Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಜ್ಯ
  4. ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ |...

ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ | ಪ್ರಿಯಾಂಕ್‌ ಖರ್ಗೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ : ಸಿದ್ದರಾಮಯ್ಯ

"ಇದು ರಾಜಕೀಯ ದ್ವೇಷದಿಂದ ಮಾಡಿರುವ ಆರೋಪ"

ವಾರ್ತಾಭಾರತಿವಾರ್ತಾಭಾರತಿ1 Jan 2025 3:39 PM IST
share
ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣ | ಪ್ರಿಯಾಂಕ್‌ ಖರ್ಗೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ : ಸಿದ್ದರಾಮಯ್ಯ

ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್‌ ಖರ್ಗೆಯವರು ರಾಜೀನಾಮೆ ನೀಡುವ ಪ್ರಶ್ನೆ ಉದ್ಭವಿಸುವುದಿಲ್ಲ. ಇದು ರಾಜಕೀಯ ದ್ವೇಷದಿಂದ ಮಾಡಿರುವ ಆರೋಪ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬುಧವಾರ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್‌ ಖರ್ಗೆಯವರು ರಾಜೀನಾಮೆ ನೀಡಬೇಕೆಂಬ ಪ್ರತಿಪಕ್ಷಗಳ ಒತ್ತಾಯ ಮಾಡುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ , "ಆತ್ಮಹತ್ಯೆ ಮಾಡಿಕೊಂಡಿರುವ ಬೀದರ್‌ನ ಗುತ್ತಿಗೆದಾರನ ಡೆತ್ ನೋಟ್ ನಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆಯವರ ಹೆಸರಿರುವುದಿಲ್ಲ. ಈ ಪ್ರಕರಣದಲ್ಲಿ ಅವರ ಪಾತ್ರವಾಗಲಿ, ಸಾಕ್ಷ್ಯವಾಗಲಿ ಇಲ್ಲ. ಆದ್ದರಿಂದ ರಾಜಿನಾಮೆ ಕೊಡುವ ಪ್ರಶ್ನೆ ಉದ್ಭವಿಸುವುದಿಲ್ಲ. ಆದಾಗ್ಯೂ ಯಾವುದೇ ವಿಚಾರಣೆಗೆ ತಾನು ಸಿದ್ಧವಿರುವುದಾಗಿ ಸಚಿವರು ತಿಳಿಸಿದ್ದಾರೆ. ಆದರೆ ಇಂತಹದೇ ಪ್ರಕರಣದಲ್ಲಿ ಹಿಂದೆ ಬಿಜೆಪಿಯ ಕೆ.ಎಸ್.ಈಶ್ವರಪ್ಪಅವರ ಹೆಸರನ್ನು ಡೆತ್ ನೋಟ್ ನಲ್ಲಿ ಬರೆಯಲಾಗಿತ್ತು. ಪ್ರಕರಣದ ಸಂಬಂಧ ದಾಖಲಾಗಿರುವ ದೂರಿನ ತನಿಖೆಯನ್ನು ಸಿಐಡಿಗೆ ವಹಿಸಲಾಗಿದ್ದು, ವರದಿ ಬಂದ ನಂತರ ಸೂಕ್ತ ಕ್ರಮಕೈಗೊಳ್ಳಲಾಗುವುದು. ಇದು ರಾಜಕೀಯ ದ್ವೇಷದಿಂದ ಮಾಡಿರುವ ಆರೋಪ" ಎಂದು ತಿಳಿಸಿದರು.

ಬಿಜೆಪಿ ಯಾವುದೇ ಪ್ರಕರಣವನ್ನು ಸಿಬಿಐಗೆ ವಹಿಸಿಲ್ಲ :

ಬಿಜೆಪಿಯವರು ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಒತ್ತಾಯಿಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ರಾಜ್ಯದ ಪೊಲೀಸರ ಬಗ್ಗೆ ಬಿಜೆಪಿಯವರಿಗೆ ನಂಬಿಕೆಯಿಲ್ಲವೇ? ಬಿಜೆಪಿಯವರು ಅಧಿಕಾರದಲ್ಲಿದ್ದಾಗ , ಒಂದು ಪ್ರಕರಣವನ್ನೂ ಸಿಬಿಐಗೆ ವಹಿಸಿರಲಿಲ್ಲ. ಆದ್ದರಿಂದ ಸಿಬಿಐಗೆ ತನಿಖೆ ವಹಿಸಬೇಕೆಂಬ ಬೇಡಿಕೆ ಮುಂದಿರಿಸಲು ಬಿಜೆಪಿಯವರಿಗೆ ನೈತಿಕತೆ ಇಲ್ಲ ಎಂದು ತಿಳಿಸಿದರು.

ಸಿ.ಟಿ.ರವಿ ಪ್ರಕರಣ ಸಿಐಡಿ ತನಿಖೆ:

ಎಂಎಲ್‌ಸಿ ಸಿ.ಟಿರವಿಯವರು ರಾಜ್ಯಪಾಲರಿಗೆ ದೂರು ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಸಿ.ಟಿ.ರವಿಯವರ ಪ್ರಕರಣವನ್ನೂ ಸಿಐಡಿಗೆ ವಹಿಸಲಾಗಿದೆ. ಅವಾಚ್ಯ ಪದಬಳಕೆ ಆಗಿರುವ ಬಗ್ಗೆ ಎಫ್ ಎಸ್ ಎಲ್ ವರದಿ ಬರಲಿದೆ. ಮಹಿಳಾ ಸಚಿವರಿಗೆ ಅವಹೇಳನ ಮಾಡಿರುವ ಆರೋಪವಿದ್ದು, ಸಿ.ಟಿ.ರವಿಯವರ ಮೇಲೆ ದೂರು ದಾಖಲಾಗಿದೆ ಎಂದರು.

Tags

SiddaramaiahPriyank Kharge
share
ವಾರ್ತಾಭಾರತಿ
ವಾರ್ತಾಭಾರತಿ
Next Story
X