Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಹಾಲು ಉತ್ಪಾದನೆಯಲ್ಲಿ ಕರ್ನಾಟಕ ಎರಡನೇ...

ಹಾಲು ಉತ್ಪಾದನೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ದಿಲ್ಲಿಯಲ್ಲಿ ʼನಂದಿನಿʼ ಉತ್ಪನ್ನಗಳ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ21 Nov 2024 7:30 PM IST
share
ಹಾಲು ಉತ್ಪಾದನೆಯಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಹೊಸದಿಲ್ಲಿ: ದೇಶದಲ್ಲೆ ಹಾಲು ಉತ್ಪಾದನೆಯಲ್ಲಿ ಗುಜರಾತ್ ಮೊದಲ ಸ್ಥಾನದಲ್ಲಿದ್ದರೆ ಕರ್ನಾಟಕ ರಾಜ್ಯವು ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಗುರುವಾರ ಹೊಸದಿಲ್ಲಿಯಲ್ಲಿ ಕರ್ನಾಟಕ ಹಾಲು ಉತ್ಪಾದಕರ ಮಹಾಮಂಡಲ(ಕೆಎಂಎಫ್) ಹಾಗೂ ಮಂಡ್ಯ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ವತಿಯಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ನಂದಿನಿ ಬ್ರ್ಯಾಂಡ್‍ನ ವಿವಿಧ ಶ್ರೇಣಿಯ ಹಾಲು ಬಿಡುಗಡೆ ಮಾಡಿ ಅವರು ಮಾತನಾಡಿದರು.

ದಿಲ್ಲಿಯಲ್ಲಿ ಕೆ.ಎಂ.ಎಫ್ ಮತ್ತು ಮಂಡ್ಯ ಹಾಲು ಒಕ್ಕೂಟ ಸೇರಿ ವಿವಿಧ ಶ್ರೇಣಿಯ ಹಾಲನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಇಡೀ ದೇಶದಲ್ಲಿ ರೈತರ ಉಪಕಸುಬು ಪಶುಸಂಗೋಪನೆ. ಗುಜರಾತ್ ನಲ್ಲಿ ಕುರಿಯನ್ ಅವರು ಹಾಲು ಉತ್ಪಾದಕರ ಸಂಘವನ್ನು ಪ್ರಾರಂಭ ಮಾಡಿದರು ಎಂದು ಅವರು ಹೇಳಿದರು.

ಹಿಂದೆ ಪಶುಸಂಗೋಪನಾ ಸಚಿವನಾಗಿದ್ದು, ಒಂದು ವರ್ಷ ಕಾಲ ಕರ್ನಾಟಕ ಹಾಲು ಮಹಾಮಂಡಲದ ಅಧ್ಯಕ್ಷನೂ ಆಗಿದ್ದೆ ಎಂದು ಸ್ಮರಿಸಿದ ಮುಖ್ಯಮಂತ್ರಿ, ಪಶುಸಂಗೋಪನಾ ಸಚಿವನಾಗಿದ್ದಾಗಲೇ ಹಾಲು ಉತ್ಪಾದಕರಿಗೆ ಶೋಷಣೆಯಾಗುತ್ತಿದ್ದುದ್ದನ್ನು ಮನಗಂಡು ಶಾಶ್ವತ ಮಾರುಕಟ್ಟೆ ಕಲ್ಪಿಸಲು ಹಾಲು ಉತ್ಪಾದಕರ ಸಂಘಗಳನ್ನು ರಚಿಸಲಾಯಿತು ಎಂದರು.

