಾಗಿರುವ ಎಲ್ಲ ವೃದ್ಯಕೀಯ ಸಿಬ್ಬಂದಿ ಭರ್ತಿ ಮಾಡಬೇಕು. ಜೊತೆಗೆ, ಅಗತ್ಯ ವೈದ್ಯಕೀಯ ಪರಿಕರಗಳನ್ನು ಖರೀದಿ ಮಾಡುವುದಕ್ಕೆ ಬಜೆಟ್‍ನಲ್ಲಿ ಹಣ ಮೀಸಲಿಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ. ಅಲ್ಲದೇ, ಗ್ರಾಮೀಣ ಭಾಗಗಳಲ್ಲಿ ಸಾಂಕ್ರಾಮಿಕ ರೋಗಗಳು ಹೆಚ್ಚಳವಾಗುತ್ತಿದ್ದು, ವೈದ್ಯರ ಕೊರತೆಯಿಂದ ಗ್ರಾಮಗಳ ಜನ ಸಂಕಷ್ಟಕ್ಕೆ ಸಿಲುಕುವಂತಾಗಲಿದೆ. ಹೀಗಾಗಿ, ಸಿಬ್ಬಂದಿ ನೇಮಕ ಮಾಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X