ಹಾಲು ಉತ್ಪಾದಕರಿಗೆ ಪ್ರೊತ್ಸಾಹಧನ: ರಾಜ್ಯದಲ್ಲಿ ಪ್ರತಿದಿನ 92 ರಿಂದ 93 ಲಕ್ಷ ಲೀ. ಹಾಲು ಉತ್ಪಾದನೆಯಾಗುತ್ತಿದೆ. ರೈತರಿಂದ ಲೀ.ಗೆ 32 ರೂ.ಗಳಿಗೆ ಹಾಲು ಖರೀದಿಸಲಾಗುತ್ತಿದ್ದು, ರಾಜ್ಯ ಸರಕಾರ ಕ್ಷೀರಧಾರೆ ಯೋಜನೆಯಡಿ ಹಾಲು ಉತ್ಪಾದಕರಿಗೆ ಪ್ರತಿ ಲೀಟರಿಗೆ 5 ರೂ.ಗಳ ಪ್ರೊತ್ಸಾಹಧನವನ್ನು ನೀಡುತ್ತಿದೆ ಎಂದು ಅವರು ಹೇಳಿದರು.

ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕಾಲದಲ್ಲಿ 2 ರೂ. ಇದ್ದ ಪ್ರೋತ್ಸಾಹಧನ, ನಂತರ 3 ರೂ. ಆಯಿತು. ನಾನು ಮುಖ್ಯಮಂತ್ರಿಯಾದ ನಂತರ ಇದನ್ನು 5 ರೂ.ಗಳಿಗೆ ಹೆಚ್ಚಿಸಲು ಘೋಷಣೆ ಮಾಡಲಾಯಿತು. ಪ್ರೋತ್ಸಾಹಧನಕ್ಕಾಗಿ ಪ್ರತಿ ದಿನ 5 ಕೋಟಿ ರೂ.ಗಳನ್ನು ಸರಕಾರ ವೆಚ್ಚ ಮಾಡುತ್ತಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.

ರಾಜ್ಯದಲ್ಲಿ ಒಟ್ಟು 16 ಹಾಲು ಒಕ್ಕೂಟಗಳಿವೆ. ರಾಜ್ಯದಲ್ಲಿ ಅಂದಾಜು 1 ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದ್ದು, ಆಂಧ್ರಪ್ರದೇಶ, ಮಹಾರಾಷ್ಟ್ರಕ್ಕೆ ನಿತ್ಯ ತಲಾ 2.5 ಲಕ್ಷ ಲೀ.ಟರ್ ಹಾಲು ಪೂರೈಕೆಯಾಗುತ್ತಿದೆ. ಇದೀಗ ಆರಂಭಿಕ ಹಂತದಲ್ಲಿ 2.5 ಲಕ್ಷ ಲೀಟರ್ ಹಾಲು ಹೊಸದಿಲ್ಲಿಗೆ ಪೂರೈಸುವ ಯೋಜನೆ ರೂಪಿಸಲಾಗಿದೆ. ಇನ್ನು ಆರು ತಿಂಗಳೊಳಗೆ 5 ಲಕ್ಷ ಲೀಟರ್ ಗೆ ಏರಿಸುವ ಗುರಿ ನಮ್ಮದಾಗಿದೆ. ಹಾಲಿನ ಉತ್ಪಾದನೆಗಳಿಗೆ ಮಾರುಕಟ್ಟೆ ಬಹಳ ಮುಖ್ಯ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ಪಶುಸಂಗೋಪನೆ ಮತ್ತು ರೆಷ್ಮೆ ಸಚಿವ ವೆಂಕಟೇಶ್, ಕೃಷಿ ಸಚಿವ ಎನ್.ಚಲುವರಾಯಸ್ವಾಮಿ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್, ಕೆಎಂಎಫ್ ಅಧ್ಯಕ್ಷ ಭೀಮಾ ನಾಯಕ್, ರಾಜ್ಯ ಸಭಾ ಸದಸ್ಯ ಈರಣ್ಣ ಕರಾಡಿ, ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಕಾನೂನು ಸಲಹೆಗಾರ ಎ.ಎಸ್.ಪೊನ್ನಣ್ಣ, ಮಂಡ್ಯ ಹಾಲು ಒಕ್ಕೂಟದ ಅಧ್ಯಕ್ಷ ತಿಮ್ಮೇಗೌಡ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X